ಸೂರಿಂಜೆ ಕೋಟೆಯಿಂದ ಪೊನ್ನಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಸ್ತೆ ಕಾಂಕ್ರಿಟ್‌ ಕಾಮಗಾರಿ

KannadaprabhaNewsNetwork | Published : Feb 27, 2025 12:30 AM

ಸಾರಾಂಶ

ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಯಾಗಿರುವ 4.50 ಕೋಟಿ ರು. ಅನುದಾನದಲ್ಲಿ ನಿರ್ಮಾಣವಾಗಿರುವ ರುವ ಸೂರಿಂಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂರಿಂಜೆ ಕೋಟೆಯಿಂದ ಪೊನ್ನಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದವರೆಗಿನ ರಸ್ತೆ ಕಾಂಕ್ರಿಟ್‌ ಕಾಮಗಾರಿಯನ್ನು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಮೂಲ್ಕಿ

ಗ್ರಾಮಾಂತರ ಪ್ರದೇಶದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಉಮಾನಾಥ ಕೋಟ್ಯಾನ್ ಹೇಳಿದ್ದಾರೆ.

ಲೋಕೋಪಯೋಗಿ ಇಲಾಖೆಯಿಂದ ಬಿಡುಗಡೆಯಾಗಿರುವ 4.50 ಕೋಟಿ ರು. ಅನುದಾನದಲ್ಲಿ ನಿರ್ಮಾಣವಾಗಿರುವ ಸೂರಿಂಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂರಿಂಜೆ ಕೋಟೆಯಿಂದ ಪೊನ್ನಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದವರೆಗಿನ ರಸ್ತೆ ಕಾಂಕ್ರಿಟ್‌ ಕಾಮಗಾರಿ ಉದ್ಘಾಟಿಸಿ ಅವರು ಮಾತನಾಡಿದರು.

ಕಳೆದ ಬಾರಿ ಶಾಸಕನಾಗಿದ್ದ ಸಂದರ್ಭದಲ್ಲಿ ಮೂಡುಬಿದಿರೆ ಕ್ಷೇತ್ರದಲ್ಲಿ ಬಿಜೆಪಿ ಸರ್ಕಾರ ಇರುವಾಗ ಸುಮಾರು 2000 ಕೋಟಿ ರು. ಅನುದಾನ ತಂದು ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಿದ ತೃಪ್ತಿ ನನಗಿದೆ. ಪ್ರಸ್ತುತ ಮಧ್ಯ ಪದವು ಸರ್ಕಲ್ ನಿಂದ ಕಾಟಿಪಳ್ಳ 9 ನೇ ವಿಭಾಗ ಐ,ಟಿ,ಐ ತನಕದ ರಸ್ತೆ ಡಾಂಬರೀಕರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಸುಮಾರು 1 ಕೋಟಿ ರು. ಅನುದಾನ ಇರಿಸಿದ್ದು ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದರು.

ಈ ಸಂದರ್ಭ ಸೂರಿಂಜೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜೀತೆಂದ್ರ ಶೆಟ್ಟಿ , ಸದಸ್ಯರಾದ ದಿವಾಕರ ಶೆಟ್ಟಿ, ಬಿಜೆಪಿ ಪ್ರಮುಖರಾದ ಮನೋಹರ ಶೆಟ್ಟಿ ಸೂರಿಂಜೆ, ಅನಿಲ್ ಶೆಟ್ಟಿ ತೇವು ಸೂರಿಂಜೆ, ಶಶಿಧರ ಶೆಟ್ಟಿ ಸೂರಿಂಜೆ, ಚೇಳೈರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪುಷ್ಪರಾಜ್ ಶೆಟ್ಟ, ಜಯಪ್ರಕಾಶ್ ಸೂರಿಂಜೆ, ಸುಕೇಶ್ ಶೆಟ್ಟಿ ಸೂರಿಂಜೆ, ಗಿರೀಶ್ ಪೂಜಾರಿ ಸೂರಿಂಜೆ, ಧನಂಜಯ ಶೆಟ್ಟಿ ಸೂರಿಂಜೆ, ಅಶೋಕ ಶೆಟ್ಟಿ, ಮಿತ್ತೊಡಿಗುತ್ತು, ಜಗನ್ನಾಥ ಶೆಟ್ಟಿ ಸೂರಿಂಜೆ ಉಪತಹಸೀಲ್ದಾರ್‌ ನವೀನ್, ಕಂದಾಯ ಅಧಿಕಾರಿ ಪ್ರಸಾದ್, ಗ್ರಾಮ ಅಡಳಿತ ಅಧಿಕಾರಿ ಸುಲೋಚನಾ, ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ಪ್ರದ್ಯುಮ್ನ ರಾವ್ ಶಿಬರೂರು, ಯಶವಂತ ಶೆಟ್ಟಿ, ಸಂಪತ್ ಕೋಟೆ, ದಿನೇಶ್ ಕುಲ್ಲಂಗಾಲು, ಪ್ರಭಾಕರ ಶೆಟ್ಟಿ ಮಧ್ಯ, ಡಿ.ಕೆ ಶೆಟ್ಟಿ ಸೂರಿಂಜೆ ಮತ್ತಿತರರು ಇದ್ದರು.

Share this article