ಸುಪ್ರೀಂನಿಂದ ಎಸ್ಸಿಗಳ ಒಳಮೀಸಲಿಗೆ ಬಲ: ವೀರಭದ್ರಪ್ಪ

KannadaprabhaNewsNetwork |  
Published : Nov 13, 2025, 02:15 AM IST
 ೧೨ ಜೆ.ಎಲ್.ಆರ್.ಚಿತ್ರ1 ): ಜಗಳೂರು ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಬುಧವಾರ ಮಾದಿಗ ಮಹಾ ಸಭಾ ಪದಾಧಿಕಾರಿಗಳ ಆಯ್ಕೆ ಹಾಗೂ ಒಳ ಮೀಸಲಾತಿ ವಿಜಯೋತ್ಸವ ಸನ್ಮಾನ ಕಾರ್ಯಕ್ರಮ ನಡೆಯಿತು.. | Kannada Prabha

ಸಾರಾಂಶ

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸಬೇಕು ಎನ್ನುವ ೩೫ ವರ್ಷಗಳ ಹೋರಾಟಕ್ಕೆ ಈಗ ಮನ್ನಣೆ ಸಿಗುವ ಮೂಲಕ ಬಹುದಿನಗಳ ಬೇಡಿಕೆ ಈಡೇರಿದೆ. ಸುಪ್ರೀಂ ಕೋರ್ಟ್ ಒಳಮೀಸಲಾತಿ ವಿಚಾರದಲ್ಲಿ ಆದೇಶ ಮಾಡದಿದ್ದರೆ ಕೊನೆಯವರೆಗೂ ಮಾದಿಗರಿಗೆ ನ್ಯಾಯ ಸಿಗುತ್ತಿರಲಿಲ್ಲ ಮಾದಿಗ ಮಹಾಸಭಾ ಜಿಲ್ಲಾಧ್ಯಕ್ಷ ಬಿ.ಎಚ್.ವೀರಭದ್ರಪ್ಪ ಹೇಳಿದರು.

ಕನ್ನಡಪ್ರಭವಾರ್ತೆ ಜಗಳೂರು

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸಬೇಕು ಎನ್ನುವ ೩೫ ವರ್ಷಗಳ ಹೋರಾಟಕ್ಕೆ ಈಗ ಮನ್ನಣೆ ಸಿಗುವ ಮೂಲಕ ಬಹುದಿನಗಳ ಬೇಡಿಕೆ ಈಡೇರಿದೆ. ಸುಪ್ರೀಂ ಕೋರ್ಟ್ ಒಳಮೀಸಲಾತಿ ವಿಚಾರದಲ್ಲಿ ಆದೇಶ ಮಾಡದಿದ್ದರೆ ಕೊನೆಯವರೆಗೂ ಮಾದಿಗರಿಗೆ ನ್ಯಾಯ ಸಿಗುತ್ತಿರಲಿಲ್ಲ ಮಾದಿಗ ಮಹಾಸಭಾ ಜಿಲ್ಲಾಧ್ಯಕ್ಷ ಬಿ.ಎಚ್.ವೀರಭದ್ರಪ್ಪ ಹೇಳಿದರು.

ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಬುಧವಾರ ಮಾದಿಗ ಮಹಾಸಭಾ ಪದಾಧಿಕಾರಿಗಳ ಆಯ್ಕೆ ಹಾಗೂ ಒಳಮೀಸಲಾತಿ ವಿಜಯೋತ್ಸವ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾದಿಗ ಸಮುದಾಯದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕವಾಗಿ ಸಬಲೀಕರಣ ಮಾಡುವುದು ಸಂಘದ ಉದ್ದೇಶವಾಗಿದೆ. ಮಾಜಿ ಸಚಿವ ಎಚ್.ಆಂಜನೇಯ ಅಧಿಕಾರವಿಲ್ಲದಿದ್ದರೂ ಸಹ ಮಾದಿಗ ಸಮುದಾಯಕ್ಕೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ನಿರಂತರ ಹೋರಾಟ ಮಾಡಿದರು. ಸರ್ಕಾರದ ಮಟ್ಟದಲ್ಲಿ ಸಚಿವ ಮುನಿಯಪ್ಪ ಕೆಲಸ ಮಾಡಿದರು. ಹೀಗಾಗಿ ಸಿಎಂ ಸಿದ್ದರಾಮಯ್ಯ ಒಳಮೀಸಲಾತಿ ಜಾರಿಗೊಳಿಸಿದರು ಎಂದು ಸ್ಮರಿಸಿದರು.

ದಾವಣಗೆರೆ ವಿಶ್ವವಿದ್ಯಾಲಯದ ಕನ್ನಡ ಅಧ್ಯಾಯನ ವಿಭಾಗದ ಮುಖ್ಯಸ್ಥ ಪ್ರೊ.ಎಚ್.ವಿಶ್ವನಾಥ್ ಮಾತನಾಡಿ, ಶೈಕ್ಷಣಿಕ ಮತ್ತು ರಾಜಕೀಯವಾಗಿ ಶಕ್ತಿ ತುಂಬಿದಾಗ ಮಾತ್ರ ಮಾದಿಗ ಸಮುದಾಯ ಅಭಿವೃದ್ಧಿ ಮಾಡಲು ಸಾಧ್ಯ. ಅಲ್ಲಿಯ ತನಕ ಸಾಮಾಜಿಕ ನ್ಯಾಯ ಕೊಡಲು ಸಾಧ್ಯವಾಗುವುದಿಲ್ಲ ಎಂದರು.

ಮಾದಿಗ ಮಹಾಸಭಾ ತಾ.ಅಧ್ಯಕ್ಷ ಜಿ.ಎಚ್ ಶಂಭುಲಿಂಗಪ್ಪ, ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಗೌರಿಪುರ ಕುಬೇರಪ್ಪ ಮಾತನಾಡಿದರು.

ಮಾದಿಗ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹೆಗ್ಗೆರೆ ರಂಗಪ್ಪ, ತಾಲೂಕು ಗೌರವಾಧ್ಯಕ್ಷ ತಿಪ್ಪೇಸ್ವಾಮಿ, ಉಪಾಧ್ಯಕ್ಷ ಹಟ್ಟಿ ತಿಪ್ಪೇಸ್ವಾಮಿ, ಕಾರ್ಯಾಧ್ಯಕ್ಷ ಮಂಜುನಾಥ್ ಸಿ.. ಬಸವರಾಜ್, ಹನುಮಂತಪ್ಪ, ಆದಿ ಜಾಂಬವ ಹರಿಜನ ವಿದ್ಯಾರ್ಥಿ ನಿಲಯದ ಅಧ್ಯಕ್ಷ ಎಚ್. ಹನುಮಂತಪ್ಪ, ಪಪಂ ಸದಸ್ಯ ದೇವರಾಜ್, ದಸಂಸ ಸಂಚಾಲಕರಾದ ಸತೀಶ್‌ ಮಾಚಿಕೆರೆ, ಕುಬೇಂದ್ರಪ್ಪ ಮತ್ತಿತರರು ಇದ್ದರು.

PREV

Recommended Stories

ಬಿಳಿಕೆರೆ ಬಳಿ ಒಂದು ಗಂಡು ಹುಲಿ ಮರಿ ಸೆರೆ
ಪ್ರಕೃತಿ ವಿಕೋಪಗಳ ಎದುರಿಸುವ ಧೈರ್ಯ ಎಲ್ಲರಲ್ಲಿರಲಿ: ಜಿಪಂ ಸಿಇಒ ಗಿತ್ತೆ ಮಾಧವ ರಾವ್‌