ಬೆಳೆ ಸಮೀಕ್ಷೆ ಮಾಡಿ ಸೌಲಭ್ಯ ಪಡೆಯಿರಿ

KannadaprabhaNewsNetwork |  
Published : Jul 17, 2024, 12:56 AM IST
ಚಿಕ್ಕನಾಯಕನಹಳ್ಳಿ ತಾಲೂಕು ಗೋಡೆಕೆರೆ ಗ್ರಾಮದ ರೈತರೊಂದಿಗೆ ಸಮಾಲೋಚನೆ ನಡೆಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ | Kannada Prabha

ಸಾರಾಂಶ

ರೈತರು ತಾವು ಬೆಳೆದ ಬೆಳೆಗಳ ವಿವರವನ್ನು ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆಗೆ ದಾಖಲಿಸಿ ಸರ್ಕಾರಿ ಸೌಲಭ್ಯಗಳನ್ನು ಪಡೆಯಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್

ಕನ್ನಡಪ್ರಭ ವಾರ್ತೆ ತುಮಕೂರುರೈತರು ತಾವು ಬೆಳೆದ ಬೆಳೆಗಳ ವಿವರವನ್ನು ಮೊಬೈಲ್ ಆ್ಯಪ್ ಮೂಲಕ ಬೆಳೆ ಸಮೀಕ್ಷೆಗೆ ದಾಖಲಿಸಿ ಸರ್ಕಾರಿ ಸೌಲಭ್ಯಗಳನ್ನು ಪಡೆಯಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದರು. ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ಗೋಡೆಕೆರೆ ಗ್ರಾಮದ ರೈತರ ಜಮೀನುಗಳಿಗಿಂದು ಭೇಟಿ ನೀಡಿ ರೈತರೊಂದಿಗೆ ಸಮಾಲೋಚನೆ ನಡೆಸಿ ಮಾತನಾಡಿದ ಅವರು, ಬೆಳೆ ವಿಮೆ, ಬೆಳೆ ಪರಿಹಾರ, ಬೆಳೆ ಸಾಲ, ಬೆಂಬಲ ಬೆಲೆ ಖರೀದಿ ಮತ್ತಿತರ ಕೃಷಿ ಇಲಾಖೆಯ ಸವಲತ್ತು ವಿತರಣೆಗೆ ಬೆಳೆ ಸಮೀಕ್ಷೆ ಅತೀ ಮುಖ್ಯ. ರೈತರೇ ಸ್ವತಃ ಮೊಬೈಲ್ ಆ್ಯಪ್ ಮೂಲಕ ತಮ್ಮ ಜಮೀನಿನ ಬೆಳೆ ವಿವರಗಳನ್ನು ತಂತ್ರಾಂಶದಲ್ಲಿ ಅಪ್‌ಲೋಡ್ ಮಾಡುವುದರಿಂದ ನ್ಯೂನ್ಯತೆಗಳನ್ನು ಕಡಿಮೆ ಮಾಡಬಹುದು ಎಂದು ತಿಳಿಸಿದರು. ಬೆಳೆ ಸಮೀಕ್ಷೆಯಲ್ಲಿ ಸಂಗ್ರಹಿಸಲಾದ ಮಾಹಿತಿಯನ್ನು ಗ್ರಾಮಗಳಿಗೆ ನಿಯೋಜಿಸಿರುವ ವಿವಿಧ ಇಲಾಖೆಗಳ ಮೇಲ್ವಿಚಾರಣಾ ಅಧಿಕಾರಿಗಳು ಪರಿಶೀಲಿಸಿ ಅನುಮೋದಿಸುತ್ತಾರೆ. ರೈತರು ಬೆಳೆ ಸಮೀಕ್ಷೆಯಲ್ಲಿ ಸಂಗ್ರಹಿಸಲಾದ ತಮ್ಮ ಜಮೀನಿನ ಬೆಳೆ ವಿವರದ ಮಾಹಿತಿ ಬೇಕಿದ್ದಲ್ಲಿ ಬೆಳೆ ದರ್ಶಕ ಮೊಬೈಲ್ ಆ್ಯಪ್ ಬಳಸಿ ವೀಕ್ಷಿಸಬಹುದಾಗಿದೆ. ಬೆಳೆ ದರ್ಶಕ ಆ್ಯಪ್‌ನಲ್ಲಿ ಮಾಹಿತಿ ವ್ಯತ್ಯಾಸಗಳಿದ್ದಲ್ಲಿ ರೈತರು ಮನವಿ ಮಾಡಿ ತಪ್ಪುಗಳನ್ನು ಸರಿಪಡಿಸಿಕೊಳ್ಳಬಹುದಾಗಿದೆ. ಬೆಳೆ ಸಮೀಕ್ಷೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ಸಹಾಯವಾಣಿ ಸಂಖ್ಯೆ: 1800 425 3553ನ್ನು ಸಂಪರ್ಕಿಸಿ ಪಡೆಯಬಹುದಾಗಿದೆ ಎಂದು ತಿಳಿಸಿದರು. ನಂತರ ಚಿಕ್ಕನಾಯಕನಹಳ್ಳಿ ಹಿಂದುಳಿದ ವರ್ಗಗಳ ಸರ್ಕಾರಿ ಬಾಲಕಿಯರ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿ ನಿಲಯ ಅಡುಗೆ ಕೋಣೆ, ವಿದ್ಯಾರ್ಥಿಗಳ ಕೊಠಡಿ, ಭೋಜನಾಲಯವನ್ನು ಪರಿಶೀಲಿಸಿದರು. ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾಗಿರುವುದರಿಂದ ಹೆಚ್ಚುವರಿಯಾಗಿ ಕೊಠಡಿಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅವರಿಗೆ ಸೂಚನೆ ನೀಡಿದರು. ಇದಕ್ಕೂ ಮುನ್ನ ತಿಪಟೂರು ತಾಲೂಕಿನ ವಿವಿಧ ಗ್ರಾಮಗಳ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಸಮೀಕ್ಷೆ ಕೈಗೊಳ್ಳುವ ಕಾರ್ಯ ವಿಧಾನವನ್ನು ಪರಿಶೀಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!