ಸುರೇಶ್ ಗೆಲುವಿಗಾಗಿ ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆ

KannadaprabhaNewsNetwork |  
Published : Apr 19, 2024, 01:02 AM IST
18ಕೆಆರ್ ಎಂಎನ್ 9,10,11.ಜೆಪಿಜಿಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು ಗೆಲುವು ಸಾಧಿಸಲಿ ಎಂದು ಅವರ ಅಭಿಮಾನಿಗಳು ಮೈಸೂರಿನಲ್ಲಿ ಚಾಮುಂಡೇಶ್ವರಿ ಬೆಟ್ಟದ ಮೆಟ್ಟಿಲು ಹತ್ತಿ ಪ್ರಾರ್ಥನೆ ಸಲ್ಲಿಸಿದರು. | Kannada Prabha

ಸಾರಾಂಶ

ಮೈಸೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಗೆಲುವು ಸಾಧಿಸಲಿ ಎಂದು ಅವರ ಅಭಿಮಾನಿಗಳು ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಬೆಟ್ಟ ಹತ್ತಿ ಚಾಮುಂಡೇಶ್ವರಿ ದೇವಿಗೆ ಪ್ರಾರ್ಥನೆ ಸಲ್ಲಿಸಿ ವಿಶೇಷ ಪೂಜೆ ಸಲ್ಲಿಸಿದರು.

ಮೈಸೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಗೆಲುವು ಸಾಧಿಸಲಿ ಎಂದು ಅವರ ಅಭಿಮಾನಿಗಳು ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಬೆಟ್ಟ ಹತ್ತಿ ಚಾಮುಂಡೇಶ್ವರಿ ದೇವಿಗೆ ಪ್ರಾರ್ಥನೆ ಸಲ್ಲಿಸಿ ವಿಶೇಷ ಪೂಜೆ ಸಲ್ಲಿಸಿದರು.

ಡಿ.ಕೆ.ಬ್ರದರ್ಸ್ ಅಭಿಮಾನಿ ಬಳಗದ ಸುಮಾರು 300 ಸದಸ್ಯರು ಗುರುವಾರ ಬೆಳಗ್ಗೆ ಮೈಸೂರಿನಲ್ಲಿ ಚಾಮುಂಡೇಶ್ವರಿ ದೇಗುಲಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಆ ಮೂಲಕ ಡಿ.ಕೆ.ಸುರೇಶ್ ಅವರು ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸಬೇಕು. ರಾಜ್ಯದ 28 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಬೇಕು ಎಂದು ಪ್ರಾರ್ಥಿಸಿದರು.

ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅಭಿಮಾನಿಗಳು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಮತ್ತೊಮ್ಮೆ ಸಂಸದರಾಗಿ ಆಯ್ಕೆಯಾಗಬೇಕು ಎಂದು ಕಿರಿಯರಿಂದ ಹಿರಿಯರವರೆಗೂ ಎಲ್ಲರೂ ಹರಕೆ ಹೊತ್ತು ಬಂದಿದ್ದೇವೆ. ನಮ್ಮಂತಹ ಗದ್ದೆ, ಹೊಲ ಇಲ್ಲದವರಿಗೆ ಪ್ರತಿ ತಿಂಗಳು ಕಾಂಗ್ರೆಸ್ ಸರ್ಕಾರ 2 ಸಾವಿರ ರುಪಾಯಿ ಹಣ ಕೊಡುತ್ತಿದೆ. ಜತೆಗೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ನೀಡುತ್ತಿದ್ದಾರೆ. ಇದರಿಂದ ನಮ್ಮ ಬಡ ಕುಟುಂಬಗಳಿಗೆ ಸಾಕಷ್ಟು ಅನುಕೂಲವಾಗಿದೆ. ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ನಮಗೆ ಅನುಕೂಲವಾಗಿವೆ. ಬಿಜೆಪಿ ನಮ್ಮಂತಹ ಬಡವರಿಗಾಗಿ ಏನು ಮಾಡಿದೆ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ಶಕ್ತಿ ತುಂಬುವಂತಹ ವಿವಿಧ ಕಾರ್ಯಕ್ರಮಗಳನ್ನು ನೀಡಿದ್ದಾರೆ. ನಾವು ಗಂಡಂದಿರು, ಮಕ್ಕಳ ಬಳಿ ಹಣ ಕೇಳುವ ಪರಿಸ್ಥಿತಿ ಇಲ್ಲದೆ ನಮಗೆ ಸರ್ಕಾರ ನಮ್ಮ ವೈಯಕ್ತಿಕ ಖರ್ಚುಗಳಿಗಾಗಿ ಪ್ರತಿ ತಿಂಗಳು ಹಣ ಕೊಡುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ಮಹಿಳೆಯರಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. 2 ಸಾವಿರ ರು. ಹಣವನ್ನು ನಮ್ಮ ಖಾತೆಗಳಿಗೆ ಜಮೆ ಮಾಡುತ್ತಿದೆ. ಉಚಿತ ವಿದ್ಯುತ್ ಸೌಕರ್ಯ, ಅನ್ನಭಾಗ್ಯ ಯೋಜನೆ ಜಾರಿ ಮಾಡಿದೆ. ಆ ಮೂಲಕ ಚುನಾವಣಾ ಪೂರ್ವದಲ್ಲಿ ನುಡಿದಂತೆ ಅಧಿಕಾರಕ್ಕೆ ಬಂದ ಮೇಲೆ ಅವುಗಳನ್ನು ಜಾರಿಗೆ ತಂದು ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ. ಕೇಂದ್ರದಲ್ಲೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ನಮಗೆ ಇನ್ನು ಹೆಚ್ಚಿನ ಜನಪರ, ರೈತಪರ ಯೋಜನೆಗಳನ್ನು ಜಾರಿಗೊಳಿಸುವ ಭರವಸೆಯಿದೆ. ಆದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗಾಗಿ ನಾನು ಚಾಮುಂಡಿ ದೇವಿಯಲ್ಲಿ ಪ್ರಾರ್ಥನೆ ಸಲ್ಲಿಸಿ ಹರಕೆ ಹೊತ್ತು, ವಿಶೇಷ ಪೂಜೆ ಸಲ್ಲಿಸಿದ್ದೇವೆ. ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸಿಯೇ ಗೆಲ್ಲಿಸುತ್ತೇವೆ ಎಂದು ಹೇಳಿದರು.18ಕೆಆರ್ ಎಂಎನ್ 9,10,11.ಜೆಪಿಜಿ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರು ಗೆಲುವು ಸಾಧಿಸಲಿ ಎಂದು ಅಭಿಮಾನಿಗಳು ಪಾದಯಾತ್ರೆ ಮೂಲಕ ಬೆಟ್ಟ ಹತ್ತಿ ಸೂರಿನ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ