ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಭಾರತೀಯ ಜನತಾ ಪಾರ್ಟಿ ವತಿಯಿಂದ ಸಂಗಬೆಟ್ಟು ಗ್ರಾಮ ಪಂಚಾಯಿತಿ ಕಚೇರಿ ಎದುರುಗಡೆ ಪ್ರತಿಭಟನಾ ಸಭೆ ನಡೆಯಿತು.
ಕನ್ನಡಪ್ರಭ ವಾರ್ತೆ ಬಂಟ್ವಾಳ
ಇಸ್ರೇಲ್ ದೇಶವು ಇರಾನ್ ಮೇಲೆ ಯುದ್ಧ ಸಾರುವುದರೊಂದಿಗೆ ಬಾಂಬ್ ಹಾಕುತ್ತಿದ್ದರೆ ಇತ್ತ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರ್ಚಿಗೆ ಸ್ವಪಕ್ಷೀಯ ಶಾಸಕರು ಬಾಂಬ್ ಇಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ.
ಅವರು ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಭಾರತೀಯ ಜನತಾ ಪಾರ್ಟಿ ವತಿಯಿಂದ ಸಂಗಬೆಟ್ಟು ಗ್ರಾಮ ಪಂಚಾಯಿತಿ ಕಚೇರಿ ಎದುರುಗಡೆ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತಾನಾಡಿದರು.
ಸ್ವಪಕ್ಷೀಯ ಶಾಸಕರಾದ ಬಿ.ಆರ್.ಪಾಟೀಲ್, ವಸತಿ ಸಚಿವರ ಮೇಲೆ ಆರೋಪ ಮಾಡುತ್ತಿದ್ದು ಕಾನೂನು ಸಚಿವರಾದ ಎಚ್.ಕೆ. ಪಾಟೀಲ್, ಸರ್ಕಾರಕ್ಕೆ 7 ಪುಟಗಳ ಪತ್ರವನ್ನು ಬರೆಯುವುದರ ಮೂಲಕ ಸಿದ್ದರಾಮಯ್ಯನವರ ಸರ್ಕಾರಕ್ಕೆ ಚಾಟಿ ಬೀಸುತ್ತಿದ್ದಾರೆ.
ಎಲ್ಲಾ ಕ್ಷೇತ್ರಗಳಲ್ಲಿಯೂ ಅಲ್ಪಸಂಖ್ಯಾತ ಮುಸ್ಲಿಮರಿಗೆ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುತ್ತಿರುವ ಸಿದ್ದರಾಮಯ್ಯ ಸರ್ಕಾರ, ಔರಂಗಜೇಬನ ಸರ್ಕಾರದ ಹಾದಿಯಲ್ಲಿ ಸಾಗುತ್ತಿದೆ ಎಂದೂ ಹರಿಕೃಷ್ಣ ಆರೋಪಿಸಿದರು.
ಪ್ರತಿಭಟನಾ ಸಭೆಯಲ್ಲಿ ಸಂಗಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರಾಜೀವಿ ಪೂಜಾರ್ತಿ, ಉಪಾಧ್ಯಕ್ಷ ಸುರೇಶ್ ಕುಲಾಲ್, ಸದಸ್ಯರಾದ ಸಂದೇಶ್ ಶೆಟ್ಟಿ ಪೋಡುಂಬ, ಸುನೀಲ್ ಶೆಟ್ಟಿಗಾರ್, ಉದಯ ಪೂಜಾರಿ, ಶಕುಂತಲಾ, ಪ್ರೇಮಾ, ವಿದ್ಯಾ ಪ್ರಭು, ಶಾಂತ, ಸಿದ್ದಕಟ್ಟೆ ಸಿ.ಎ. ಬ್ಯಾಂಕ್ ನಿರ್ದೇಶಕರಾದ ವಿಶ್ವನಾಥ ಶೆಟ್ಟಿಗಾರ್, ಶಕ್ತಿ ಕೇಂದ್ರದ ಪ್ರಮುಖ್ ನವೀನ್ ಹೆಗ್ಡೆ, ಬಿಜೆಪಿ ಪ್ರಮುಖರಾದ ದೀಪಕ್ ಶೆಟ್ಟಿಗಾರ್, ಉಮೇಶ್ ಗೌಡ, ಸುಂದರ ಪೂಜಾರಿ, ಭಾಸ್ಕರ ಪ್ರಭು, ಸದಾನಂದ ಪೂಜಾರಿ ಕರ್ಪೆ, ಮಾಧವ ಶೆಟ್ಟಿಗಾರ್, ವಿನೋದ್ ಅಡಪ, ಭೋಜ ಶೆಟ್ಟಿಗಾರ್, ಗಣೇಶ ಮೇಲುಗುಡ್ಡೆ, ದಾಮೋದರ ಪೂಜಾರಿ, ರಾಜೇಶ್ ಶೆಟ್ಟಿ ಮತ್ತಿತ್ತರು ಉಪಸ್ಥಿತರಿದ್ದರು.ಪ್ರಭಾಕರ ಪ್ರಭು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಂದೇಶ್ ಶೆಟ್ಟಿ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.