ಜಿಲ್ಲೆಯಲ್ಲಿ ಸಮೀಕ್ಷಾ ಕಾರ್ಯ ಶೇ.63.45 ಪೂರ್ಣ

KannadaprabhaNewsNetwork |  
Published : Oct 05, 2025, 01:00 AM IST
4ಕೆಆರ್ ಎಂಎನ್ 1.ಜೆಪಿಜಿರಾಮನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಜೆ.ಎನ್. ಶ್ರೀಕಂಠಯ್ಯರವರು  ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025ರ ಸಮೀಕ್ಷಾ ಕಾರ್ಯದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. | Kannada Prabha

ಸಾರಾಂಶ

ರಾಮನಗರ: ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಇದೂವರೆಗೆ ಶೇ.63.45ರಷ್ಟು ಪೂರ್ಣಗೊಂಡಿದ್ದು ಸರ್ವೇ ಕಾರ್ಯ ಉತ್ತಮ ಪ್ರಗತಿಯಲ್ಲಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಜೆ.ಎನ್. ಶ್ರೀಕಂಠಯ್ಯ ಪ್ರಶಂಶಿಸಿದರು.

ರಾಮನಗರ: ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಇದೂವರೆಗೆ ಶೇ.63.45ರಷ್ಟು ಪೂರ್ಣಗೊಂಡಿದ್ದು ಸರ್ವೇ ಕಾರ್ಯ ಉತ್ತಮ ಪ್ರಗತಿಯಲ್ಲಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಜೆ.ಎನ್. ಶ್ರೀಕಂಠಯ್ಯ ಪ್ರಶಂಶಿಸಿದರು.

ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025ರ ಸಮೀಕ್ಷಾ ಕಾರ್ಯದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 3,45,883 ಜಿಯೋ ಟ್ಯಾಗ್ ಮಾಡಿರುವ ಕುಟುಂಬಗಳಿವೆ. 3,164 ಗಣತಿ ಬ್ಲಾಕ್‌ಗಳನ್ನು ರಚಿಸಲಾಗಿದ್ದು, 3,149 ಗಣತಿದಾರರನ್ನು ನಿಯೋಜಿಸಿ ಉತ್ತಮ ಗಣತಿ ಕಾರ್ಯ ಕೈಗೊಳ್ಳಲಾಗಿದೆ. ಗಣತಿದಾರರು ಹಾಗೂ ಮೇಲ್ವಿಚಾರಕರ ಪ್ರತಿಫಲದಿಂದಾಗಿ ಜಿಲ್ಲೆಯಲ್ಲಿ ಇದುವರೆಗೂ ಶೇ.63.45 ಸಮೀಕ್ಷಾ ಕಾರ್ಯ ಪೂರ್ಣಗೊಂಡಿದೆ ಎಂದರು.

ಜಿಲ್ಲೆಯಲ್ಲಿ ಉತ್ತಮ ಪ್ರಗತಿಯನ್ನು ಶ್ಲಾಘಿಸಿ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಲಾಗುವುದು ಈ ಸಮೀಕ್ಷಾ ಕಾರ್ಯದಲ್ಲಿ ಯಾವುದಾದರೂ ಸಮಸ್ಯೆ ಅಥವಾ ನ್ಯೂನ್ಯತೆಗಳು ಕಂಡುಬಂದರೆ ತಮ್ಮ ಗಮನಕ್ಕೆ ತರುವಂತೆ ತಿಳಿಸಿದರು.

ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಮಾತನಾಡಿ, ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಲು ಎಲ್ಲಾ ರೀತಿಯ ಪೂರ್ವ ಸಿದ್ಧತೆ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಹಾಗೂ ಪ್ರತಿದಿನದ ಪ್ರಗತಿ ಪರಿಶೀಲಿಸಲು ನಿಯಮಿತವಾಗಿ ತಹಸೀಲ್ದಾರರು, ತಾಪಂ ಇಒಗಳು ಸೇರಿದಂತೆ ಸಮೀಕ್ಷಾ ಅಧಿಕಾರಿಗಳು, ಸಿಬ್ಬಂದಿಯೊಂದಿಗೆ ಆನ್‌ಲೈನ್ ಸಭೆಗಳನ್ನು ನಡೆಸಲಾಗುತ್ತಿದೆ ಎಂದರು.

ಸಭೆಯಲ್ಲಿ ಹಿಂದುಳಿದ ವರ್ಗಗಳ ಇಲಾಖೆ ಜಿಲ್ಲಾ ಅಧಿಕಾರಿ ಬಿಲಾಲ್, ಉಪವಿಭಾಗಾಧಿಕಾರಿ ಬಿನೋಯ್, ಜಿಪಂ ಸಿಇಒ ಅನ್ಮೋಲ್ ಜೈನ್, ಎಡೀಸಿ ಆರ್. ಚಂದ್ರಯ್ಯ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸ್ವಾಮಿ ಹಾಗೂ ಸಂಬಂಧಿಸಿದ ಅಧಿಕಾರಿಗಳು ಉಪಸ್ಥಿತರಿದ್ದರು.

4ಕೆಆರ್ ಎಂಎನ್ 1.ಜೆಪಿಜಿ

ರಾಮನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಜೆ.ಎನ್. ಶ್ರೀಕಂಠಯ್ಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025ರ ಸಮೀಕ್ಷಾ ಕಾರ್ಯದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

PREV

Recommended Stories

ಚಲನಚಿತ್ರ ಪ್ರಶಸ್ತಿ ಪಡೆದ ನಟ, ನಟಿ, ನಿರ್ದೇಶಕರ ಅಭಿಮತ
‘ಅಗತ್ಯ ಬಂದಾಗ ಸೂಕ್ತ ನಿರ್ಧಾರ ಕೈಗೊಳ್ಳೋ ಸಾಮರ್ಥ್ಯ ಪಕ್ಷಕ್ಕಿದೆ’