ಜನಪದ ಕಲೆಯಲ್ಲಿ ಕನ್ನಡ ಭಾಷೆ ಉಳಿವು: ಶಾಸಕಿ ಲತಾ

KannadaprabhaNewsNetwork |  
Published : Nov 02, 2024, 01:23 AM IST
ಹರಪನಹಳ್ಳಿ ಪಟ್ಟಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರನ್ನು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಸನ್ಮಾನಿಸಿ ಗೌರವಿಸಿದರು. ಎಸಿ ಚಿದಾನಂದ ಗುರುಸ್ವಾಮಿ, ತಹಶೀಲ್ದಾರ ಗಿರೀಶಬಾಬು, ಸಿಪಿಐ ನಾಗರಾಜ ಕಮ್ಮಾರ , ಎಂ.ವಿ.ಅಂಜಿನಪ್ಪ ಇತರರು ಇದ್ದರು. | Kannada Prabha

ಸಾರಾಂಶ

ಕಲೆ, ಸಾಹಿತ್ಯ, ಸಂಸ್ಕೃತಿ, ಸಂಪತ್ತನ್ನು ಒಳಗೊಂಡಿರುವ ಕನ್ನಡ ಭಾಷೆ ಜಗತ್ತಿನಲ್ಲೇ ಪ್ರಸಿದ್ಧಿ ಪಡೆದಿದೆ.

ಹರಪನಹಳ್ಳಿ: ಜನಪದ ಕಲೆಯಲ್ಲಿ ಕನ್ನಡ ಭಾಷೆ ಉಳಿದಿದೆ ಎಂದು ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಹೇಳಿದರು.

ಪಟ್ಟಣದ ಸರ್ಕಾರಿ ಜ್ಯೂನಿಯರ್ ಕಾಲೇಜಿನ ಗಾಂಧಿ ಮೆಮೋರಿಯಲ್ ಹಾಲ್ ಸಭಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಸಮಿತಿಯಿಂದ ಆಯೋಜಿಸಿದ್ದ 69ನೇ ಕನ್ನಡ ರಾಜೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಲೆ, ಸಾಹಿತ್ಯ, ಸಂಸ್ಕೃತಿ, ಸಂಪತ್ತನ್ನು ಒಳಗೊಂಡಿರುವ ಕನ್ನಡ ಭಾಷೆ ಜಗತ್ತಿನಲ್ಲೇ ಪ್ರಸಿದ್ಧಿ ಪಡೆದಿದೆ. ಕನ್ನಡ ಭಾಷೆಗೆ 5 ಸಾವಿರ ವರ್ಷಗಳ ಇತಿಹಾಸವಿದೆ. ಆಲೂರು ವೆಂಕಟರಾಯರು ಏಕೀಕರಣ ಹೋರಾಟ ಆರಂಭಿಸಿದ್ದರು. ಪ್ರತಿ ದೇಶದಲ್ಲಿ ಕನ್ನಡ ಅಭಿಮಾನಿಗಳು ಇದ್ದು, ಜಗತ್ತೇ ಕನ್ನಡವನ್ನು ಪ್ರೀತಿಸುತ್ತಿದೆ ಎಂದರು.

ಕನ್ನಡ ಜಾನಪದ, ವಚನಗಳನ್ನು ಬೇರೆ ಬೇರೆ ದೇಶದಲ್ಲಿ ಅಳವಡಿಸಿಕೊಂಡಿರುವುದು ಹೆಮ್ಮೆಯ ವಿಚಾರವಾಗಿದೆ. ಇತರೆ ಭಾಷೆಗಳ ಜೊತೆಗೆ ಕನ್ನಡ ಉಳಿಸಿ, ಬೆಳೆಸಲು ಮುಂದಾಗಬೇಕು. ಮುಂದಿನ ದಿನಗಳಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ತಾಲೂಕು ಆಡಳಿತದ ಜೊತೆಗೆ ನಾನು ಸಹ ಕೈಜೋಡಿಸುವೆ. ಕನ್ನಡ ಪರ ಸಂಘಟನೆಗಳ ಸಹಕಾರ ಅಗತ್ಯ ಎಂದರು.

ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹರಿದು ಹಂಚಿ ಹೋಗಿದ್ದ ರಾಜ್ಯವನ್ನು ಕರ್ನಾಟಕ ಏಕೀಕರಣದ ಮೂಲಕ ಒಗ್ಗೂಡಿಸಿದ ಮಹನೀಯರನ್ನು ಸ್ಮರಿಸಬೇಕು. ಕರ್ನಾಟಕ ಕಲೆ, ಸಾಹಿತ್ಯ, ಸಂಗೀತ ಸೇರಿದಂತೆ ಎಲ್ಲ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ ಎಂದು ಹೇಳಿದರು.

ಕಸಾಪ ಅಧ್ಯಕ್ಷ ಕೆ.ಉಚ್ಚೆಂಗೆಪ್ಪ ಮಾತನಾಡಿ, ಕನ್ನಡ ರಾಜೋತ್ಸವ ಕಾರ್ಯಕ್ರಮದಲ್ಲಿ ಕಸಾಪ ಅಧ್ಯಕ್ಷರ ಕಡೆಗಣನೆಯಾಗಿದೆ. ಕನ್ನಡ ಭವನ ನಿರ್ಮಿಸಿ, ಕನ್ನಡ ಸಾಹಿತ್ಯ ಪರಿಷತ್ತು ಹೆಸರಲ್ಲಿ ಮಾಡಿಕೊಡಬೇಕು ಎಂದು ಶಾಸಕರಲ್ಲಿ ಮನವಿ ಮಾಡಿದರು.

ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಎನ್.ಜಿ. ಮನೋಹರ ಕನ್ನಡ ರಾಜ್ಯೋತ್ಸವ ಕುರಿತು ವಿಶೇಷ ಉಪನ್ಯಾಸ ನೀಡಿ, ನೋವಿನಲ್ಲೂ ಕನ್ನಡ ಸಾಹಿತ್ಯ ಹುಟ್ಟುವುದು ಕನ್ನಡ ಭಾಷೆ ಮಾತ್ರ. ಕನ್ನಡ ನಾಡು, ನುಡಿ ಬಗ್ಗೆ ಅಭಿಮಾನ ಹೆಚ್ಚಾಗಬೇಕು ಎಂದು ಹೇಳಿದರು.

ಕರವೇ ತಾಲೂಕು ಅಧ್ಯಕ್ಷ ಗಿರಜ್ಜಿ ನಾಗರಾಜ ಮಾತನಾಡಿದರು.

ಕನ್ನಡದಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ತಹಶೀಲ್ದಾರ ಬಿ.ವಿ. ಗಿರೀಶಬಾಬು, ತಾಪಂ ಇಒ ವೈ.ಎಚ್. ಚಂದ್ರಶೇಖರ, ಸಿಪಿಐ ನಾಗರಾಜ ಎಂ.ಕಮ್ಮಾರ, ಪುರಸಭೆ ಮುಖ್ಯಾಧಿಕಾರಿ ಎರಗುಡಿ ಶಿವಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಲೇಪಾಕ್ಷಪ್ಪ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗಂಗಪ್ಪ, ಪುರಸಭೆ ಸದಸ್ಯರಾದ ಎಂ.ವಿ. ಅಂಜಿನಪ್ಪ, ಟಿ.ವೆಂಕಟೇಶ, ಅಬ್ದುಲ್ ರೆಹಮಾನ್, ಲಾಟಿ ದಾದಾಪೀರ, ಮಂಜುನಾಥ ಇಜಂತಕರ್, ಜಾಕೀರ ಹುಸೇನ್, ಹನುಮಕ್ಕ ಚಿಕ್ಕೇರಿ ಬಸಪ್ಪ, ನಜೀರ್, ಹನುಮಂತಪ್ಪ, ಸಾಹಿತಿ ಇಸ್ಮಾಯಿಲ್ ಎಲಿಗಾರ, ಸೈಯದ್ ಇರ್ಫಾನ್, ನಿಚ್ಚವನಹಳ್ಳಿ ಭೀಮಪ್ಪ, ಇಸಿಒ ಗಿರಜ್ಜಿ ಮಂಜುನಾಥ,ಸಿಆರ್‌ ಪಿ ಸಲೀಂ, ಸೇರಿದಂತೆ ಇತರರು ಇದ್ದರು.

PREV

Recommended Stories

ರಾಹುಲ್‌ ಗಾಂಧಿ ಧರಣಿಗೆ 4500 ಪೊಲೀಸರ ಭದ್ರತೆ
ಹಳಿತಪ್ಪಿದ ಬೆಂಗಳೂರು ಉಪನಗರ ರೈಲು ಯೋಜನೆ : ಕೆ-ರೈಡ್ ಜತೆಗಿನ ಎಲ್‌ ಆ್ಯಂಡ್‌ ಟಿ ಗುತ್ತಿಗೆ ರದ್ದು