ಸಮಸ್ಯೆಗಳ ಬಗೆಹರಿಸಲು ಎನ್‌ಡಿಎ ಅಭ್ಯರ್ಥಿ ಬೆಂಬಲಿಸಿ

KannadaprabhaNewsNetwork |  
Published : Oct 19, 2026, 01:30 AM IST
ಫೋಟೋ: 18 ಹೆಚ್‌ಎಸ್‌ಕೆ 1ಹೊಸಕೋಟೆ ನಗರದ ಬಿಜೆಪಿ ಕಚೇರಿಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಅವರನ್ನು ಬಿಜೆಪಿ ಕಾರ್ಯಕರ್ತರು ಅಭಿನಂದಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ಕಳೆದ ಎರಡು ಚುನಾವಣೆಗಳಲ್ಲಿ ಸ್ಪರ್ಧಿಸಿ ಕಡಿಮೆ ಅಂತರದಿಂದ ಸೋಲು ಕಂಡಿದ್ದೇನೆ. ಈ ಬಾರಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಈ ಬಾರಿ ಶಿಕ್ಷಕರು ಬೆಂಬಲ ನೀಡುವರೆಂದು ಬೆಂಗಳೂರು ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎ.ಪಿ.ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದರು

ಹೊಸಕೋಟೆ: ಕಳೆದ ಎರಡು ಚುನಾವಣೆಗಳಲ್ಲಿ ಸ್ಪರ್ಧಿಸಿ ಕಡಿಮೆ ಅಂತರದಿಂದ ಸೋಲು ಕಂಡಿದ್ದೇನೆ. ಈ ಬಾರಿ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಈ ಬಾರಿ ಶಿಕ್ಷಕರು ಬೆಂಬಲ ನೀಡುವರೆಂದು ಬೆಂಗಳೂರು ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎ.ಪಿ.ರಂಗನಾಥ್ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಬಾರಿ ಜೆಡಿಎಸ್‌ ಹಾಗೂ ಅದಕ್ಕೂ ಹಿಂದಿನ ಚುನಾವಣೆಯಲ್ಲಿ ಬೇರೆ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ. ಕಳೆದ ಚುನಾವಣೆಯಲ್ಲಿ ಸುಮಾರು 600 ಮತಗಳ ಅಂತರದಿಂದ ಸೋಲು ಅನುಭವಿಸಿದ್ದೆ. ಈ ಬಾರಿ ಶಿಕ್ಷಕರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸುವ ಮೂಲಕ ಚುನಾವಣೆಯಲ್ಲಿ ಗೆಲುವು ಸಾಧಿಸಲು ಪ್ರಯತ್ನಿಸುತ್ತಿದ್ದೇನೆ. ಶಿಕ್ಷಕರ ಕ್ಷೇತ್ರದಿಂದ ಈ ಹಿಂದೆ ಆಯ್ಕೆಯಾದವರು ತಮ್ಮ ಅವಧಿ ಪೂರ್ಣಗೊಳಿಸುವ ಮುನ್ನವೇ ರಾಜೀನಾಮೆ ನೀಡಿ ಉಪಚುನಾವಣೆಗೆ ಕಾರಣವಾಗಿರುವುದು ಶಿಕ್ಷಕರಿಗೆ ನಿರಾಸೆ ಮೂಡಿಸಿದೆ. ಶಿಕ್ಷಕರು ಆರು ವರ್ಷಗಳ ಕಾಲ ವಿಶ್ವಾಸವಿಟ್ಟು ಆಯ್ಕೆ ಮಾಡಿದ ಪ್ರತಿನಿಧಿಗಳು ತಮ್ಮ ಜವಾಬ್ದಾರಿಯನ್ನು ಪೂರ್ಣಗೊಳಿಸಬೇಕು. ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಅರ್ಧದಲ್ಲೇ ಅಧಿಕಾರ ತ್ಯಜಿಸಿ ಮತ್ತೊಂದು ಚುನಾವಣೆಗೆ ಅವಕಾಶ ಮಾಡಿಕೊಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ವಿರುದ್ದ ವಾಗ್ದಾಳಿ ಮಾಡಿದರು.

ಕೊಟ್ಟ ಭರವಸೆ ಈಡೇರಿಸಿಲ್ಲ:

ಈ ಹಿಂದೆ ಗೆಲುವು ಸಾಧಿಸಿದ್ದ ಪುಟ್ಟಣ್ಣ ಅವರು ಕಳೆದ ಚುನಾವಣೆ ಸಂದರ್ಭದಲ್ಲಿ ಗೆಲುವು ಸಾಧಿಸಲು ಸಾಕಷ್ಟು ಭರವಸೆ ಕೊಟ್ಟು ಯಾವುದೇ ಭರವಸೆ ಈಡೇರಿಸಲಿಲ್ಲ. ಮುಖ್ಯವಾಗಿ ಗೆದ್ದ 15 ದಿನದಲ್ಲಿ ಒಪಿಎಸ್ ಜಾರಿ ಮಾಡುವುದಾಗಿ ತಿಳಿಸಿದ್ದರು. ಅನುದಾನ ರಹಿತ ಶಾಲಾ ಶಿಕ್ಷಕರ ಸಮಸ್ಯೆ ಬಗೆಹರಿಸುವುದಾಗಿ ಹಾಗೂ ಆರೋಗ್ಯ ವಿಮೆ ಮಾಡಿಸುವುದಾಗಿ, ಜ್ಯೋತಿ ಸಂಜೀವಿನಿ ಯೋಜನೆ ಜಾರಿ ಬಗ್ಗೆ ಆಶ್ವಾಸನೆ ಕೊಟ್ಟು ಯಾವುದನ್ನೂ ಈಡೇರಿಸದೆ ಈ ಭಾರಿ ಈಡೇರಿಸುವುದಾಗಿ ಪ್ರಚಾರ ಸಭೆಗಳಲ್ಲಿ ಹೇಳುತ್ತಿದ್ದಾರೆ. ಆದರೆ ಪ್ರಸ್ತುತ ಸನ್ನಿವೇಶದಲ್ಲಿ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದ್ದು ಅಭಿವೃದ್ದಿ ಕಾಮಗಾರಿಗಳು ಕುಂಠಿತವಾಗಿದೆ. ರಾಜ್ಯದಲ್ಲಿ ಬೀಕರ ಬರ ಇದ್ದರೂ ಕೂಡ ಬರ ನಿರ್ವಹಣೆ ಮಾಡಲು ಸರ್ಕಾರದಿಂದ ಆಗುತ್ತಿಲ್ಲ. ಇದರ ನಡುವೆ ಶಿಕ್ಷಕರ ಸಮಸ್ಯೆಯನ್ನು ಈ ಸರ್ಕಾರ ಹೇಗೆ ಬಗೆಹರಿಸಲು ಸಾಧ್ಯ ಎಂದರು.

ಸಭೆಯಲ್ಲಿ ಎಂಎಲ್ಸಿ ಕೇಶವ್ ಪ್ರಸಾದ್, ಜಿಲ್ಲಾ ಬಿಜೆಪಿ ಪ್ರದಾನ ಕಾರ್ಯದರ್ಶಿ ತ.ರಾ.ವೆಂಕಟೇಶ್, ಮಹಿಳಾ ಮೋರ್ಚ ಅಧ್ಯಕ್ಷೆ ಅನುರೆಡ್ಡಿ, ಉಪಾಧ್ಯಕ್ಷೆ ಶ್ರೀರೂಪ, ಟೌನ್ ಅಧ್ಯಕ್ಷ ಬಾಲಚಂದ್ರ, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ದೇವನಗೊಂದಿ ನಾರಾಯಣಸ್ವಾಮಿ, ತಾಲೂಕು ಅದ್ಯಕ್ಷ ನರಸಿಂಹಯ್ಯ, ವಕೀಲ ಮೋರ್ಚಾ ಅಧ್ಯಕ್ಷ ವೆಂಕಟಸ್ವಾಮಿ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.

ಫೋಟೋ: 18 ಹೆಚ್‌ಎಸ್‌ಕೆ 1

ಹೊಸಕೋಟೆ ಬಿಜೆಪಿ ಕಚೇರಿಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಸಭೆಯಲ್ಲಿ ಎನ್‌ಡಿಎ ಅಭ್ಯರ್ಥಿ ಎ.ಪಿ.ರಂಗನಾಥ್ ಅವರನ್ನು ಬಿಜೆಪಿ ಕಾರ್ಯಕರ್ತರು ಅಭಿನಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಿಜಿ ಪಾಳ್ಯ ಡೊಡ್ಡಕೆರೆ ಮಣ್ಣು ಮಾರಾಟದಿಂದ ಭ್ರಷ್ಟಾಚಾರ: ನಿಶಾಂತ್
ಇರುವೆಯ ಹೆಜ್ಜೆ ಸಪ್ಪಳವನ್ನೂ ಆಲಿಸುವವನೇ ನಿಜ ಕವಿ