ಕುಂದಗೋಳ:
ಅವರು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮುಖ್ಯ ಶಿಕ್ಷಕಿಯ ಅಮಾನತು ಖಂಡಿಸಿ ಗ್ರಾಮಸ್ಥರು, ವಿದ್ಯಾರ್ಥಿಗಳು ಬುಧವಾರ ಪ್ರತಿಭಟನೆ ನಡೆಸಿದ್ದರು. ಮಕ್ಕಳ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಮುಖ್ಯ ಶಿಕ್ಷಕಿಯನ್ನು ಮರು ನೇಮಕ ಮಾಡಲಾಗಿದೆ. ಜತೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಇದಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸಲಾಗಿದ್ದು, ಶಾಂತಾ ಹೂಗಾರ ಅವರನ್ನು ಹಿರೇಹರಕುಣಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮರು ನಿಯೋಜಿಸಲಾಗಿದೆ. ಎಲ್ಲ ವಿದ್ಯಾರ್ಥಿಗಳು ಶುಕ್ರವಾರದಿಂದ ನಿಯಮಿತವಾಗಿ ಶಾಲೆಗೆ ಹಾಜರಾಗಿ ತಮ್ಮ ಶಿಕ್ಷಣ ಚಟುವಟಿಕೆಗಳನ್ನು ಮುಂದುವರಿಸಲಿದ್ದಾರೆ ಎಂದರು.ಮುಖ್ಯ ಶಿಕ್ಷಕಿಯ ಮರುನೇಮಕ ಆದೇಶ ಮಾಡಿದ ಹಿನ್ನೆಲೆ ಗುರುವಾರ ಗ್ರಾಮಸ್ಥರು, ವಿದ್ಯಾರ್ಥಿಗಳು, ಗ್ರಾಮ ಶಿಕ್ಷಣ ಸಮಿತಿ ಸದಸ್ಯರು. ಮುಖ್ಯ ಶಿಕ್ಷಕಿ ಶಾಂತಾ ಹೂಗಾರ ಅವರನ್ನು ಹೂಗುಚ್ಚ ನೀಡಿ ಶಾಲೆಗೆ ಬರಮಾಡಿಕೊಂಡರು.