ಕನ್ನಡಪ್ರಭ ವಾರ್ತೆ ಕೆ.ಆರ್. ನಗರ
ಡಿ. 4ರ ಬುಧವಾರ ಬೆಳಗ್ಗೆ 9.30ಕ್ಕೆ ಗಣಪತಿಪೂಜೆ, ಪುಣ್ಯಾಹ, ಪಂಚಗವ್ಯ ಹೋಮ, ವಾಸ್ತು ಹೋಮ, ರಾಕ್ಷೋಘ್ನ ಹೋಮ, ಕ್ಷೇತ್ರಬಲಿ ಮತ್ತು ದಿಗ್ಬಲಿಪೂಜೆ ನಡೆಯಲಿದ್ದು, ಸಂಜೆ 7ಕ್ಕೆ ಪ್ರಸಾದ ವಿನಿಯೋಗ ಮಾಡಲಾಗುತ್ತದೆ.
ಕಾರ್ಯಕ್ರಮದ ಸಾನಿಧ್ಯವನ್ನು ಕಾಗಿನೆಲೆ ಕನಕಗುರು ಪೀಠ ಮೈಸೂರು ವಿಭಾಗ ಮಠದ ಶಿವಾನಂದಪುರಿ ಸ್ವಾಮೀಜಿ ಮತ್ತು ಗಾವಡಗೆರೆ ಗುರುಲಿಂಗ ಜಂಗಮ ಮಠದ ನಟರಾಜ ಸ್ವಾಮೀಜಿ ವಹಿಸಲಿದ್ದು, ಶಾಸಕ ಡಿ. ರವಿಶಂಕರ್ ಅಧ್ಯಕ್ಷತೆ ವಹಿಸುವರು.ಡಿ. 5ರ ಗುರುವಾರ ಬೆಳಗ್ಗೆ 7 ರಿಂದ 10ರವರೆಗೆ ಮಹಾಸಂಕಲ್ಪ, ಕಳಸ ಸ್ಥಾಪನೆ ಮತ್ತು ಪೂಜಾ ಜಪ ಹೋಮಾಧಿಗಳು ನಡೆಯಲಿದ್ದು 10.30 ರಿಂದ 1.30ರವರೆಗೆ ಉಚಿತ ಆರೋಗ್ಯ ತಪಾಸಣೆ ಮಾಡಲಿದ್ದು, ಆನಂತರ ಸಂಜೆ 4ಕ್ಕೆ ಸುತ್ತೂರು ಮಠದ ಶಿವರಾತ್ರಿದೇಶಿಕೇಂದ್ರ ಶ್ರೀಗಳು ದೇವಾಲಯದ ಸ್ವಾಗತ ಕಾಮಾನ್ ಅನ್ನು ಉದ್ಘಾಟಿಸಿ, ಶ್ರೀ ಸೂರ್ಯಪುತ್ರ ಸಭಾ ಭವನದ ಪ್ರಸಾದ ಭವನಕ್ಕೆ ಗುದ್ದಲಿ ಪೂಜೆ ನಡೆಸಿ ಆನಂತರ ಆಶೀರ್ವಚನ ನೀಡುವರು.
ಮುಖ್ಯಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿ.ಪಿ. ರಮೇಶ್ ಕುಮಾರ್, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಣ್ಣಲಿಂಗಪ್ಪ, ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯ ಎಲ್.ಪಿ. ರವಿಕುಮಾರ್, ಉದ್ಯಮಿ ಎಸ್.ವಿ.ಎಸ್. ಸುರೇಶ್ ಭಾಗವಹಿಸುವರು.
ಕಾಗಿನೆಲೆ ಕನಕಗುರು ಪೀಠದ ಡಾ. ನಿರಂಜನಾನಂದ ಸ್ವಾಮೀಜಿ, ಆದಿ ಚುಂಚನಗಿರಿ ಮಠಾಧಿಪತಿ ಡಾ. ನಿರ್ಮಲಾನಂದ ಸ್ವಾಮೀಜಿ ಮತ್ತು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೆಂದ್ರಹೆಗ್ಗಡೆ ಸಾನ್ನಿಧ್ಯ ವಹಿಸುವರು.
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಉದ್ಘಾಟಿಸಲಿದ್ದು, ಶಾಸಕ ಡಿ. ರವಿಶಂಕರ್ ಅಧ್ಯಕ್ಷತೆ ವಹಿಸುವರು. ಮುಖ್ಯಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಎಚ್. ವಿಶ್ವನಾಥ್, ಡಾ. ಯತೀಂದ್ರ ಸಿದ್ದರಾಮಯ್ಯ, ಡಾ.ಡಿ. ತಿಮ್ಮಯ್ಯ, ಗುಂಡ್ಲುಪೇಟೆ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್, ಮಾಜಿ ಸಚಿವ ಸಾ.ರಾ. ಮಹೇಶ್, ಕೆಪಿಸಿಸಿ ಕಾರ್ಯಕಾರಿಣಿ ಸದಸ್ಯ ದೊಡ್ಡಸ್ವಾಮೇಗೌಡ, ನವನಗರ ಬ್ಯಾಂಕ್ ಅಧ್ಯಕ್ಷ ಕೆ.ಎನ್. ಬಸಂತ್, ಪುರಸಭೆ ಸದಸ್ಯರಾದ ಕೆ.ಪಿ. ಪ್ರಭುಶಂಕರ್, ನಟರಾಜು, ರಾಜ್ಯ ಆರ್ಟಿಒ ಅಧಿಕಾರಿಗಳ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್, ಮೂಳೆ ತಜ್ಞ ಡಾ. ಮೆಹಬೂಬ್ ಖಾನ್ ಮತ್ತು ಮುಖಂಡ ಚೌಡೇಗೌಡ ಭಾಗವಹಿಸುವರು.