ಸುರೇಶ್‌ ಗೆಲುವು ಖಚಿತ: ಬಿ.ಕೆ.ಪವಿತ್ರಾ

KannadaprabhaNewsNetwork |  
Published : Apr 22, 2024, 02:02 AM IST
20ಕೆಆರ್ ಎಂಎನ್ 1.ಜೆಪಿಜಿರಾಮನಗರದ 27ನೇ ವಾರ್ಡಿನಲ್ಲಿ ವಿವೇಕಾನಂದ ನಗರ ಬಡಾವಣೆಯಲ್ಲಿ ನಗರಸಭೆ ಮಾಜಿ ಅಧ್ಯಕ್ಷೆ ಪವಿತ್ರಾರವರು ಕಾರ್ಯಕರ್ತರೊಂದಿಗೆ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. | Kannada Prabha

ಸಾರಾಂಶ

ರಾಮನಗರ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಹಿಳೆಯರು ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರಿಗೆ ಮತ್ತೊಮ್ಮೆ ಆಶೀರ್ವಾದ ಮಾಡುವ ಭರವಸೆಯನ್ನು ಮತದಾರರು ನೀಡುತ್ತಿದ್ದಾರೆ ಎಂದು ನಗರಸಭೆ ಮಾಜಿ ಅಧ್ಯಕ್ಷೆ ಬಿ.ಕೆ. ಪವಿತ್ರಾ ಹೇಳಿದರು.

ರಾಮನಗರ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಹಿಳೆಯರು ಮೆಚ್ಚುಗೆಯ ಮಾತುಗಳನ್ನಾಡುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಅವರಿಗೆ ಮತ್ತೊಮ್ಮೆ ಆಶೀರ್ವಾದ ಮಾಡುವ ಭರವಸೆಯನ್ನು ಮತದಾರರು ನೀಡುತ್ತಿದ್ದಾರೆ ಎಂದು ನಗರಸಭೆ ಮಾಜಿ ಅಧ್ಯಕ್ಷೆ ಬಿ.ಕೆ. ಪವಿತ್ರಾ ಹೇಳಿದರು.

ನಗರದ 27ನೇ ವಾರ್ಡಿನಲ್ಲಿ ವಿವೇಕಾನಂದ ನಗರ ಬಡಾವಣೆಯಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದ ಅವರು, ಡಿ.ಕೆ.ಸುರೇಶ್ ಅವರಿಗೆ ಮತ ನೀಡಬೇಕು. ಗ್ಯಾರಂಟಿ ಯೋಜನೆಗಳು ಜನ ಜೀವನವನ್ನು ಸುಧಾರಿಸಿದೆ.‌ ಗೃಹಲಕ್ಷಿ ಯೋಜನೆಯು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಹೆಚ್ಚು ಅನುಕೂಲವಾಗಿದೆ. ಮಾಸಿಕ 2 ಸಾವಿರ ರು. ಸಹಕಾರದಿಂದ ಕುಟುಂಬದ ಆರ್ಥಿಕ ಹೊರೆ ತುಸು ಕಡಿಮೆಯಾಗಿದೆ. ಗೃಹಜ್ಯೋತಿ ಯೋಜನೆಯಿಂದ ವಿದ್ಯುತ್ ಬಿಲ್ ಪಾವತಿಸುವ ಚಿಂತೆ ಇಲ್ಲ ಎಂದರು.

ರಾಮನಗರದಿಂದ ಬೆಂಗಳೂರಿಗೆ ಹಲವು ಮಂದಿ ಮಹಿಳೆಯರು ಉದ್ಯೋಗಕ್ಕೆ ಹೋಗುತ್ತಾರೆ.‌ ಇಂತಹ ಮಹಿಳಾ ಉದ್ಯೋಗಿಗಳಿಗೆ ಶಕ್ತಿ ಯೋಜನೆಯಿಂದ ಅನುಕೂಲವಾಗಿದೆ. ಉಚಿತ ಬಸ್ ಪ್ರಯಾಣದಿಂದ ಮಾಸಿಕ 2-3 ಸಾವಿರ ಹಣ ಉಳಿತಾಯವಾಗಲಿದೆ. ಈ ಎಲ್ಲಾ ಕಾರಣಗಳಿಂದ ಮಹಿಳಾ ಮತದಾರರು ಕಾಂಗ್ರೆಸ್ ಪರ ಹೆಚ್ಚು ಒಲವು ತೋರಿದ್ದಾರೆ ಎಂದರು.

ಅಲ್ಲದೆ ರಾಮನಗರ ಪಟ್ಟಣಕ್ಕೆ ಕೇವಲ 9 ತಿಂಗಳ ಅವಧಿಯಲ್ಲಿ 260 ಕೋಟಿ ಅನುದಾನವನ್ನು ಕಾಂಗ್ರೆಸ್ ಸರ್ಕಾರ ನೀಡಿದೆ. ಇದರಿಂದ ನಗರದ ಎಲ್ಲಾ ವಾರ್ಡುಗಳ ರಸ್ತೆ, ಚರಂಡಿ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳ ಕೊರತೆ ನೀಗಲಿದೆ. ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಯೋಜನೆಗಳು ಮತ್ತು ಗ್ಯಾರೆಂಟಿ ಯೋಜನೆಗಳ ಬೆಂಬಲ ಕಾರಣ ಸುರೇಶ್ ಅವರ ಗೆಲುವು ನಿಶ್ಚಿತ. ಸ್ತ್ರೀ ಶಕ್ತಿ ಮತಗಳು ಬಹುತೇಕ ಪ್ರಮಾಣದಲ್ಲಿ ಸುರೇಶ್ ಅವರಿಗೆ ದೊರೆಯುವುದು ಗ್ಯಾರೆಂಟಿ ಎಂದು ಪವಿತ್ರಾ ವಿಶ್ವಾಸ ವ್ಯಕ್ತಪಡಿಸಿದರು.ಈ ವೇಳೆ ಮುಖಂಡರಾದ ಲಕ್ಷ್ಮಿಕಾಂತ್ (ಪತಿ), ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಪ್ರವೀಣ್, ಮುಖಂಡರಾದ ಬಾಬಣ್ಣ, ರೇವಣ್ಣ, ಅರ್ಜುನ್, ಎಚ್.ವಿ.ಗೋವಿಂದರಾಜು, ತಿಬ್ಬೇಗೌಡ, ಅಂಬುಜಮ್ಮ ಸೇರಿದಂತೆ ಮತ್ತಿತರರು ಹಾಜರಿದ್ದರು.

20ಕೆಆರ್ ಎಂಎನ್ 1.ಜೆಪಿಜಿ

ರಾಮನಗರದ 27ನೇ ವಾರ್ಡಿನಲ್ಲಿ ವಿವೇಕಾನಂದ ನಗರ ಬಡಾವಣೆಯಲ್ಲಿ ನಗರಸಭೆ ಮಾಜಿ ಅಧ್ಯಕ್ಷೆ ಪವಿತ್ರಾರವರು ಕಾರ್ಯಕರ್ತರೊಂದಿಗೆ ಮನೆ ಮನೆಗೆ ತೆರಳಿ ಮತಯಾಚಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮ್ಮೇಳನ ಸಭಾಂಗಣ ನಿರ್ಮಾಣಕ್ಕೆ ಅನುದಾನ ನೀಡಲು ಸಿಎಂಗೆ ಮನವಿ
ಬಾಂಗ್ಲಾದಲ್ಲಿ ಹಿಂದೂಗಳ ನರಮೇಧ, ಹಿಂಸೆ ಸಲ್ಲದು