ಕನ್ನಡಪ್ರಭ ವಾರ್ತೆ ಸಿಂಧನೂರು
ಈ ವೇಳೆ ನಗರಸಭೆಯ ಕಾರ್ಯಪಾಲಕ ಎಂಜಿನಿಯರ್ ಮನ್ಸೂರ್ ಅಹ್ಮದ್, ಲೋಕೋಪಯೋಗಿ ಇಲಾಖೆಯ ಕಿರಿಯ ಎಂಜಿನಿಯರ್ ಅಮರೇಶ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಸುಮಾರು 50 ಅಡಿ ಅಗಲದ ರಸ್ತೆ ಇರಬೇಕು ಎಂದು ಶಾಸಕರಿಗೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಹಂಪನಗೌಡ ಬಾದರ್ಲಿ, ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಅಗತ್ಯವಿರುವ ಜಾಗದ ಕುರಿತು ಸರ್ವೆ ನಡೆಸಿ, ಮಾರ್ಕೌಟ್ ಮಾಡಿ. ರಸ್ತೆ ಜಾಗ ಅತಿಕ್ರಮಿಸಿರುವ ವ್ಯಾಪಾರಸ್ಥರಿಗೆ ಹಾಗೂ ಕಟ್ಟಡ ನಿರ್ಮಿಸಿಕೊಂಡಿರುವ ಮಾಲೀಕರಿಗೆ ನೋಟಿಸ್ ನೀಡಲು ತಿಳಿಸಿದರು.ಎರಡು ಬದಿಯಲ್ಲಿ ಚರಂಡಿ ನಿರ್ಮಾಣ, ಎರಡು ಬದಿ ಎರಡು ಲೈನ್ ರಸ್ತೆ ನಿರ್ಮಿಸಿ ಡಿವೈಡರ್ ಬರುವಂತೆ ಕ್ರಿಯಾಯೋಜನೆ ತಯಾರಿಸಿ ಕೊಟ್ಟರೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಅನುದಾನ ಬಿಡುಗಡೆ ಮಾಡಿಸಲಾಗುವುದು. ವಿದ್ಯುತ್ ಸೇರಿ ಕೇಬಲ್ ವೈರ್‌ಗಳನ್ನು ನೆಲದಲ್ಲಿ ಬರುವಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ಅಧಿಕಾರಿಗಳು, ಮುಖಂಡರು ಸೇರಿ ಅನೇಕರು ಇದ್ದರು.