ಸುಸ್ಥಿರ ಅಭಿವೃದ್ಧಿಗೆ ಗ್ರಾಪಂಗಳ ಸಂಕಲ್ಪ ಅಗತ್ಯ: ಜಿಪಂ ಸಿಇಒ ಕೆ.ಆರ್.ನಂದಿನಿ

KannadaprabhaNewsNetwork |  
Published : Jul 25, 2025, 12:30 AM IST
೨೪ಕೆಎಂಎನ್‌ಡಿ-೭ಮಂಡ್ಯದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಪಂಚಾಯತ್ ಪ್ರಗತಿ ಸೂಚ್ಯಂಕ ೨.೦ ತರಬೇತಿ ಕಾರ್ಯಾಗಾರ ಜಿಪಂ ಸಿಇಓ ಕೆ.ಆರ್.ನಂದಿನಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಕೃಷಿ, ತೋಟಗಾರಿಕೆ, ಆರೋಗ್ಯ, ಶಿಕ್ಷಣ ಸೇರಿದಂತೆ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಗ್ರಾಮ ಪಂಚಾಯ್ತಿಗಳನ್ನು ಬಡತನ ಮುಕ್ತ, ಆರೋಗ್ಯವಂತ, ಮಹಿಳಾ, ಮಕ್ಕಳ ಸ್ನೇಹಿ, ಸಾಮಾಜಿಕ ಸುರಕ್ಷಾ ಹಾಗೂ ಉತ್ತಮ ಮೂಲಭೂತ ಸೌಕರ್ಯ ಹೊಂದಿರುವ ಗ್ರಾಪಂಗಳನ್ನಾಗಿಸಲು ಶ್ರಮಿಸಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಗ್ರಾಮ ಪಂಚಾಯ್ತಿಗಳು ಸುಸ್ಥಿರ ಅಭಿವೃದ್ಧಿ ಸಾಧಿಸಲು ಸಂಕಲ್ಪ ಮಾಡುವ ಮೂಲಕ ಸಮಗ್ರ ಅಭಿವೃದ್ಧಿ, ಕಾರ್ಯಕ್ಷಮತೆ ಹಾಗೂ ಪ್ರಗತಿಯನ್ನು ಉತ್ತಮಗೊಳಿಸಬೇಕು ಜಿಪಂ ಸಿಇಒ ಕೆ.ಆರ್.ನಂದಿನಿ ಅವರು ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಸಲಹೆ ನೀಡಿದರು.

ಜಿಲ್ಲಾ ಪಂಚಾಯ್ತಿ ಕಾವೇರಿ ಸಭಾಂಗಣದಲ್ಲಿ ನಡೆದ ಪಂಚಾಯ್ತಿ ಪ್ರಗತಿ ಸೂಚ್ಯಂಕ ೨.೦ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಕೃಷಿ, ತೋಟಗಾರಿಕೆ, ಆರೋಗ್ಯ, ಶಿಕ್ಷಣ ಸೇರಿದಂತೆ ಇತರೆ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಗ್ರಾಮ ಪಂಚಾಯ್ತಿಗಳನ್ನು ಬಡತನ ಮುಕ್ತ, ಆರೋಗ್ಯವಂತ, ಮಹಿಳಾ, ಮಕ್ಕಳ ಸ್ನೇಹಿ, ಸಾಮಾಜಿಕ ಸುರಕ್ಷಾ ಹಾಗೂ ಉತ್ತಮ ಮೂಲಭೂತ ಸೌಕರ್ಯ ಹೊಂದಿರುವ ಗ್ರಾಪಂಗಳನ್ನಾಗಿಸಲು ಶ್ರಮಿಸುವಂತೆ ಸೂಚಿಸಿದರು.

ಪಂಚಾಯ್ತಿ ಪ್ರಗತಿ ಸೂಚ್ಯಂಕದಲ್ಲಿ ೯ ವಿಷಯಗಳಿದ್ದು, ಪ್ರತಿಯೊಂದು ಗ್ರಾಮ ಪಂಚಾಯ್ತಿಯು ೯ ವಿಷಯಗಳಲ್ಲಿಯೂ ನಿಗತ ಗುರಿ ಸಾಸಿದಾಗ ಮಾತ್ರ ಉತ್ತಮ ಗ್ರಾಮ ಪಂಚಾಯ್ತಿ ಆಗಲು ಸಾಧ್ಯ. ಆದ್ದರಿಂದ ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತಮ್ಮ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಇತರೆ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರ ಪಡೆಯುವಂತೆ ನಿರ್ದೇಶನ ನೀಡಿದರು.

ಪಂಚಾಯ್ತಿ ಪ್ರಗತಿ ಸೂಚ್ಯಂಕಕ್ಕೆ ಮಾಹಿತಿ ದಾಖಲಿಸುವ ಕುರಿತು ತರಬೇತಿ ಕಾರ್ಯಾಗಾರ ಏರ್ಪಡಿಸಲಾಗಿದ್ದು, ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಹಾಯಕ ನಿರ್ದೇಶಕರು (ಪಂ.ರಾಜ್) ಹಾಗೂ ೧೪ನೇ ಕಾಡೂರು ಗ್ರಾಪಂ ಅಧ್ಯಕ್ಷ ಜಲೇಂದ್ರ ಶೆಟ್ಟಿ ಅವರನ್ನು ತರಬೇತಿ ಕಾರ್ಯಾಗಾರದಲ್ಲಿ ತಮ್ಮ ಜಿಲ್ಲೆಯ ಅನುಭವ ಹಂಚಿಕೊಳ್ಳಲು ಆಹ್ವಾನಿಸಲಾಗಿತ್ತು.

ಜಿಲ್ಲಾ ಪಂಚಾಯ್ತಿ ಮುಖ್ಯ ಯೋಜನಾಕಾರಿ, ಧನುಷ್, ಉಪಕಾರ್ಯದರ್ಶಿ (ಆಡಳಿತ) ಧನರಾಜ್, ಮುಖ್ಯ ಲೆಕ್ಕಾಕಾರಿ, ಶ್ರೀನಿವಾಸನಾಯಕ್, ಗ್ರಾಪಂ ಚುನಾಯಿತ ಪ್ರತಿನಿಧಿಗಳ ಒಕ್ಕೂಟದ ಅಧ್ಯಕ್ಷ ಪ್ರದೀಪ್, ಉಪಾಧ್ಯಕ್ಷ ಸುವರ್ಣಾವತಿ ಹಾಗೂ ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ಎಲ್ಲಾ ತಾಪಂಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಆಯ್ದ ಪಿಡಿಒ ಮತ್ತು ಡಿಇಒಗಳು ತರಬೇತಿಯಲ್ಲಿ ಪಾಲ್ಗೊಂಡಿದ್ದರು.

PREV

Recommended Stories

ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ದ್ವೇಷ ಭಾಷಣ ತಡೆ, ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮಸೂದೆ