ಎಲ್ಲರ ಹಿತ ಬಯಸುವ ಕಾಂಗ್ರೆಸ್‌ ಅಭ್ಯರ್ಥಿಗೆ ಬೆಂಬಲಿಸಿ: ಶಾಸಕಿ ಲತಾ

KannadaprabhaNewsNetwork |  
Published : May 31, 2024, 02:17 AM IST
ಹರಪನಹಳ್ಳಿ ಪಟ್ಟಣದ ಕಾಶಿ ಬಡಾವಣೆಯ ಕಾಂಗ್ರೆಸ್‌ ಭವನದಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ವಿಧಾನಪರಿಷತ್ತು ಚುನಾವಣಾ ಪ್ರಚಾರ ಸಭೆಯಲ್ಲಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಮಾತನಾಡಿದರು. ಎಂ.ವಿ.ಅಂಜಿನಪ್ಪ, ಕಗುಬೇರಪ್ಪ ಇದ್ದರು.  | Kannada Prabha

ಸಾರಾಂಶ

ರಾಜ್ಯ ಕಾಂಗ್ರೆಸ್‌ ಸರ್ಕಾರ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ನೀಡಿದ ಭರವಸೆಗಳನ್ನೆಲ್ಲ ಈಡೇರಿಸಿದೆ.

ಹರಪನಹಳ್ಳಿ: ಕರ್ನಾಟಕ ಈಶಾನ್ಯ ಪದ‍ವೀಧರ ಕ್ಷೇತ್ರದ ವಿಧಾನ ಪರಿಷತ್ತು ಚುನಾವಣೆಯಲ್ಲಿ ಎಲ್ಲ ವರ್ಗಗಳ ಹಿತ ಬಯಸುವ ಕಾಂಗ್ರೆಸ್‌ ಅಭ್ಯರ್ಥಿಗೆ ಬೆಂಬಲಿಸಿ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಪದವೀಧರ ಮತದಾರರಿಗೆ ಕೋರಿದರು.

ಅವರು ಪಟ್ಟಣದ ಕಾಶಿ ಬಡಾವಣೆಯಲ್ಲಿರುವ ಕಾಂಗ್ರೆಸ್‌ ಭವನದಲ್ಲಿ ಗುರುವಾರ ಸಂಜೆ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ರಾಜ್ಯ ಕಾಂಗ್ರೆಸ್‌ ಸರ್ಕಾರ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ನೀಡಿದ ಭರವಸೆಗಳನ್ನೆಲ್ಲ ಈಡೇರಿಸಿದೆ. ಮೇಲ್ಮನೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬಹುಮತ ಬರಬೇಕಾದರೆ ವಿಧಾನಪರಿಷತ್ತು ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಗೆಲ್ಲಬೇಕಿದೆ ಎಂದು ತಿಳಿಸಿದರು.

ತಾಲೂಕಿನಲ್ಲಿ ನಮ್ಮ ಅಭ್ಯರ್ಥಿ ಚಂದ್ರಶೇಖರ ಪಾಟೀಲ್‌ ಗೆ ಹೆಚ್ಚು ಮತಗಳು ಬರಬೇಕು. ಆ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಿ ಎಂದು ನೌಕರರ ಸಂಘಟನೆಗಳ ಪದಾಧಿಕಾರಿಗಳಿಗೆ ತಿಳಿಸಿದರು.

ಹರಪನಹಳ್ಳಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ವಿ. ಅಂಜಿನಪ್ಪ ಮಾತನಾಡಿ, ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬಹುತಮ ಸಿಕ್ಕರೆ ಅಭಿವೃದ್ದಿ ಕುರಿತು ಬಿಲ್‌ ಗಳು ಪಾಸ್‌ ಆಗುತ್ತವೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ತಾಲೂಕಿನಲ್ಲಿ ಕಾಂಗ್ರೆಸ್‌ ಶಾಸಕರಿದ್ದಾರೆ, ಎಂಎಲ್ಸಿ ಸಹ ಕಾಂಗ್ರೆಸ್‌ ನವರಾದರೆ ಅಭಿವೃದ್ದಿಗೆ ಅನುಕೂಲವಾಗುತ್ತದೆ. ಈಶಾನ್ಯ ಕ್ಷೇತ್ರದಲ್ಲಿ ಚಂದ್ರಶೇಖರ ಪಾಟೀಲ್‌ ಅವರಿಗೆ ಮತ ಹಾಕಿ ಎಂದು ವಿನಂತಿಸಿದರು.

ಪುರಸಭಾ ಸದಸ್ಯ ಟಿ.ವೆಂಕಟೇಶ ಮತದಾರರು ಬುದ್ದಿವಂತರಿದ್ದೀರಿ, ಕಲ್ಯಾಣ ಕರ್ನಾಟಕಕ್ಕೆ 371 ಜೆ ಸೌಲಭ್ಯವನ್ನು ಮಲ್ಲಿಕಾರ್ಜುನ ಖರ್ಗೆ ದೊರಕಿಸಿಕೊಟ್ಟರು. ಹರಪನಹಳ್ಳಿಗೆ 371 ಜೆ ಸಿಗಲು ಮಾಜಿ ಶಾಸಕ ದಿ.ಎಂ.ಪಿ.ರವೀಂದ್ರ ಕಾರಣ ಆದ್ದರಿಂದ ಎಂಎಲ್ಸಿ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆ ಮತ ಹಾಕಿ ಎಂದು ಅವರು ಕೋರಿದರು.

ಚಿಗಟೇರಿ ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಕೆ.ಕುಬೇರಪ್ಪ ಮಾತನಾಡಿದರು. ಮುಖಂಡರಾದ ಟಿಎಚ್‌ ಎಂ ಮಂಜುನಾಥ, ಪುರಸಭಾ ಸದಸ್ಯ ಲಾಟಿ ದಾದಾಪೀರ, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಕಂಚಿಕೇರಿ ಜಯಲಕ್ಷ್ಮಿ, ಹುಲ್ಲಿಕಟ್ಟಿ ಚಂದ್ರಪ್ಪ, ಮೈದೂರು ರಾಮಣ್ಣ, ಉದಯಶಂಕರ, ಜಾವೇದ್, ನೀಲಗುಂದ ವಾಗೀಶ, ಮತ್ತೂರು ಬಸವರಾಜ, ಬಿಇಢಿ ಕಾಲೇಜು ಪ್ರಾಂಶುಪಾಲ ಚಿರಸ್ಥಹಳ್ಳಿ ರಾಜಶೇಖರ, ಇಸ್ಮಾಯಿಲ್‌ ಎಲಿಗಾರ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಸಂಗಪ್ಪನವರ್, ತಾಲೂಕು ನೌಕರರ ಸಂಘದ ಅಧ್ಯಕ್ಷ ರಾಮಪ್ಪ, ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಿ.ರಾಜಶೇಖರ, ಪತ್ತಿನ ಸಂಘದ ಅಧ್ಯಕ್ಷ ಬಿ.ಚಂದ್ರಮೌಳಿ, ಎಎಸ್‌ಎಂ ಗುರುಪ್ರಸಾದ್, ಸಿದ್ದಪ್ಪ ಹರಿಂದ್ರಾಳು, ಪ್ರದೀಪ ಕೊಟ್ಟೂರು, ಗುಂಡಗತ್ತಿ ಕೊಟ್ರಪ್ಪ ಶಮಿವುಲ್ಲಾ, ವಕೀಲ ಬಸವರಾಜ ಹುಲಿಯಪ್ಪನವರ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!