ಶರಣರು ಹಾಕಿ ಕೊಟ್ಟ ದಾರಿಯಲ್ಲಿ ನಡೆಯಿರಿ: ಬಸವರಾಜ ಕಮಡೊಳ್ಳಿ

KannadaprabhaNewsNetwork |  
Published : Feb 02, 2025, 11:47 PM IST
ಹುಬ್ಬಳ್ಳಿ ತಾಲೂಕಿನ ಕಿರೇಸೂರ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಕಲಿಕಾ ಕೇಂದ್ರವಾಗಿ ಅರಳಿಕಟ್ಟಿ ತೆರೆದ ವಾಚನಾಲಯದಲ್ಲಿ ವಿದ್ಯಾರ್ಥಿಗಳಿಗೊಂದು ಶರಣರ ವಚನ ಚಟುವಟಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. | Kannada Prabha

ಸಾರಾಂಶ

ವಿದ್ಯಾರ್ಥಿಗಳು ಶರಣರ ವಚನಗಳನ್ನು ಓದಿ ಅರ್ಥಮಾಡಿಕೊಳ್ಳಬೇಕು. ಶರಣರು ಹಾಕಿಕೊಟ್ಟ ದಾರಿಯಲ್ಲಿ ನಡೆಯಬೇಕು ಎಂದು ಶರಣ ಚಿಂತಕ ಬಸವರಾಜ ಕಮಡೊಳ್ಳಿ ಅಭಿಪ್ರಾಯ ಪಟ್ಟರು.

ಹುಬ್ಬಳ್ಳಿ: ವಿದ್ಯಾರ್ಥಿಗಳು ಶರಣರ ವಚನಗಳನ್ನು ಓದಿ ಅರ್ಥಮಾಡಿಕೊಳ್ಳಬೇಕು. ಶರಣರು ಹಾಕಿಕೊಟ್ಟ ದಾರಿಯಲ್ಲಿ ನಡೆಯಬೇಕು ಎಂದು ಶರಣ ಚಿಂತಕ ಬಸವರಾಜ ಕಮಡೊಳ್ಳಿ ಅಭಿಪ್ರಾಯ ಪಟ್ಟರು.

ತಾಲೂಕಿನ ಕಿರೇಸೂರ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಕಲಿಕಾ ಕೇಂದ್ರವಾಗಿ ಅರಳಿಕಟ್ಟಿ ತೆರೆದ ವಾಚನಾಲಯದಲ್ಲಿ ಡಿ.ಎಸ್.ಇ.ಆರ್.ಟಿ. ಸಹಯೋಗದಲ್ಲಿ ಇಂಡಿಯಾ ಫೌಂಡೇಶನ್ ಫಾರ್ ಆರ್ಟ್ಸ್, ಕಲಿ- ಕಲಿಸು ಕಲಾ ಅಂತರ್ಗತ ಕಲಿಕಾ ಯೋಜನೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವಿದ್ಯಾರ್ಥಿಗಳಿಗೊಂದು ಶರಣರ ವಚನ ಚಟುವಟಿಕೆಯಲ್ಲಿ ಭಾಗವಹಿಸಿ ಮಾತನಾಡಿದರು.ಬಸವಣ್ಣ ಸಾಮಾಜಿಕ ಕ್ರಾಂತಿಯ ಹರಿಕಾರ, ವೈಚಾರಿಕತೆ ಮತ್ತು ವೈಜ್ಞಾನಿಕ ತಳಹದಿಯ ಮೇಲೆ ಸಮಾಜವನ್ನು ಕಟ್ಟುವ ಪ್ರಯತ್ನ ಮಾಡಿದರು. ಅಸಮಾನತೆಯನ್ನು ತೊಡೆದು ಹಾಕಿ ಸಮ ಸಮಾಜ ನಿರ್ಮಿಸಲು ಶ್ರಮಿಸಿದವರು. ಬಸವಣ್ಣರಾದಿಯಾಗಿ ಶಿವಶರಣರು ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಸರಳ ಕನ್ನಡ ಭಾಷೆಯಲ್ಲಿ ವಚನಗಳನ್ನು ಬರೆದರು. ಕನ್ನಡವನ್ನು ದೇವಭಾಷೆಯನ್ನಾಗಿಸಿದರು.

ಮಹಿಳೆಯರಿಗೆ ಶಿಕ್ಷಣ ಬಸವಣ್ಣನವರ ಕಲ್ಪನೆಯಾಗಿತ್ತು. ಅನುಭವ ಮಂಟಪ ಜಗತ್ತಿನ ಮೊತ್ತ ಮೊದಲ ಸಂಸತ್ತು. ಅಲ್ಲಿ 250 ಶರಣರು, 35ಕ್ಕೂ ಹೆಚ್ಚು ಶರಣೆಯರು ತಮ್ಮ ವಿಚಾರಗಳನ್ನು, ವಚನಗಳನ್ನು ಹಂಚಿಕೊಳ್ಳುತ್ತಿದ್ದರು ಎಂದರು.

ಅತಿಥಿಗಳಾಗಿ ಆಗಮಿಸಿದ್ದ ಮುಖಂಡರಾದ ಸುನಿಲ ಗಣಿ, ಅಧ್ಯಕ್ಷತೆ ವಹಿಸಿದ್ದ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಮನ ತೇಲಂಗ ಮಾತನಾಡಿದರು. ಅರಳಿಕಟ್ಟೆ ಸಂಚಾಲಕ ಡಾ. ಲಿಂಗರಾಜ ರಾಮಾಪೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ವೇಳೆ ಶಾಲೆಯ ಶಿಕ್ಷಕರು, ಮಕ್ಕಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಣಸೆ, ಹಲಸು, ನೇರಳೆಗೆ ಮಂಡಳಿ ರಚಿಸಿ: ದೇವೇಗೌಡ
ಗುಮ್ಮ ಬಂದ ಗುಮ್ಮ, ಮಕ್ಕಳಿಗೆ ಹೊಡೆಯೋ ಗುಮ್ಮ!