ದೇವರಹಿಪ್ಪರಗಿ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ತಾಲೂಕಿನ ಜಾಲವಾದ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಜರುಗಿದೆ. ಮಹ್ಮದ ಇಸಾಕ್ ನಬಿಸಾಬ ಬಾಗವಾನ(26) ಕೊಲೆಯಾದ ಯುವಕ. ಅನೈತಿಕ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ರಾತ್ರಿ ವೇಳೆ ಯುವಕನ ಮನೆಯ ಮುಂದಿನ ಕಟ್ಟಿ ಮೇಲೆ ಮಲಗಿದ್ದ ವೇಳೆ ಮಾರಕಾಸ್ತ್ರಗಳಿಂದ ಭೀಕರವಾಗಿ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ.

ಈ ಬಗ್ಗೆ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಮೃತನ ತಂದೆ ಪ್ರಕರಣ ದಾಖಲಿಸಿ ಆಗ್ರಹಿಸಿದ್ದಾರೆ. ಕೊಲೆ ನಡೆದ ಸ್ಥಳಕ್ಕೆ ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಹಾಗೂ ಡಿವೈಎಸ್ಪಿ ಟಿ.ಎಸ್.ಸುಲ್ಫಿ, ಸಿಪಿಐ ರಮೇಶ ಅವಜಿ, ಪಿಎಸ್‌ಐ ಸಚೀನ ಆಲಮೇಲಕರ, ಕ್ರೈಂ ವಿಭಾಗದ ಪಿಎಸ್‌ಐ ಪ್ರೇಮಾ ಚೌರ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.