ಕಾಂಗ್ರೆಸ್ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡುವ ಕಾರ್ಯ ಮಾಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು. ಲಕ್ಷ್ಮೇಶ್ವರ ಸಮೀಪ ಶಿಗ್ಲಿಯಲ್ಲಿ ಬಿಜೆಪಿ ಪ್ರತಿಭಟನೆಯಲ್ಲಿ ಅವರು ಪಾಲ್ಗೊಂಡಿದ್ದರು.
ಲಕ್ಷ್ಮೇಶ್ವರ: ಕಾಂಗ್ರೆಸ್ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡುವ ಕಾರ್ಯ ಮಾಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಬುಧವಾರ ಸಮೀಪದ ಶಿಗ್ಲಿ ಗ್ರಾಮದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತ ಸಮುದಾಯದ ಓಲೈಕೆ ಹಾಗೂ ತುಷ್ಟೀಕರಣದ ರಾಜಕಾರಣ ಮಾಡುವ ಮೂಲಕ ಹಿಂದುಳಿದ ಸಮುದಾಯಕ್ಕೆ ಅಪಮಾನ ಮಾಡಿದೆ. ಅಲ್ಲದೆ ಸಂವಿಧಾನ ವಿರೋಧಿ ಕಾರ್ಯ ಮಾಡುತ್ತಿರುವುದು ಖಂಡನೀಯ. ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ನೀಡುತ್ತಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿರುವ ವಿರುದ್ಧ ಮತ್ತು ಹನಿಟ್ರ್ಯಾಪ್ ವಿಷಯಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಹೋರಾಟ ಮಾಡಿದ 18 ಶಾಸಕರನ್ನು ಅಮಾನತು ಮಾಡಿರುವ ಸ್ಪೀಕರ್ ನಡೆ ಖಂಡನಾರ್ಹ. ಸ್ಪೀಕರ್ ಯು.ಟಿ. ಖಾದರ ಅವರು ಸಂವಿಧಾನ ಎತ್ತಿ ಹಿಡಿಯುವ ಬದಲು ಕಾಂಗ್ರೆಸ್ ಮುಖವಾಣಿಯಾಗಿರುವುದು ನೋವಿನ ಸಂಗತಿಯಾಗಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಶಿರಹಟ್ಟಿ ಮಂಡಲ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ, ಗಂಗಾಧರ ಮೆಣಸಿನಕಾಯಿ, ಅನಿಲ ಮುಳುಗುಂದ, ಅಶೋಕ ಶಿರಹಟ್ಟಿ, ಡಿ.ವೈ. ಹನಗುಂದ, ಸಂಜೀವ ದೇಸಾಯಿ, ಕೃಷ್ಣ ಬಿದರಳ್ಳಿ, ಅನಿಲ ಮುಳಗುಂದ, ವೀರಣ್ಣ ಅಕ್ಕುರ, ಹುಚ್ಚಪ್ಪ ಹೂಗಾರ, ನಟರಾಜ ಪವಾಡದ, ಪರಶುರಾಮ ತಳವಾರ, ತುಕ್ಕಪ್ಪ ಪೂಜಾರ, ಮುತ್ತಣ್ಣ ತೋಟದ, ಮನೋಜ್ ರಗಟಿ, ಮಹಾಂತೇಶ ತಳವಾರ, ಎಸ್.ವಿ. ಹರ್ತಿ, ವಿಶಾಲ ಬಟಗುರ್ಕಿ, ಬಸವರಾಜ ಬೆಳಗಟ್ಟಿ ಉಪಸ್ಥಿತರಿದ್ದರು. ಶಿರಹಟ್ಟಿ ಮಂಡಲ ವಿವಿಧ ಮೋರ್ಚಾದ ಪ್ರಮುಖರ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.