ಶಾಸಕರ ಅಮಾನತು ಅಸಾಂವಿಧಾನಾತ್ಮಕ: ಕಿಶೋರ್‌ಕುಮಾರ್‌

KannadaprabhaNewsNetwork |  
Published : Mar 27, 2025, 01:01 AM IST
26ಬಿಜೆಪಿ | Kannada Prabha

ಸಾರಾಂಶ

18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿರುವ ಸ್ಪೀಕರ್, ಮುಸ್ಲಿಂ ತುಷ್ಟೀಕರಣಕ್ಕಾಗಿ ಅಗತ್ಯ ಬಿದ್ದರೆ ಸಂವಿಧಾನ ಬದಲಾಗುತ್ತದೆ ಎಂಬ ಉಪ ಮುಖ್ಯಮಂತ್ರಿ ಹೇಳಿಕೆ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಸಾರ್ವಜನಿಕ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ 4 ಮೀಸಲಾತಿ ನೀಡುವ ಸರ್ಕಾರ, ಹನಿಟ್ರ್ಯಾಪ್ ಪ್ರಕರಣವನ್ನು ಸದನದಲ್ಲಿ ಪ್ರಶ್ನಿಸಿದ 18 ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿರುವ ಸ್ಪೀಕರ್, ಮುಸ್ಲಿಂ ತುಷ್ಟೀಕರಣಕ್ಕಾಗಿ ಅಗತ್ಯ ಬಿದ್ದರೆ ಸಂವಿಧಾನ ಬದಲಾಗುತ್ತದೆ ಎಂಬ ಉಪ ಮುಖ್ಯಮಂತ್ರಿ ಹೇಳಿಕೆ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್‌ ಕುಮಾರ್ ಕುಂದಾಪುರ ಮಾತನಾಡಿ, ವಿಧಾನ ಸಭೆಯಲ್ಲಿ ಸ್ಪೀಕರ್ ಅವರು ಬಿಜೆಪಿಯ 18 ಶಾಸಕರನ್ನು 6 ತಿಂಗಳು ಅಮಾನತು ಮಾಡಿರುವುದು ಕಾನೂನುಬಾಹಿರ, ಅಸಾಂವಿಧಾನಾತ್ಮಕ, ಏಕಪಕ್ಷೀಯ ತೀರ್ಮಾನವಾಗಿದೆ. ಇದು ಶಾಸಕರಿಗೆ ಅಷ್ಟೇ ಅಲ್ಲದೆ ಕ್ಷೇತ್ರದ ಮತದಾರರಿಗೂ ಮಾಡಿದ ಘೋರ ಅವಮಾನವಾಗಿದೆ ಎಂದರು.

ಕಾಂಗ್ರೆಸ್ ಮತ್ತೊಮ್ಮೆ ತುಷ್ಟೀಕರಣದ ತನ್ನ ಹಳೇ ಚಾಳಿ ಮುಂದುವರಿಸಿದೆ. ಸಾರ್ವಜನಿಕ ಗುತ್ತಿಗೆಯಲ್ಲಿ ಶೇ.4ರಷ್ಟು ಮೀಸಲಾತಿಯನ್ನು ಮುಸ್ಲಿಮರಿಗೆ ನೀಡುವುದು, ಹೊರದೇಶಕ್ಕೆ ವಿದ್ಯಾಭ್ಯಾಸಕ್ಕೆ ಹೋಗುವ ಮುಸ್ಲಿಂ ವಿದ್ಯಾರ್ಥಿಗಳಿಗೆ ನೀಡುವ ಸಹಾಯ ಧನವನ್ನು 30 ಲಕ್ಷ ರು.ಗಳಿಗೆ ಹೆಚ್ಚಳ ಮಾಡಿರುವುದು, ಶಾದಿ ಭಾಗ್ಯಕ್ಕೆ ಹಣ ನೀಡುವ ನಿರ್ಧಾರ ತೆಗೆದುಕೊಂಡಿರುವುದು ಮತ್ತು ಮುಸ್ಲಿಂ ಹೆಣ್ಣು ಮಕ್ಕಳಿಗೆ ಮಾತ್ರ ಆತ್ಮರಕ್ಷಣೆಗಾಗಿ ವಿಶೇಷ ಅನುದಾನ ನೀಡುವುದು ಕಾಂಗ್ರೆಸ್‌ನ ಅತಿಯಾದ ತುಷ್ಟೀಕರಣ ರಾಜಕಾರಣದ ಮುಂದುವರಿದ ಭಾಗವಾಗಿದೆ ಎಂದು ಅವರು ಆರೋಪಿಸಿದರು.

ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲ. ಆದರೂ ಕಾಂಗ್ರೆಸ್ ಸರ್ಕಾರ ಮುಸ್ಲೀಮರಿಗೆ ಶೇ 4 ಮೀಸಲಾತಿಯ ನಿರ್ಧಾರ ಅಂಬೇಡ್ಕರ್‌ ಅವರ ಸಂವಿಧಾನಕ್ಕೆ ಮಾಡಿರುವ ಘೋರ ಅಪಮಾನವಾಗಿದೆ. ಇದಕ್ಕೆ ಪೂರಕವೆಂಬಂತೆ ಮುಸ್ಲಿಂ ತುಷ್ಟೀಕರಣಕ್ಕಾಗಿ ಅಗತ್ಯ ಬಿದ್ದರೆ ಸಂವಿಧಾನ ಬದಲಾಗುತ್ತದೆ ಎಂಬ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಡಿ.ಕೆ. ಶಿವಕುಮಾರ್ ರಾಜ್ಯದ ಜನತೆಯ ಕ್ಷಮೆ ಕೋರಬೇಕು ಎಂದವರು ಅಗ್ರಹಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಬಿತ್ತಿ ಪತ್ರಗಳನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ಅಪರ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಅಹವಾಲು ಸಲ್ಲಿಸಲಾಯಿತು.

ಕಾಪು ಶಾಸಕ ಸುರೇಶ್ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಪಕ್ಷದ ಮುಖಂಡರಾದ ರಾಜೇಶ್ ಕಾವೇರಿ, ಸದಾನಂದ ಉಪ್ಪಿನಕುದ್ರು, ಮಹಾವೀರ ಹೆಗ್ಡೆ, ರತ್ನಾಕರ್ ಇಂದ್ರಾಳಿ, ಶಿವಕುಮಾರ್ ಅಂಬಲಪಾಡಿ, ಶ್ರೀಕಾಂತ್ ನಾಯಕ್, ಉದಯ ಕೋಟ್ಯಾನ್, ವಿಜಯ ಕುಮಾರ್ ಉದ್ಯಾವರ, ಶ್ರೀನಿಧಿ ಹೆಗ್ಡೆ, ಗಿರೀಶ್ ಎಮ್. ಅಂಚನ್, ಪ್ರಿಯದರ್ಶಿನಿ ದೇವಾಡಿಗ, ವಿಜಯ ಕೊಡವೂರು, ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಸಂಧ್ಯಾ ರಮೇಶ್, ಕಮಲಾಕ್ಷ ಹೆಬ್ಬಾರ್, ದಿನೇಶ್ ಅಮೀನ್, ಜಿತೇಂದ್ರ ಶೆಟ್ಟಿ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಶ್ರೀಕಾಂತ್ ಕಾಮತ್, ನಳಿನಿ ಪ್ರದೀಪ್ ರಾವ್ ಮುಂತಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ