ಶರಣಾದ ನಕ್ಸಲ್‌ ಲಕ್ಷ್ಮೀಗೆ ನ್ಯಾಯಾಂಗ ಬಂಧನ

KannadaprabhaNewsNetwork |  
Published : Feb 04, 2025, 12:31 AM IST
3ಲಕ್ಷ್ಮೀ | Kannada Prabha

ಸಾರಾಂಶ

ಉಡುಪಿ ಜಿಲ್ಲಾಡಳಿತದ ಮುಂದೆ ಭಾನುವಾರ ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟು ಅವರಿಗೆ ಕುಂದಾಪುರ ತಾಲೂಕು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ಜಿಲ್ಲಾಡಳಿತದ ಮುಂದೆ ಭಾನುವಾರ ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟು ಅವರಿಗೆ ಕುಂದಾಪುರ ತಾಲೂಕು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.ಉಡುಪಿ ಜೈಲಿನಲ್ಲಿರುವ ಆಕೆಯನ್ನು ಸೋಮವಾರ ಕುಂದಾಪುರ ನ್ಯಾಯಾಲಯದ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಅವರ ಮುಂದೆ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲಾಯಿತು.ಆಕೆ ಮೇಲೆ ಕುಂದಾಪುರ ತಾಲೂಕಿನ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ 3 ಪ್ರಕರಣಗಳಿವೆ. ಸೊಮವಾರ ಆಕೆಯನ್ನು ಕುಂದಾಪುರ ಡಿವೈಎಸ್ಪಿ ಅವರಿಗೆ ಹಸ್ತಾಂತರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯ ಹೆಚ್ಚಿನ ವಿಚಾರಣೆಗೆ ಪೊಲೀಸರು ತಮ್ಮ ವಶಕ್ಕೆ ಕೇಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಸೋಮವಾರ ಕುಂದಾಪುರ ಪೊಲೀಸರು ಆಕೆಯ ಕಸ್ಟಡಿಗೆ ಕೇಳಲಿಲ್ಲ. ಆದ್ದರಿಂದ ನ್ಯಾಯಾಧೀಶರು ಆಕೆಯನ್ನು ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು.ಆಕೆಯನ್ನು ವಿಚಾರಣೆಗೊಳಪಡಿಸಲು ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಡು ಒಂದೆರಡು ದಿನಗಳಲ್ಲಿ ಪೊಲೀಸ್ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ ಎನ್ನಲಾಗಿದೆ.ಇತರ ನಕ್ಸಲೀಯರೊಂದಿಗೆ ಕರಪತ್ರ ಅಂಟಿಸಿದ, ಪೊಲೀಸರ ಮೇಲೆ ಗುಂಡು ಹಾರಿಸಿದ, ಮನೆಗೆ ನುಗ್ಗಿ ಜೀವ ಬೆದರಿಕೆ ಒಡ್ಡಿದ ಆರೋಪದ 3 ಪ್ರಕರಣಗಳು ಆಕೆಯ ಮೇಲಿದ್ದು, ಅವುಗಳನ್ನು ಅಮಾಸೆಬೈಲು ಠಾಣೆಗೆ ವರ್ಗಾವಣೆ ಮಾಡಲಾಗಿದೆ.

........

ಕತ್ತಿಯಿಂದ ಕಡಿದು ಮಾರಣಾಂತಿಕ ಹಲ್ಲೆ

ವ್ಯಕ್ತಿಗೆ ಕತ್ತಿಯಿಂದ ಕಡಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕಾರ್ಕಳ ಕಸಬ ವ್ಯಾಪ್ತಿಯ ಶಿವತಿಕೆರೆಯಲ್ಲಿ ಎಂಬಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಜೋಡುರಸ್ತೆ ನಿವಾಸಿ ಮಹಮ್ಮದ್ ರಿಜ್ವಾನ್ ಹಲ್ಲೆಗೊಳಗಾದವರು .ರಿಜ್ವಾನ್ ಆತನ ಪತ್ನಿಯ ಅಣ್ಣ ಅಶ್ರಫ್ ರೆಂಜಾಳ ಹಲ್ಲೆ ಆರೋಪಿ.

ತಲೆ, ಕುತ್ತಿಗೆ, ಕಾಲಿಗೆ ಇರಿದಿದ್ದು, ಗಂಭೀರ ಗಾಯಗೊಂಡಿರುವ ರಿಜ್ವಾನ್‌ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆ ಗೆ ರವಾನಿಸಲಾಗಿದೆ.ಕಾರ್ಕಳ ಬೈಪಾಸ್ ರಸ್ತೆಯ ಶಿವತಿಕೆರೆಗೆ ರಿಜ್ವಾನ್‌ನನ್ನು ಕರೆಸಿಕೊಂಡ ಅಶ್ರಫ್ ಕಾರಿನಿಂದ ಇಳಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಈ ವೇಳೆ ಅದೇ ರಸ್ತೆಯಾಗಿ ಸ್ಕೂಟಿಯಲ್ಲಿ ಸಾಗುತ್ತಿದ್ದ ಮಹಿಳೆ ಗಾಯಾಳುವನ್ನು ಆಟೋದಲ್ಲಿ ಕುಳ್ಳಿರಿಸಿ ಆಸ್ಪತ್ರೆ ಸಾಗಿಸಿದ್ದಾರೆ.

ಘಟನೆ ಹಿನ್ನೆಲೆ:ಅಶ್ರಫ್‌ನ ತಂಗಿ ಮೈಮುನಾ 2017ರಲ್ಲಿ ಕಸಬಾ ಗ್ರಾಮ ಜೋಡುರಸ್ತೆಯ ಮಹಮ್ಮದ್ ರಿಜ್ವಾನ್‌ನನ್ನು ಮದುವೆಯಾಗಿದ್ದರು. ಗಂಡನ ಮನೆಯವರು ಹಿಂಸೆ, ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ನ. 28ರಂದು ಮೈಮುನಾ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಿಸದೆ ಡಿ. 2ರಂದು ಮೃತಪಟ್ಟಿದ್ದರು.

ಮೈಮೂನಾಳಿಗೆ ಅತ್ತೆ ಮನೆಯವರು ಮಾನಸಿಕ ಹಿಂಸೆ ನೀಡಿರುವ ಕುರಿತು ಮೈಮನಾ ಅಕ್ಕ ರಶೀದಾ ಬಾನು ಕಾರ್ಕಳ ನಗರ ಪೊಲೀಸ್‌ ಠಾಣೆಗೆ ದೂರು ದಾಖಲಿಸಿದ್ದರು. ಇದಕ್ಕೆ ಪ್ರತೀಕಾರವಾಗಿ ಹಲ್ಲೆ ನಡೆದಿರುವುದಾಗಿ ಹೇಳಲಾಗುತ್ತಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ