ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ 17ನೇ ಪೀಠಾಧ್ಯಕ್ಷರಾದ ಹಿರಿಯ ಶ್ರೀಗಳಾದ ಶ್ರೀ ಪಟ್ಟದ ಗುರುಸ್ವಾಮೀಜಿ ಆದಿವಾಸಿಗಳು, ಕಾಡಂಚಿನ ಜನರಿಗೆ ಶಿಕ್ಷಣ ನೀಡುವ ಸಲುವಾಗಿ ಭೀಕ್ಷೆ ಬೇಡಿ ಶಿಕ್ಷಣ ಸಂಸ್ಧೆ, ವಿದ್ಯಾರ್ಥಿನಿಲಯ ತೆರೆಯುವ ಮೂಲಕ ಶಿಕ್ಷಣ ಕ್ರಾಂತಿಯನ್ನೇ ಮಾಡಿದ್ದರು.
ಹನೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ 17ನೇ ಪೀಠಾಧ್ಯಕ್ಷರಾದ ಹಿರಿಯ ಶ್ರೀಗಳಾದ ಶ್ರೀ ಪಟ್ಟದ ಗುರುಸ್ವಾಮೀಜಿ ಆದಿವಾಸಿಗಳು, ಕಾಡಂಚಿನ ಜನರಿಗೆ ಶಿಕ್ಷಣ ನೀಡುವ ಸಲುವಾಗಿ ಭೀಕ್ಷೆ ಬೇಡಿ ಶಿಕ್ಷಣ ಸಂಸ್ಧೆ, ವಿದ್ಯಾರ್ಥಿನಿಲಯ ತೆರೆಯುವ ಮೂಲಕ ಶಿಕ್ಷಣ ಕ್ರಾಂತಿಯನ್ನೇ ಮಾಡಿದ್ದರು.
ಶ್ರೀ ಗುರುಸ್ವಾಮೀಜಿ ರವರು ಹನೂರು ತಾಲೂಕಿನ ಜಿ.ಕೆ ಹೊಸೂರು (ಗಂಗಾಧರನ ಕಟ್ಟೆ)ಗ್ರಾಮದ ರುದ್ರಪ್ಪ ಮತ್ತು ಪುಟ್ಟ ಮಾದಮ್ಮರ ಜೇಷ್ಠ ಪುತ್ರರಾಗಿದ್ದು 1956 ಆಗಸ್ಟ್ 2ರಂದು ಜನಿಸಿದ್ದರು. ನಂತರ ಸಾಲೂರು ಬ್ರಹನ್ ಮಠಕ್ಕೆ 17ನೇ ಪೀಠಾಧ್ಯಕ್ಷರಾಗಿ 1995 ಜನವರಿ 29 ರಂದು ಅಧಿಕಾರ ವಹಿಸಿಕೊಂಡಿದ್ದರು.ಶ್ರೀ ಪಟ್ಟದ ಗುರುಸ್ವಾಮಿಗಳ ಅಧಿಕಾರ ಅವಧಿಯಲ್ಲಿ ಶ್ರೀಮಠದಲ್ಲಿ ನಿತ್ಯ ದಾಸೋಹ ಸೇವೆ, ಶ್ರೀ ಮಹದೇಶ್ವರ ದೇವಸ್ಥಾನದ ಅಭಿವೃದ್ಧಿ, ಶ್ರೀ ಮಠದ ಅಭಿವೃದ್ಧಿ, ಅರ್ಚಕರ ಜೀವನದ ಉದ್ದಾರ ಜೊತೆಗೆ ಶ್ರೀ ಸಾಲೂರು ಸ್ವಾಮಿ ಟ್ರಸ್ಟ್ ವತಿಯಿಂದ ಪೂನ್ನಾಚಿ ಗ್ರಾಮದಲ್ಲಿ ಗಿರಿಜನ ದಿನದಲಿತರ ಹಿಂದುಳಿದವರ ಉಳಿವಿಗಾಗಿ ಪ್ರೌಢಶಾಲೆ ಮತ್ತು ಉಚಿತ ಹಾಸ್ಟೆಲ್ ಸ್ಥಾಪನೆ ಮಾಡಿದ್ದಾರೆ.1999 ರಲ್ಲಿ ಕೊಳ್ಳೇಗಾಲ ತಾಲೂಕಿನ ಕೆಂಪನಪಾಳ್ಯದಲ್ಲಿ ಪ್ರೌಢಶಾಲೆ, ಹನೂರು ಹೊರವಲಯದಲ್ಲಿ ವೃದ್ಧರಿಗೆ ಆಶ್ರಯ ನೀಡಲು 10 ಎಕರೆ ಪ್ರದೇಶದಲ್ಲಿ ವಿಸ್ತೀರ್ಣದಲ್ಲಿ ವೃದ್ಧಾಶ್ರಮವನ್ನು ಸ್ಥಾಪಿಸಿ, ನೂರಾರು ನಿರಾಶ್ರಿತರಿಗೆ ಆಶ್ರಯ ನೀಡಿದ್ದಾರೆ. ಗ್ರಾಮೀಣ ಮಕ್ಕಳಿಗೆ ಅನುಕೂಲವಾಗಲು ಸಂಸ್ಕೃತ ಪಾಠ ಶಾಲೆಗಳನ್ನು ತೆರೆದಿದ್ದಾರೆ. ಹಬ್ಬ ಜಾತ್ರೆ ಸಂದರ್ಭದಲ್ಲಿ ಸಹಸ್ರಾರು ಮಂದಿ ಭಕ್ತರು ಇಲ್ಲಿ ದಾಸೋಹ ಸ್ವೀಕರಿಸಲು ಅನುವು ಮಾಡಿಕೊಟ್ಟಿದ್ದರು.ಭೇದವಿಲ್ಲದೆ ಎಲ್ಲರನ್ನೂ ಪ್ರೀತಿಸುತ್ತಿದ್ದರು:ಸಾಲೂರು ಬೃಹನ್ ಮಠದ ಕಿರಿಯ ಶ್ರೀಗಳಾದ ಶಾಂತ ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ, 17ನೇ ಪೀಠಾಧ್ಯಕ್ಷರಾದ ಶ್ರೀ ಗುರುಸ್ವಾಮೀಜಿ ರವರು 20 ವರ್ಷ ಸೇವಕರಾಗಿ, 39 ವರ್ಷಗಳ ಕಾಲ ಪೀಠಾಧ್ಯಕ್ಷರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಅವಧಿಯಲ್ಲಿ ಅಪಾರ ಭಕ್ತ ಗಣವನ್ನು ಹೊಂದಿದ್ದಾರೆ. ಇದುವರೆಗೂ ಸೇವೆ ಮಾಡಿದ ಪೀಠಾಧ್ಯಕ್ಷರ ಪೈಕಿ ಇವರು ಸಹ ಪ್ರಮುಖ ಸ್ಥಾನದಲ್ಲಿದ್ದಾರೆ. ದೇವಸ್ಥಾನದ ಸಂಪ್ರದಾಯ ಸತ್ಕಾರ ಕಾರ್ಯಗಳಲ್ಲಿ ಮುಂದೆ ನಿಂತು ಎಲ್ಲವನ್ನು ನೆರವೇರಿಸುತ್ತಿದ್ದರು. ಜಾತಿ ಮತ ಧರ್ಮ ಭೇದವಿಲ್ಲದೆ ಎಲ್ಲರನ್ನೂ ಪ್ರೀತಿಸುತ್ತಿದ್ದರು. ಇಂದು ಅವರ ಅಂತಿಮ ಕ್ರಿಯೆಗೆ ಭಕ್ತರನ್ನು ನೋಡಿದರೆ ಅವರು ಎಷ್ಟು ಪ್ರೀತಿ ಹೊಂದಿದ್ದರು ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು. ಇನ್ನು ಗುರು ಸ್ವಾಮೀಜಿ ಇಟ್ಟುಕೊಂಡಿದ್ದ ಕನಸುಗಳನ್ನು ನೆನೆಸು ಮಾಡುವ ನೆಟ್ಟಿನಲ್ಲಿ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಎಲ್ಲಾ ಸೇವಾ ಕಾರ್ಯಗಳನ್ನು ಮುಂದುವರೆಸುತ್ತೇನೆ. ಜೊತೆಗೆ ಸುತ್ತೂರು, ಸಿದ್ದಗಂಗೆ ಹಾಗೂ ಕನಕಪುರ ದೇಗುಲ ಮಠದ ಸ್ವಾಮಿಗಳ ಮಾರ್ಗದರ್ಶನದಲ್ಲಿ ಪ್ರತಿಯೊಂದು ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗುತ್ತೇನೆ ಎಂದು ತಿಳಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.