ರಾಜ್ಯಕ್ಕೆ ಸುರ್ಜೆವಾಲಾ ಸೂಪರ್‌ ಸಿಎಂ: ನಿಖಿಲ್‌ ಕುಮಾರಸ್ವಾಮಿ

KannadaprabhaNewsNetwork |  
Published : Jul 18, 2025, 12:49 AM IST
ನಿಖಿಲ್ ಕುಮಾರಸ್ವಾಮಿ | Kannada Prabha

ಸಾರಾಂಶ

ಕಾಂಗ್ರೆಸ್ ಶಾಸಕರು ಅನುದಾನ ಪಡೆಯಬೇಕಾದರೆ, ಸಿಎಂ ಕಡೆ ಮುಖ ಮಾಡ್ತಿಲ್ಲ, ಬದಲಾಗಿ ಸುರ್ಜೆವಾಲಾ ಭೇಟಿ ಮಾಡ್ತೀವಿ ಅಂತಿದಾರೆ. ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುವುದಕ್ಕೆ ಇದು ಸಣ್ಣ ಉದಾಹರಣೆ. ಸಿದ್ದರಾಮಯ್ಯ ಸಾಂವಿಧಾನಿಕ ಹುದ್ದೆ ಅಲಂಕರಿಸಿ ಕುಳಿತಿದ್ದಾರೆ. ಸೂಪರ್ ಸಿಎಂ ಸುರ್ಜೆವಾಲಾ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಜೆಡಿಎಸ್ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಾದಾಮಿ

ಕಾಂಗ್ರೆಸ್ ಶಾಸಕರು ಅನುದಾನ ಪಡೆಯಬೇಕಾದರೆ, ಸಿಎಂ ಕಡೆ ಮುಖ ಮಾಡ್ತಿಲ್ಲ, ಬದಲಾಗಿ ಸುರ್ಜೆವಾಲಾ ಭೇಟಿ ಮಾಡ್ತೀವಿ ಅಂತಿದಾರೆ. ಸರ್ಕಾರ ಯಾವ ರೀತಿ ನಡೆಯುತ್ತಿದೆ ಎಂಬುವುದಕ್ಕೆ ಇದು ಸಣ್ಣ ಉದಾಹರಣೆ. ಸಿದ್ದರಾಮಯ್ಯ ಸಾಂವಿಧಾನಿಕ ಹುದ್ದೆ ಅಲಂಕರಿಸಿ ಕುಳಿತಿದ್ದಾರೆ. ಸೂಪರ್ ಸಿಎಂ ಸುರ್ಜೆವಾಲಾ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಜೆಡಿಎಸ್ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವೆಲ್ಲ ಏಳೂವರೆ ಕೋಟಿ ಕನ್ನಡಿಗರು ಸಿದ್ದರಾಮಯ್ಯ ಸಿಎಂ ಎಂದು ಅಂದುಕೊಂಡಿದ್ದೆವು. ಆದರೆ, ಕಾಂಗ್ರೆಸ್‌ನ ಕೇಂದ್ರ ನಾಯಕರು, ಅದರಲ್ಲೂ ಸುರ್ಜೆವಾಲಾ ಅವರು ಏನು ಮಾಡುತ್ತಿದ್ದಾರೆ ಎಂಬುದನ್ನು ನೀವು (ಜನ) ನೋಡುತ್ತಿದ್ದಿರಿ. ಸುರ್ಜೆವಾಲಾ, ಕಾಂಗ್ರೆಸ್ ಕೇಂದ್ರ ನಾಯಕರೊಂದಿಗೆ ಸಿಎಂ ಸ್ಥಾನದ ಅಗ್ರಿಮೆಂಟ್ ಮಾಡಿಕೊಂಡಿದ್ದಾರಾ ಎಂಬ ಅನುಮಾನ ಜನರಲ್ಲಿ ಕಾಡುತ್ತಿದೆ ಎಂದು ದೂರಿದರು.

ಸಿಎಂ ಸಿದ್ದರಾಮಯ್ಯ ತಾವೇ ಐದು ವರ್ಷ ಮುಂದುವರೆಯುತ್ತೇನೆಂಬ ಹೇಳಿಕೆ ವಿಚಾರ ಪ್ರಸ್ತಾಪಿಸಿದ ಅವರು, ಮಾಧ್ಯಮಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಡಿಸಿಎಂ ಶಿವಕುಮಾರ್ ಜೊತೆಗೆ ಇಬ್ಬರು ಮೂವರು ಶಾಸಕರು ಇದ್ದರೆ ಹೆಚ್ಚು ಎಂದು. ಇದನ್ನು ನಾವು ಹೇಳುತ್ತಿಲ್ಲ. ಸ್ವತಃ ಸಿಎಂ ಹೇಳುತ್ತಿದಾರೆ ಎಂದು ವ್ಯಂಗ್ಯವಾಡಿದರು.

ಸಿಎಂ ಸ್ಥಾನದಿಂದ ಯಾರು ಕೆಳಗಿಳಿಸುತ್ತಾರೆ? ಕೆಪಿಸಿಸಿ ಅಧ್ಯಕ್ಷರ ಕುರ್ಚಿ ಮೇಲೆ ಯಾರು ಕಣ್ಣಿಟ್ಟಿದ್ದಾರೆ ? ಅದು ನಮಗೆ ಬೇಕಿಲ್ಲದ ವಿಚಾರ. ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತದಿಂದ ಸರ್ಕಾರ ರಚನೆ ಮಾಡಿದೆ. ಮಾತೆತ್ತಿದರೆ ಗ್ಯಾರಂಟಿ ಅಂತಾರೆ. ಪ್ರಣಾಳಿಕೆಯಲ್ಲಿ ಅವರೇ ಗ್ಯಾರಂಟಿ ಹೇಳಿದ್ರು, ಇದುವರೆಗೂ ಗ್ಯಾರಂಟಿಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿಲ್ಲ. ಧಾರ್ಮಿಕ ಗುರುಗಳು ಒಂದಷ್ಟು ಸಂದರ್ಭದಲ್ಲಿ, ನಮ್ಮ ಸಮುದಾಯ ನಾಯಕರು ಮುಂದೆ ಬಂದು ಕುಳಿತ ಸಂದರ್ಭದಲ್ಲಿ ಅವಕಾಶ ಸಿಗಲಿ ಎನ್ನುವ ಉದ್ದೇಶಕ್ಕೆ ಭಾವನೆ ವ್ಯಕ್ತಪಡಿಸಿದ್ದರಲ್ಲಿ ತಪ್ಪೇನಿಲ್ಲ ಎಂದು ಹೇಳಿದರು.

ನವೆಂಬರ್‌ನಲ್ಲಿ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ನಾನು ಅದರ ಬಗ್ಗೆ ಹೆಚ್ಚು ಮಾತನಾಡಲ್ಲ. ಏಕೆಂದರೆ ಸರ್ಕಾರಕ್ಕೆ ರಾಜ್ಯದ ಜನತೆ ಸಂಪೂರ್ಣ ಬಹುಮತದ ಆಶೀರ್ವಾದ ಮಾಡಿದ್ದಾರೆ. ವಾಮಮಾರ್ಗ ಮೂಲಕ ಸರ್ಕಾರ ರಚನೆಯ ಪ್ರಶ್ನೆಯೇ ಇಲ್ಲ. ನಾವು ವಿಪಕ್ಷದ ಸ್ಥಾನದಲ್ಲಿ ಕುಳಿತಿದ್ದೇವೆ, ಇನ್ನೂ ಮೂರು ವರ್ಷ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

PREV

Latest Stories

ನ್ಯಾಯಾಂಗದ ಸ್ವಾತಂತ್ರ್ಯ ರಕ್ಷಣೆಗೆ ಕ್ರಮ : ನ್ಯಾ.ವಿಭು
ಕೃಷ್ಣಾ ಮೇಲ್ದಂಡೆ-3 ಭೂಸ್ವಾಧೀನಕ್ಕೆ 2.01 ಲಕ್ಷ ಕೋಟಿ ಬೇಕು : ಸಚಿವ ಕೃಷ್ಣ
ನಮ್ಮ ಗ್ಯಾರಂಟಿ ಯೋಜನೆ ದೇಶಕ್ಕೇ ಮಾದರಿ - ಟೀಕಿಸಿದ್ದ ಬಿಜೆಪಿಯೇ ಕಾಪಿ ಮಾಡಿದೆ : ಡಿಸಿಎಂ ಡಿಕೆಶಿ