₹2 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇಯರ್‌

KannadaprabhaNewsNetwork |  
Published : Aug 23, 2026, 01:15 AM IST
 | Kannada Prabha

ಸಾರಾಂಶ

ಚಿಕ್ಕಮಗಳೂರುಕೃಷಿ ಜಮೀನಿನ ಸರ್ವೆ ನಡೆಸಿ ಸ್ಕೆಚ್ ತಯಾರಿಸಿಕೊಡಲು ₹10 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡವಾಗಿ ₹2 ಲಕ್ಷ ಪಡೆಯುತ್ತಿದ್ದ ವೇಳೆ ಇಬ್ಬರು ಸರ್ವೇ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಇಂದಾವರ ಗ್ರಾಮದಲ್ಲಿ ನಡೆದಿದೆ.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಕೃಷಿ ಜಮೀನಿನ ಸರ್ವೆ ನಡೆಸಿ ಸ್ಕೆಚ್ ತಯಾರಿಸಿಕೊಡಲು ₹10 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಮುಂಗಡವಾಗಿ ₹2 ಲಕ್ಷ ಪಡೆಯುತ್ತಿದ್ದ ವೇಳೆ ಇಬ್ಬರು ಸರ್ವೇ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಇಂದಾವರ ಗ್ರಾಮದಲ್ಲಿ ನಡೆದಿದೆ.ಚಿಕ್ಕಮಗಳೂರು ತಾಲೂಕಿನ ಸರ್ವೆಯರ್‌ಗಳಾದ ದೊರೆರಾಜ್ ಹಾಗೂ ರಂಗನಾಥ್ ಲೋಕಾಯುಕ್ತ ಬಲೆಗೆ ಬಿದ್ದವರು. ಇಂದಾವರ ಗ್ರಾಮದ ಧರಣೇಶ್ ಅವರ ಕೃಷಿ ಜಮೀನಿನ ಸರ್ವೆ ನಡೆಸಿ ಸ್ಕೆಚ್ ತಯಾರಿಸಲು ಇಬ್ಬರು ಅಧಿಕಾರಿಗಳು ₹10 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಈ ಕುರಿತು ಧರಣೇಶ್ ಚಿಕ್ಕಮಗಳೂರು ಲೋಕಾಯುಕ್ತ ಕಚೇರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾ ಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ನಗರದ ಹೊರವಲಯದಲ್ಲಿರುವ ಅಧಿಕಾರಿಗಳ ಖಾಸಗಿ ಕಚೇರಿಯಲ್ಲಿ ₹2 ಲಕ್ಷ ಮುಂಗಡ ಲಂಚ ಪಡೆಯುತ್ತಿದ್ದ ವೇಳೆ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ಚಿಕ್ಕಮಗಳೂರು ಲೋಕಾಯುಕ್ತ ಡಿವೈಎಸ್‌ಪಿ ತಿರುಮಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಇಬ್ಬರು ಸರ್ವೇಯರ್‌ಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬುಗುಡನಹಳ್ಳಿ ಕೆರೆಗೆ ಹೇಮಾವತಿ ನೀರು: ಡಿಸಿಎಂ ಪರಮೇಶ್ವರ್ ಭೇಟಿ
ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಎಲ್ಲರೂ ಪಾಲ್ಗೊಳ್ಳಿ: ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸಲಹೆ