ಅದೇ ರೀತಿ ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳಲ್ಲಿ ನಮ್ಮ ಬಣದಿಂದ ಯಾವ ಅಭ್ಯರ್ಥಿ ಸ್ಪರ್ಧೆ ಮಾಡುತ್ತಾರೆಯೋ ಅವರನ್ನು ಗೆಲ್ಲಿಸುವುವುದರ ಮೂಲಕ ಇನ್ನಷ್ಟು ಸಾರ್ವಜನಿಕರ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು.
ಕನ್ನಡಪ್ರಭ ವಾರ್ತೆ, ಗೌರಿಬಿದನೂರು
ತಾಲೂಕಿನ ನಗರಗೆರೆ, ಡಿ. ಪಾಳ್ಯ, ಕಸಬಾ ಹೋಬಳಿ ವಾಟದಹೊಸಹಳ್ಳಿ, ಮದಲೋಡು, ನಾಮಗೊಂಡ್ಲು, ಗಂಗಸಂದ್ರ ಗ್ರಾಮ ಪಂಚಾಯತಿ ವ್ಯಾಪಿಯ ತೋಕಲಹಳ್ಳಿ, ವಾಟದಹೊಸಹಳ್ಳಿ, ಹಳೇಮಣಿವಾಲ, ಜೀಲಾಕುಂಟೆ, ಮುದಲೋಡು, ನಾಮಗೊಂಡ್ಲು, ಸಾರಗೊಂಡ್ಲು, ಕಡಬೂರು, ಗುಂಡ್ಲಹಳ್ಳಿ, ಸಾಗನಹಳ್ಳಿ ಗ್ರಾಮಗಳಲ್ಲಿ ಪರಿಶಿಷ್ಟ ವರ್ಗಗಳ ಪ್ರಗತಿ ಯೋಜನೆಯಲ್ಲಿ ಹೈಮಾಸ್ಟ್ ಲೈಟ್ ಅಳವಡಿಸುವ ಮತ್ತು 7.50.ಕೋಟಿ ರು. ವೆಚ್ಚದಲ್ಲಿ ಸಿ.ಸಿ.ರಸ್ತೆ ಅಭಿವೃದ್ಧಿ ಹಾಗೂ ಸಂಪರ್ಕ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಕೆ.ಎಚ್. ಪುಟ್ಟಸ್ವಾಮಿಗೌಡರು ಭೂಮಿಪೂಜೆ ನೆರವೇರಿಸಿದರು.ಈ ವೇಳೆ ಶಾಸಕರಾದ ಕೆ.ಎಚ್.ಪುಟ್ಟಸ್ವಾಮಿಗೌಡರು ಆಯಾ ಪಂಚಾಯತಿಗಳ ವ್ಯಾಪ್ತಿಯ ಮುಖಂಡರು, ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಆಯಾ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕಾರ್ಯಗಳ ಬಗ್ಗೆ ಸಮಾಲೋಚನೆ ನಡೆಸಿದರು. ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದು ಈಗಾಗಲೇ ಹಲವಾರು ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಇನ್ನೂ ಆಗಬೇಕಿರುವ ಕಾಮಗಾರಿಗಳನ್ನು ಪಟ್ಟಿ ಮಾಡಿ ಅಭಿವೃದ್ಧಿ ಪಡಿಸಲಾಗುವುದೆಂದು ತಿಳಿಸಿದರು.
ಅದೇ ರೀತಿ ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತಿ ಚುನಾವಣೆಗಳಲ್ಲಿ ನಮ್ಮ ಬಣದಿಂದ ಯಾವ ಅಭ್ಯರ್ಥಿ ಸ್ಪರ್ಧೆ ಮಾಡುತ್ತಾರೆಯೋ ಅವರನ್ನು ಗೆಲ್ಲಿಸುವುವುದರ ಮೂಲಕ ಇನ್ನಷ್ಟು ಸಾರ್ವಜನಿಕರ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನವೀನ್, ಮುರಳಿ, ಗಂಗಾಧರಪ್ಪ ರಾಜಾನಾಯಕ್ ಮತ್ತು ಆಯಾ ಹೋಬಳಿ, ಪಂಚಾಯತಿ ವ್ಯಾಪ್ತಿ ಪ್ರಮುಖ ಮುಖಂಡರು, ಕಾರ್ಯಕರ್ತ ಬಂಧುಗಳು, ಚುನಾಯಿತ ಜನ ಪ್ರತಿನಿಧಿಗಳು, ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.