ತೇಜಸ್ವಿ ಸೂರ್ಯಗೆ ಸುಪ್ರೀಂ ಬಿಗ್‌ ರಿಲೀಫ್

KannadaprabhaNewsNetwork |  
Published : Jul 22, 2025, 12:00 AM ISTUpdated : Jul 22, 2025, 10:02 AM IST
BJP MP Tejasvi Surya (Photo/ANI)

ಸಾರಾಂಶ

ಹಾವೇರಿ ರೈತ ರುದ್ರಪ್ಪ ಆತ್ಮಹ* ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಪೋಸ್ಟ್‌ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

  ನವದೆಹಲಿ :  ಹಾವೇರಿ ರೈತ ರುದ್ರಪ್ಪ ಆತ್ಮಹ* ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಪೋಸ್ಟ್‌ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಈ ಸಂಬಂಧ ಕರ್ನಾಟಕ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಎತ್ತಿ ಹಿಡಿದ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾ.ಕೆ.ವಿನೋದ್ ಚಂದ್ರನ್ ಅವರಿದ್ದ ವಿಭಾಗೀಯ ಪೀಠ, ಇಂತಹ ಪ್ರಕರಣವನ್ನು ರಾಜಕೀಯಗೊಳಿಸಬೇಡಿ. ರಾಜಕೀಯವೇನಿದ್ದರೂ ಕೋರ್ಟ್‌ನ ಹೊರಗೆ ನಡೆಯಲಿ. ಮತದಾರರ ಮುಂದೆ ನಿಮ್ಮ ಹೋರಾಟಗಳನ್ನು ಮಾಡಿ ಎಂದು ಖಡಕ್ಕಾಗಿ ನುಡಿಯಿತು.ಪ್ರಕರಣವೇನು?:

ತೇಜಸ್ವಿ ಸೂರ್ಯ ಅವರು, 2024ರ ನ.7ರಂದು ರೈತನ ಆತ್ಮಹ*ಗೆ ಸಂಬಂಧಿಸಿದಂತೆ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ಅದರಲ್ಲಿ ತಮ್ಮ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿದ್ದರಿಂದ ಮನನೊಂದು ಹಾವೇರಿ ರೈತ ರುದ್ರಪ್ಪ ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು.

ಇಂತಹ ಯಾವುದೇ ಪ್ರಕರಣ ನಡೆದಿಲ್ಲ ಎಂದು ಎಸ್‌ಪಿ ಸ್ಪಷ್ಟನೆ ನೀಡಿದ ಬಳಿಕ ಪೋಸ್ಟ್‌ ಅನ್ನು ಡಿಲೀಟ್ ಮಾಡಿದ್ದರು. ಆದರೂ, ತೇಜಸ್ವಿ ಅವರು ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಹಾವೇರಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

ಪ್ರಕರಣ ರದ್ದು ಕೋರಿ ತೇಜಸ್ವಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಬಳಿಕ ಹೈಕೋರ್ಟ್ ಪ್ರಕರಣವನ್ನು ರದ್ದು ಮಾಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಿ, ಹಾವೇರಿಯ ಸಿಇಎನ್‌ ಪೊಲೀಸ್ ತನಿಖಾಧಿಕಾರಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!