ಹಿರೇಕೆರೂರು: ಪದವೀಧರರ ಹಾಗೂ ಶೈಕ್ಷಣಿಕ ಸಮಸ್ಯೆಗಳ ಪರಿಹಾರಕ್ಕೆ ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ ಅವರನ್ನು ಬೆಂಬಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.
ಶಾಸಕ ಯ.ಬಿ. ಬಣಕಾರ ಮಾತನಾಡಿ, ಸರಳ ಜೀವಿ ಹಾಗೂ ಸಾಮಾಜಿಕ ಮತ್ತು ವಕೀಲ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿ ಜನಪರ ಕಾರ್ಯಕ್ರಮಗಳನ್ನು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಕರ್ತರು ಮತದಾರರನ್ನು ಭೇಟಿ ಮಾಡಿ ಮೋಹನ ಲಿಂಬಿಕಾಯಿ ಅವರಿಗೆ ಪ್ರಥಮ ಪ್ರಾಶಸ್ತ್ಯ ದ ಮತ ನೀಡುವಂತೆ ಮನವೊಲಿಸುವ ಮೂಲಕ ಅವರ ಗೆಲುವಿನ ರೂವಾರಿಗಳಾಗಬೇಕು ಎಂದರು.
ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಮಾತನಾಡಿ, ಪದವೀಧರರು ಮತ್ತು ಶಿಕ್ಷಣ ಹಾಗೂ ಇತರ ಕ್ಷೇತ್ರಗಳ ಸಿಬ್ಬಂದಿಗಳ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ನಿಮ್ಮಧ್ವನಿಯಾಗಿ ಕೆಲಸ ಮಾಡಲು ನನಗೆ ಪ್ರಥಮ ಪ್ರಾಶಸ್ತ್ಯ ದ ಮತ ನೀಡುವ ಮೂಲಕ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ.ಎಚ್. ಬನ್ನಿಕೋಡ, ಸಹಕಾರಿ ಧುರೀಣ ಎಸ್.ಎಸ್. ಪಾಟೀಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವ ನೀರಲಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ ಮಡಿವಾಳರ ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಎಸ್.ಬಿ. ತಿಪ್ಪಣ್ಣನವರ ಇದ್ದರು.