-ಸಾರ್ವಜನಿಕರು ಲಕ್ಷಾಂತರ ತೆರಿಗೆ ಪಾವತಿಸುತ್ತಿದ್ದರೂ ಗುಣಮಟ್ಟದ ರಸ್ತೆ, ಮೂಲಸೌಕರ್ಯ ಶೂನ್ಯ । ನಗರಸಭೆ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ
ಚಂದ್ರಶೇಖರನಾಯಕ ಗುಡ್ಡಕಾಯಿ
ಕನ್ನಡಪ್ರಭ ವಾರ್ತೆ ಸುರಪುರತಾಲೂಕು ಕೇಂದ್ರವಾದ ಸುರಪುರ ನಗರದ ಪ್ರಮುಖ ರಸ್ತೆಗಳು ಗುಂಡಿಗಳಿಂದ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ನಿತ್ಯ ಜೀವಭಯದಲ್ಲೇ ಸಂಚರಿಸುವಂತಾಗಿದೆ. ಮಳೆಗಾಲ ಆರಂಭವಾದ ಬಳಿಕ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾರ್ವಜನಿಕರು ನಗರಸಭೆಯ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬಸ್ ನಿಲ್ದಾಣದ ಪ್ರವೇಶ ದ್ವಾರದ ಆಳವಾದ ಗುಂಡಿಗಳಿಂದ ಕೆಎಸ್‌ಆರ್‌ಟಿಸಿ ಬಸ್ ಸೇರಿದಂತೆ ಭಾರೀ ವಾಹನಗಳು ತೂಗಾಡುತ್ತಲೇ ಸಂಚರಿಸಬೇಕಾಗಿದೆ. ನಗರಸಭೆ ಕಚೇರಿ ಎದುರಿನಲ್ಲೇ ರಸ್ತೆ ಹದಗೆಟ್ಟಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಕಣ್ಮುಚ್ಚಿ ಕುಳಿತ ಅಧಿಕಾರಿಗಳು: ಜನಪ್ರತಿನಿಧಿಗಳು ಹಾಗೂ ನಗರಸಭೆ ಅಧಿಕಾರಿಗಳು ಇದೇ ರಸ್ತೆಗಳಲ್ಲಿ ಪ್ರತಿದಿನ ಸಂಚರಿಸುತ್ತಿದ್ದರೂ ಸಮರ್ಪಕ ದುರಸ್ತಿ ಕಾಮಗಾರಿ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ನಗರಸಭೆ ಕಚೇರಿ ಎದುರಿನಲ್ಲೇ ರಸ್ತೆ ಹದಗೆಟ್ಟಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಉತ್ತಮ ಸ್ಥಿತಿಯಲ್ಲಿರುವ ರಸ್ತೆಗಳಿಗೆ ಆದ್ಯತೆ ನೀಡುವ ಬದಲು, ತೀವ್ರವಾಗಿ ಹದಗೆಟ್ಟಿರುವ ರಸ್ತೆಗಳನ್ನು ಮೊದಲು ದುರಸ್ತಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
---
ಸುರಪುರ ನಗರದ ಪ್ರಮುಖ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರು ಜೀವಭಯದಲ್ಲೇ ಸಂಚರಿಸುವಂತಾಗಿದೆ. ತಾತ್ಕಾಲಿಕ ತೇಪೆ ಕಾಮಗಾರಿ ಬದಲು ಶಾಶ್ವತ ಹಾಗೂ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ನಗರಸಭೆ ತಕ್ಷಣ ಮುಂದಾಗಬೇಕು. ಇಲ್ಲವಾದರೆ ರಸ್ತೆ ಬಂದ್ ಮಾಡಿ, ಗುಂಡಿಗಳಲ್ಲೇ ಸಸಿ ನೆಟ್ಟು ಉಗ್ರ ಪ್ರತಿಭಟನೆ ನಡೆಸಲಾಗುವುದು.
----
ಕೋಟ್-2:ನಗರದ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳಿಂದ ವಾಹನ ಸವಾರರು ಹಾಗೂ ಪಾದಚಾರಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಮಳೆಗಾಲದಲ್ಲಿ ಅಪಘಾತದ ಅಪಾಯ ಹೆಚ್ಚಿದ್ದು, ಅನಾಹುತ
ಸಂಭವಿಸುವ ಮುನ್ನವೇ ಅಧಿಕಾರಿಗಳು ರಸ್ತೆ ದುರಸ್ತಿಗೆ ಮುಂದಾಗಬೇಕು.-ಶರಣು ನಾಯಕ, ಸಾರ್ವಜನಿಕರು, ಸುರಪುರ
-----ಫೋಟೋ 01: ಕುಂಬಾರಪೇಟೆ ರಸ್ತೆಗಳಲ್ಲಿ ನಿಂತ ಮಳೆನೀರು.
ಫೋಟೋ 01: ಬಸ್ ನಿಲ್ದಾಣ ಮುಂದೆ ರಸ್ತೆಯ ದುರಸ್ತಿ.