ಕನ್ನಡಪ್ರಭ ವಾರ್ತೆ ಮಂಡ್ಯ
ತೆಲಂಗಾಣ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಂದ ಶರಣ-ಶರಣೆಯರು ಪಾಲ್ಗೊಳ್ಳುತಿದ್ದಾರೆ. ಒಟ್ಟು ೫೦ ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದ್ದು ಚನ್ನಬಸವೇಶ್ವರ ಜ್ಞಾನಪೀಠದ ಪೀಠಾಧ್ಯಕ್ಷ ಶ್ರೀಚನ್ನಬಸವಾನಂದ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಕಲ್ಯಾಣ ಪರ್ವ ನಡೆಯಲಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅ.೧೯ರ ಬೆ.೧೧ ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದ್ದು, ಅಂದು ಬೆಳಗ್ಗೆ ೫ ಗಂಟೆಗೆ ಸಾಮೂಹಿಕ ಇಷ್ಟಲಿಂಗ ಪೂಜೆ, ಬಸವ ಚಿಂತನ ಪ್ರಭೆ ನಡೆಯಲಿದೆ. ಸಂಜೆ ೫ ಗಂಟೆಗೆ ಧರ್ಮಚಿಂತನ ಗೋಷ್ಠಿ ಜರುಗಲಿದೆ.ಅ.೨೦ ರಂದು ಬೆಳಿಗ್ಗೆ ೮ ಗಂಟೆಗೆ ಸಾಮೂಹಿಕ ಪ್ರಾರ್ಥನೆ, ಇಷ್ಟಲಿಂಗ ಪೂಜೆ ಹಾಗೂ ಬೆಳಗ್ಗೆ ೧೦.೩೦ ಕ್ಕೆ ಶರಣ ವಂದನೆ, ೭ ಗಂಟೆಗೆ ಶರಣರಿಗೆ ಶರಣಾರ್ಥಿ ಹೃದಯಸ್ಪರ್ಶಿ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ ೧೨ ರಿಂದ ೨ ರ ವರೆಗೆ ಮಹಿಳಾಗೋಷ್ಠಿ ೩ ರಿಂದ ೫ ರ ವರೆಗೆ ಯುವಗೋಷ್ಠಿ ಹಾಗೂ ಸಂಜೆ ಸಮಾರೋಪ ಸಮಾರಂಭ ಜರುಗಲಿದೆ. ಆಗಮಿಸುವ ಸಾವಿರಾರು ಶರಣರಿಗೆ ಪ್ರಸಾದ, ವಸತಿ ವ್ಯವಸ್ಥೆ ಇರಲಿದೆ. ಆದ್ದರಿಂದ ಶರಣ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೋರಿದ್ದಾರೆ.