ಇಂದಿನಿಂದ ಸ್ವಚ್ಛತಾ ಹೀ ಸೇವಾ ವಿಶೇಷ ಜನಾಂದೋಲನ

KannadaprabhaNewsNetwork |  
Published : Sep 14, 2024, 01:52 AM IST
ಪೋಟೊ13ಕೆಪಿಎಲ್10:‌ ಜಿಪಂ ಸಿಇಒ ರಾಹುಲ್‌ ರತ್ನಂ ಪಾಂಡೇಯ | Kannada Prabha

ಸಾರಾಂಶ

ಕೊಪ್ಪಳ ಜಿಲ್ಲೆಯ ಎಲ್ಲ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತಾ ಹಿ ಸೇವಾ, ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಜನಾಂದೋಲನವನ್ನು ಸೆ. 14ರಿಂದ ಅ. 2ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ ತಿಳಿಸಿದ್ದಾರೆ.

ಕೊಪ್ಪಳ:‌ ಜಿಲ್ಲೆಯ ಎಲ್ಲ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತಾ ಹಿ ಸೇವಾ, ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಜನಾಂದೋಲನವನ್ನು ಸೆ. 14ರಿಂದ ಅ. 2ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಅ. 2ರ ಮಹಾತ್ಮ ಗಾಂಧೀಜಿ ಜನ್ಮದಿನದ ಸ್ಮರಣಾರ್ಥವಾಗಿ ಸ್ವಚ್ಛ ಭಾರತ ದಿನವನ್ನಾಗಿ ಆಚರಿಸಲಾಗುತ್ತಿದೆ. ಗಾಂಧೀಜಿ ಅವರ ಧ್ಯೇಯವಾಕ್ಯ ಸ್ವಚ್ಛತೆಯೇ ದೈವತ್ವ ಎಂಬ ಕನಸನ್ನು ನನಸಾಗಿಸಲು ಸೆ. 14ರಿಂದ ಅ. 2ರ ವರೆಗೆ 17 ದಿನಗಳ ವರೆಗೆ ಜಿಲ್ಲೆಯ ಎಲ್ಲ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತಾ ಹಿ ಸೇವಾ - ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಆಂದೋಲನ ಹಮ್ಮಿಕೊಳ್ಳಲು ಕೇಂದ್ರ ಜಲಶಕ್ತಿ ಮಂತ್ರಾಲಯದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ತೀರ್ಮಾನಿಸಲಾಗಿದೆ.

ಈ ವರ್ಷದ ಸ್ವಚ್ಛತಾ ಹಿ ಸೇವಾ - ಸ್ವಚ್ಛತೆಯೇ ಸೇವೆ ಎಂಬ ವಿಶೇಷ ಆಂದೋಲನದ ಘೋಷವಾಕ್ಯವಾಗಿ ಸಭಾ ಸ್ವಚ್ಛತೆ, ಸಂಸ್ಕಾರ ಸ್ವಚ್ಛತೆ ಎಂದು ಘೋಷಿಸಲಾಗಿದೆ. ಎಲ್ಲೆಡೆ ಸದೃಶ್ಯ ಸ್ವಚ್ಛತೆ ಸಾಧಿಸಿ, ಸ್ವಚ್ಛ ಸುಂದರ, ಸದೃಢ ಗ್ರಾಮಗಳನ್ನು ರೂಪಿಸುವ ಮಹತ್ವಾಕಾಂಕ್ಷೆ ಹೊಂದಲಾಗಿದೆ.

ಕಳೆದ ವರ್ಷದಂತೆಯೇ ಗ್ರಾಮಗಳ ಸ್ವಚ್ಛತೆಗೆ ಸ್ವಯಂಪ್ರೇರಿತರಾಗಿ ಶ್ರಮದಾನ ಚಟುವಟಿಕೆಯಲ್ಲಿ ಭಾಗವಹಿಸುವುದು. ಜಿಲ್ಲೆಯ ತಾಲೂಕು, ಗ್ರಾಪಂ ವ್ಯಾಪ್ತಿಗಳಲ್ಲಿ ಹೆಚ್ಚು ಜನ ಜಂಗುಳಿಯಿರುವ ಸ್ಥಳಗಳಾದ ಬಸ್ ನಿಲ್ದಾಣ, ರೈಲು ನಿಲ್ದಾಣ, ಕೆರೆ, ಹಳ್ಳ, ನದಿ ತೀರ, ಸಾಂಸ್ಥಿಕ, ಸಮುದಾಯ ಭವನ, ಪ್ರವಾಸಿ ತಾಣಗಳು, ಐತಿಹಾಸಿಕ ಸ್ಮಾರಕಗಳು, ಚರಂಡಿಗಳು ಮತ್ತು ನಾಲಾಗಳು ಮುಂತಾದ ಸ್ಥಳಗಳಲ್ಲಿ ಸ್ವಚ್ಛತೆಯ ಮತ್ತು ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ ಹಾಗೂ ಇತರ ವಿಷಯಗಳ ಕುರಿತು ಜಾಗೃತಿ, ದೃಶ್ಯ ಸ್ವಚ್ಛತೆ ಕಾಯ್ದುಕೊಳ್ಳಲು ಶ್ರಮದಾನ ಮತ್ತು ವಿವಿಧ ಚಟುವಟಿಕೆ ಆಯೋಜಿಸಲಾಗುತ್ತಿದೆ.

ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ಗ್ರಾಪಂಗಳು, ಎನ್‌ಜಿಒ, ಎಸ್‌ಎಚ್‌ಜಿ, ನೆಹರೂ ಯುವ ಕೇಂದ್ರ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಂಬಂಧಿತ ಪಾಲುದಾರರೊಂದಿಗೆ ತಮ್ಮ ಹಂತದಲ್ಲಿ ಸ್ವಚ್ಛತಾ ಹಿ ಸೇವಾ - ಸ್ವಚ್ಛತೆಯೇ ಸೇವೆ ಜನಾಂದೋಲನ ಹಮ್ಮಿಕೊಳ್ಳಬೇಕು. ಜಿಲ್ಲೆಯ ಸಾರ್ವಜನಿಕರು ಈ ಜನಾಂದೋಲನದಲ್ಲಿ ಪಾಲ್ಗೊಂಡು ಸದೃಢ ಭಾರತ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ ತೆಬಿಯಾ ರೋಸಿಯಾ ಹೂ ವೈಭವ!
ನಿವೇಶನ ರಹಿತರಿಗೆ ಸರ್ಕಾರದಿಂದ ಸೈಟ್‌