ಯಲಿಯೂರು ಗ್ರಾಪಂ ಅಧ್ಯಕ್ಷರಾಗಿ ಸುಷ್ಮಾ ಮೋಹನ್

KannadaprabhaNewsNetwork |  
Published : Dec 19, 2024, 12:31 AM IST
18ಶಿರಾ1:  ಶಿರಾ ತಾಲೂಕಿನ ಯಲಿಯೂರು ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಸುಷ್ಮಾ ಮೋಹನ್ ಅವಿರೋಧವಾಗಿ ಆಯ್ಕೆಯಾದರು. | Kannada Prabha

ಸಾರಾಂಶ

ಶಿರಾ ತಾಲೂಕಿನ ಯಲಿಯೂರು ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಸುಷ್ಮಾ ಮೋಹನ್ ಅವಿರೋಧವಾಗಿ ಆಯ್ಕೆಯಾದರು.

ಕನ್ನಡಪ್ರಭ ವಾರ್ತೆ ಶಿರಾಶಿರಾ ತಾಲೂಕಿನ ಯಲಿಯೂರು ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಸುಷ್ಮಾ ಮೋಹನ್ ಅವಿರೋಧವಾಗಿ ಆಯ್ಕೆಯಾದರು.ನಂತರ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು ಯಲಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಮೂಲಭೂತ ಸೌಲಭ್ಯ ಸೇರಿದಂತೆ ಕುಡಿಯವ ನೀರು, ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿ ಜನ ಮೆಚ್ಚುವಂತಹ ಕೆಲಸ ಮಾಡುವ ಮೂಲಕ ಅಧ್ಯಕ್ಷ ಸ್ಥಾನಕ್ಕೆ ಗೌರವ ತರುತ್ತೇನೆ. ಗ್ರಾಮಗಳ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿ ಕೆಲಸ ಮಾಡಿದಾಗ ಮಹಾತ್ಮ ಗಾಂಧಿ ಕಂಡತಹ ಗ್ರಾಮ ಸ್ವರಾಜ್ ಪರಿಕಲ್ಪನೆ ಸಾಕಾರಗೊಳ್ಳಲಿದೆ. ಗ್ರಾಮ ಪಂಚಾಯಿತಿಗೆ ಬರುವಂತಹ ಸಾರ್ವಜನಿಕರಿಗೆ ಪ್ರೀತಿ ವಿಶ್ವಾಸದಿಂದ ಮಾತನಾಡಿ ಅವರ ಸಮಸ್ಯೆಯನ್ನು ಬಗೆಹರಿಸಬೇಕು. ಪರಸ್ಪರ ಸ್ನೇಹ ಸಂಬಂಧ ಜನಸ್ನೇಹಿ ಆಡಳಿತಕ್ಕೆ ಮುನ್ನಡೆ ಬರೆಯಲಿದೆ. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಸಿಬ್ಬಂದಿ ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ಯಲಿಯೂರು ಗ್ರಾಪಂ ಉಪಾಧ್ಯಕ್ಷ ರಾಮಚಂದ್ರಣ್ಣ, ಸದಸ್ಯರಾದ ಆಶಾ ಲೋಹಿತ್, ನಾಗವೇಣಿ ವೆಂಕಟರಾಮು, ಸಿದ್ದಗಂಗಮ್ಮ ಶ್ರೀನಿವಾಸ, ಮಾಜಿ ಉಪಾಧ್ಯಕ್ಷೆ ಲಕ್ಕಮ್ಮ ಗಂಗಣ್ಣ, ಗಂಗಮ್ಮ ಹನುಮಂತರಾಜು, ಶಿವಮ್ಮ ರಾಜಣ್ಣ, ನವೀನ್, ಸತೀಶ್ ಕುಮಾರ್, ಭಾಗ್ಯಮ್ಮ ರಂಗನಾಥ, ಪಿಡಿಒ ಜುಂಜೇಗೌಡ, ಎಸ್ ಡಿ ಎ ವೆಂಕಟರಾಮು, ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಣ್ಣ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಈರಣ್ಣ, ರಾಮಣ್ಣ ,ಪುನೀತ್ ಕುಮಾರ್, ಮುಖಂಡರಾದ ತಿಮ್ಮರಾಜು, ರಾಜೇಶ್ ರಾಮಣ್ಣ ಬೂತೇಶ ಜಯಣ್ಣ ಹನುಮೇಶ್ ಸೇರಿದಂತೆ ಹಲವರು ಅಭಿನಂದಿಸಿದರು. ಚುನಾವಣಾಧಿಕಾರಿಯಾಗಿ ತಹಸೀಲ್ದಾರ್ ಸಚ್ಚಿದಾನಂದ ಕುಚನೂರ ಕಾರ್ಯನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಫಿಸಿಯೋಥೆರಪಿಗೆ ವಿಶ್ವಾದ್ಯಂತ ವಿಫುಲ ಅವಕಾಶ : ಯುಟಿ ಖಾದರ್‌
ಪುತ್ರನ ಪಾಸ್‌ಪೋರ್ಟ್‌ಗಾಗಿ ಅನಂತ್‌ ಕೋರ್ಟ್‌ಗೆ ಮನವಿ