ಸಂಕನೂರ ಗೆಲುವಿಗೆ ಸಹಕರಿಸಿ: ರೂಪಾಲಿ ನಾಯ್ಕ

KannadaprabhaNewsNetwork |  
Published : Oct 18, 2026, 03:00 AM IST
ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಪರವಾಗಿ ಮಾಜಿ ಶಾಸಕಿ ರೂಪಾಲಿ ನಾಯ್ಕ ಅವರು ಮತಯಾಚಿಸಿದರು. | Kannada Prabha

ಸಾರಾಂಶ

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಕಾರವಾರ ನಗರ ಮಂಡಲ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಪರವಾಗಿ ಅವರು ಮಾಜಿ ಶಾಸಕಿ ರೂಪಾಲಿ ನಾಯ್ಕ ಅವರು ಮತಯಾಚನೆ ನಡೆಸಿದರು.

ಕಾರವಾರ: ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರಿಗೆ ಪದವೀಧರರು ಬೆಂಬಲ ನೀಡಿ ಗೆಲುವಿಗೆ ಸಹಕರಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಮನವಿ ಮಾಡಿದರು.

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಕಾರವಾರ ನಗರ ಮಂಡಲ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಪರವಾಗಿ ಅವರು ಮತಯಾಚನೆ ನಡೆಸಿದರು.

ಕಾರವಾರ ಜಿಲ್ಲಾ ವಕೀಲರ ಸಂಘ, ಜಿಲ್ಲಾ ನ್ಯಾಯಾಲಯದ ಸಿಬ್ಬಂದಿ, ಎಕ್ಸಿಸ್ ಬ್ಯಾಂಕ್, ಸೆಂಟ್ ಮಿಲಾಗ್ರಿಸ್ ಬ್ಯಾಂಕ್, ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿ ಹಾಗೂ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿದ ರೂಪಾಲಿ ನಾಯ್ಕ ಮತ್ತು ಬಿಜೆಪಿ ಮುಖಂಡರು, ಪದವೀಧರರನ್ನು ಭೇಟಿಯಾಗಿ ಅಭ್ಯರ್ಥಿಯ ಪರವಾಗಿ ಮತಯಾಚಿಸಿದರು.

ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದ ಅವರು, ಚುನಾವಣೆಯಲ್ಲಿ ಸಂಕನೂರ ಅವರ ಗೆಲುವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕೋರಿದರು.

ಹಿರಿಯ ನ್ಯಾಯವಾದಿ ನಾಗರಾಜ ನಾಯಕ, ಕಾರವಾರ ನಗರ ಮಂಡಲ ಅಧ್ಯಕ್ಷ ನಾಗೇಶ ಕುರುಡೇಕರ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಂಜಯ ಸಾಳುಂಕೆ, ನಗರಸಭೆ ಮಾಜಿ ಅಧ್ಯಕ್ಷ ರವಿರಾಜ ಅಂಕೋಲೆಕರ್, ಉಲ್ಲಾಸ್ ಕೇಣಿ, ಶಿಲ್ಪಾ ನಾಯ್ಕ, ಅಭಿ, ಅರುಣ್ ಹಬ್ಬು ಸೇರಿದಂತೆ ಬಿಜೆಪಿ ಮುಖಂಡರು ಪಾಲ್ಗೊಂಡಿದ್ದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಉಪಸ್ಥಿತಿಯಲ್ಲಿ ಇಂದು ಸಭೆ

ಕಾರವಾರ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಉಪಸ್ಥಿತಿಯಲ್ಲಿ ಅ. 18ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರದ ಶೇಜವಾಡ ಸದಾನಂದ ಪ್ಯಾಲೇಸ್‌ನಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ.ಸಭೆಯಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ, ಶಾಸಕರಾದ ಮಹೇಶ ಟೆಂಗಿನಕಾಯಿ, ವಿಧಾನಪರಿಷತ್ ಶಾಸಕ ಲಿಂಗರಾಜ ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಸೇರಿದಂತೆ ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್. ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

​ರೋಣ, ಸವಡಿಯಲ್ಲಿ ಸಂಕನೂರ ಪರ ಕಳಕಪ್ಪ ಬಂಡಿ ಮತಯಾಚನೆ
ಬ್ಯಾಡಗಿ ವೆಂಕಟೇಶ್ವರ ದೇವಸ್ಥಾನದ ಹುಂಡಿ ಕಳ್ಳತನಕ್ಕೆ ಯತ್ನ