ಕನ್ನಡಪ್ರಭ ವಾರ್ತೆ ರಾಮನಗರ
ಬಿಡದಿಯ ಹೊರವಲಯದಲ್ಲಿ ಶುಕ್ರವಾರ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಅತಿ ದೊಡ್ಡ ಸಹಕಾರ ಸಂಘ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ರೈತರ ಸೇವಾ ಸಹಕಾರ ಸಂಘವನ್ನು ಸುಮಾರು 47 ವರ್ಷಗಳ ಹಿಂದೆ ಸ್ಥಾಪಿಸಿ ಅಂದಿನಿಂದ ಅಧಿಕಾರ ಅನುಭವಿಸಿದ ಜೆಡಿಎಸ್ ಬೆಂಬಲಿತ ಅಧ್ಯಕ್ಷರು ಹಾಗೂ ನಿರ್ದೇಶಕರು, ತಮ್ಮ ಅಧಿಕಾರದ ಅನುಕೂಲಕ್ಕಾಗಿ ಈ ಸಂಘವನ್ನು ಎರಡು ಬಾರಿ ಅಮಾನತುಗೊಳಿಸಿದರು. ಜೊತೆಗೆ ಯಾವುದೇ ಅಭಿವೃದ್ಧಿ ಕಂಡಿಲ್ಲ ಎಂದು ಟೀಕಿಸಿದರು.
ಈಗ ರಾಜ್ಯದಲ್ಲಿ ನಮ್ಮ ಸರ್ಕಾರವಿದ್ದು, ಜಿಲ್ಲಾ ಬಿಡಿಸಿಸಿ ಬ್ಯಾಂಕ್ ಸಹ ಕಾಂಗ್ರೆಸ್ ಪಕ್ಷದ ಹಿಡಿತದಲ್ಲಿದೆ. ಸೊಸೈಟಿ ಮೂಲಕ ಬಿಡದಿ ಭಾಗದ ರೈತರಿಗೆ ಹೆಚ್ಚಿನ ಸಾಲ ಸೌಲಭ್ಯಗಳನ್ನು ನೀಡಲು ಸಾಧ್ಯವಾಗುತ್ತದೆ. ಹಾಗಾಗಿ ಕಾಂಗ್ರೆಸ್ ಬೆಂಬಲಿತ 12 ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ರೈತರಿಗೆ ಸೇವೆ ಮಾಡಲು ಒಂದು ಅವಕಾಶ ಮಾಡಿ ಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜು ಮಾತನಾಡಿ, ಎಲ್ಲರೂ ತಂಡದ ಎಲ್ಲ ಅಭ್ಯರ್ಥಿಗಳಿಗೆ ಮತ ಕೇಳಿ, ಒಂದು ವೇಳೆ ಒಬ್ಬರು ಸೋತರೆ ಇಡೀ ಸಿಂಡಿಕೇಟ್ ಸೋತಂತೆ, ಮತ ಕೇಳುವಾಗ ಗೊಂದಲ ಮಾಡಿಕೊಳ್ಳದೆ ಸಾಲಗಾರರಲ್ಲದ 1 ಸ್ಥಾನಕ್ಕೆ, ಮೀಸಲಾತಿಯಡಿ ಇರುವ ಸಾಲಗಾರರ 11 ಸ್ಥಾನಗಳಿಗೆ ಪ್ರತ್ಯೇಕವಾಗಿ ಮತ ಕೇಳಿ, 12 ಅಭ್ಯರ್ಥಿಗಳ ಗೆಲುವಿನ ಹಿಂದೆ ಮುಖಂಡರ ಶ್ರಮ ಹೋರಾಟ ಇರಲಿ. ಈ ಚುನಾವಣೆ ಕಾಂಗ್ರೆಸ್ ಪಕ್ಷದ ಮುಖಂಡರುಗಳ ಚುನಾವಣೆಯಾಗಿದೆ ಎಂಬುದನ್ನು ಮರೆಯಬೇಡಿ ಎಂದು ತಿಳಿಸಿದರು.
ಸಭೆಯಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ರಮೇಶ್, ಶೇಷಗಿರಿಹಳ್ಳಿ ವೆಂಕಟೇಶ್, ಬೆಟ್ಟಸ್ವಾಮಿ, ನರಸಿಂಹಯ್ಯ, ಪುಟ್ಟಯ್ಯ, ಕರಡಿಗೌಡನದೊಡ್ಡಿ ಉಮಾಶಂಕರ್, ಬಾನಂದೂರು ನಂಜುಂಡಿ, ರಂಗಸ್ವಾಮಿ ಸೇರಿದಂತೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು, ಕಾಂಗ್ರೆಸ್ ಪಕ್ಷದ ಮುಖಂಡರುಗಳು ಭಾಗವಹಿಸಿದ್ದರು.
ನಾಳೆ ಮತದಾನ