ಕನ್ನಡಪ್ರಭ ವಾರ್ತೆ ಭದ್ರಾವತಿ
ಮಂಗಳವಾರ ತಾಲೂಕು ಕಚೇರಿ ಮುಂಭಾಗ ಸಮಿತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಧರಣಿ ಸತ್ಯಾಗ್ರಹದ ನೇತೃತ್ವ ವಹಿಸಿ ಮಾತನಾಡಿದರು. ತಿಂಗಳುಗಟ್ಟಲೆ ಕೆಲಸಕ್ಕೆ ಹಾಜರಾಗದೆ ರೈತರ ಜಮೀನುಗಳನ್ನು ಸರ್ವೆ ಮಾಡದೆ ನಿರ್ಲಕ್ಷ್ಯವಹಿಸಿರುವ ಕಾರಣ ಸರ್ವೆ ಮಾಡಿಕೊಡಲು ಸಲ್ಲಿಸಿರುವ ಸಾವಿರಾರು ಅರ್ಜಿಗಳು ಬಾಕಿ ಉಳಿದಿವೆ. ಇದರಿಂದಾಗಿ ರೈತರು ಸಾಕಷ್ಟು ತೊಂದರೆ ಎದುರಿಸುವಂತಾಗಿದೆ ಎಂದು ದೂರಿದರು.
ಸರ್ಕಾರ ತಕ್ಷಣ ಖಾಸಗಿ ಸರ್ವೆಯರ್‌ಗಳ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವೇ ತಿಂಗಳು ಗಟ್ಟಲೆ ಕೆಲಸಕ್ಕೆ ಹಾಜರಾಗದೆ ಸರ್ವೆ ಮಾಡದೆ ಇರುವ ಸರ್ವೆಯರ್‌ಗಳನ್ನು ಕೆಲಸದಿಂದ ವಜಾ ಮಾಡಬೇಕೆಂದು ಆಗ್ರಹಿಸಿದರು.ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡರವರು ಇಲಾಖೆಗೆ ಸಂಬಂಧಿಸಿದಂತೆ ಅನೇಕ ಬದಲಾವಣೆಗಳನ್ನು ತಂದಿರುವುದು ಸ್ವಾಗತಾರ್ಹವಾಗಿರುತ್ತದೆ. ಆದರೆ ಸರ್ವೆ ಇಲಾಖೆಯಲ್ಲಿ ಇರುವ ಭ್ರಷ್ಟಾಚಾರ ಮತ್ತು ನಿರ್ಲಕ್ಷ್ಯದ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕಾಗಿರುವುದು ಅತ್ಯಾವಶ್ಯಕವಾಗಿದೆ ಎಂದರು.
ತಾಲೂಕು ಕಚೇರಿಯಲ್ಲಿ ಹಲವು ತಿಂಗಳಿನಿಂದ ಲಿಫ್ಟ್ ಹಾಳಾಗಿದ್ದು, ಈ ಲಿಫ್ಟ್ ಸರಿಪಡಿಸದೇ ನಿರ್ಲಕ್ಷ್ಯತನವಹಿಸಲಾಗಿದೆ. ಈ ಲಿಫ್ಟ್ ಇಲ್ಲದೇ ಕಚೇರಿಯ ಸಿಬ್ಬಂದಿಗಳು, ವಯೋ ವೃದ್ಧರು, ವಿಕಲಚೇತನರು, ಮಹಿಳೆಯರು ಮಹಡಿಯಿಂದ ಮಹಡಿಗೆ ಓಡಾಡಲು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ತಕ್ಷಣ ಲಿಫ್ಟ್ ಸರಿಪಡಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಉಪ ತಹಸೀಲ್ದಾರ್ ಮಂಜಾನಾಯ್ಕರವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ್, ಸರ್ವೇ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.