ಮಾಗಡಿ: ರೈತರ ಪರ ಚಿಂತನೆ ಹೊಂದಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರನ್ನು ಬೆಂಬಲಿಸುವಂತೆ ಮಾಗಡಿ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚಿಗಳೂರು ಗಂಗಾಧರ್ ಹೇಳಿದರು.
ಮಾಗಡಿ: ರೈತರ ಪರ ಚಿಂತನೆ ಹೊಂದಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರನ್ನು ಬೆಂಬಲಿಸುವಂತೆ ಮಾಗಡಿ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚಿಗಳೂರು ಗಂಗಾಧರ್ ಹೇಳಿದರು.
ತಾಲೂಕಿನ ತಾಳೆಕೆರೆ ಗ್ರಾಮದಲ್ಲಿ ಸಂಸದ ಡಿ.ಕೆ.ಸುರೇಶ್ ಪರ ಮತಯಾಚಿಸಿ ಮಾತನಾಡಿದ ಅವರು, ಸಂಸದರಾಗಿ ಡಿ.ಕೆ.ಸುರೇಶ್ ತಮ್ಮ ಅವಧಿಯಲ್ಲಿ ತಾಲೂಕಿನಲ್ಲಿ ರೈತರ ಪರ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ನಿರಂತರ ವಿದ್ಯುತ್ ಸಂಪರ್ಕ, ಕಡಿಮೆ ವೆಚ್ಚದಲ್ಲಿ ಟಿಸಿ ವಿತರಣೆ, ಸತ್ಯಕಾಲದಿಂದ ಕಾವೇರಿ ನೀರನ್ನು ಮಂಚನಬೆಲೆ ಮತ್ತು ವೈಜಿಗುಡ್ಡ ಜಲಾಶಯಕ್ಕೆ ತಂದಿರುವುದು, ಎತ್ತಿನಹೊಳೆ ಮೂಲಕ ತಿಪ್ಪಗೊಂಡನಹಳ್ಳಿ ಮತ್ತು ಮಂಚನಬೆಲೆ ಜಲಾಶಯಕ್ಕೆ ನೀರು, ರೈತರಿಗೆ ಸಿಗಬೇಕಾದ ಭೂ ಮಂಜೂರಾತಿ ಮಾಡಿಸಲು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಪ್ರತಿ ಗ್ರಾಪಂಗಳಿಗೂ ಭೇಟಿ ನೀಡಿ ಅಲ್ಲಿನ ಸಮಸ್ಯೆಗಳನ್ನು ಅಧಿಕಾರಿಗಳಿಂದ ಬಗೆಹರಿಸುತ್ತಿದ್ದು, ಇಡೀ ದೇಶದಲ್ಲೇ ನರೇಗಾ ಯೋಜನೆಯಲ್ಲಿ ರಾಮನಗರ ಜಿಲ್ಲೆ ಪ್ರಥಮ ಸ್ಥಾನದಲ್ಲಿ ಬರಲು ಸಂಸದ ಡಿ.ಕೆ.ಸುರೇಶ್ ಶ್ರಮಿಸಿದ್ದಾರೆ. ಸಾಕಷ್ಟು ಯೋಜನೆಗಳು ಪ್ರಗತಿಯಲ್ಲಿದ್ದು ಅವನ್ನು ಪೂರ್ಣಗೊಳಿಸಲು ಮತ್ತೊಮ್ಮೆ ಡಿ.ಕೆ.ಸುರೇಶ್ ಅವರನ್ನು ಬೆಂಬಲಿಸಬೇಕಿದೆ ಎಂದು ಮನವಿ ಮಾಡಿದರು.
ಜಿಪಂ ಮಾಜಿ ಉಪಾಧ್ಯಕ್ಷೆ ದಿವ್ಯ ಗಂಗಾಧರ್ ಮಾತನಾಡಿ, ಸಂಸದ ಡಿ.ಕೆ.ಸುರೇಶ್ ನನ್ನ ಅವಧಿಯಲ್ಲಿ ನಮ್ಮ ಕ್ಷೇತ್ರಕ್ಕೆ ವಿವಿಧ ಇಲಾಖೆಗಳಿಂದ ನೂರಾರು ಕೋಟಿ ಅನುದಾನದಲ್ಲಿ ತಿಪ್ಪಸಂದ್ರ ಹೋಬಳಿಯನ್ನು ಮಾದರಿಯಾಗಿ ಮಾಡಲು ಸಹಕರಿಸಿದ್ದಾರೆ. ಹೋಬಳಿಯ ಪ್ರತಿ ಗ್ರಾಮಗಳಿಗೂ ತೆರಳಿ ಸಂಸದರ ಕಾರ್ಯ ವೈಖರಿ ಬಗ್ಗೆ ಮತದಾರರಿಗೆ ತಿಳಿಸಲಾಗುತ್ತಿದ್ದು ಮತ್ತೊಮ್ಮೆ ಸಂಸದರಾಗಿ ಆಯ್ಕೆಯಾಗುವುದರಲ್ಲಿ ಅನುಮಾನವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. ತಿಪ್ಪಸಂದ್ರ ಹೋಬಳಿ ವ್ಯಾಪ್ತಿಯಲ್ಲಿ ವಿವಿಧ ಗ್ರಾಮಗಳಲ್ಲಿ ಬಿರುಸಿನ ಮತಯಾಚನೆ ಮಾಡಲಾಯಿತು.
(ಪೋಟೋ ಕ್ಯಾಪ್ಷನ್)
ಮಾಗಡಿ ಮಾಗಡಿ ತಾಲೂಕಿನ ತಾಳೆಕೆರೆ ವ್ಯಾಪ್ತಿಯಲ್ಲಿ ಡಿ.ಕೆ.ಸುರೇಶ್ ಪರ ಮಾಗಡಿ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚಿಗಳೂರು ಗಂಗಾಧರ್ ಮತಯಾಚನೆ ಮಾಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.