- ಹಿರೇಕಲ್ಮಠದಲ್ಲಿ ಶರನ್ನವರಾತ್ರಿ- ದಸರಾ ಮಹೋತ್ಸವ ಉದ್ಘಾಟಿಸಿ ಶಾಸಕ ಶಾಂತನಗೌಡ - - - ಕನ್ನಡಪ್ರಭ ವಾರ್ತೆ ಹೊನ್ನಾಳಿ
ಪಟ್ಟಣದ ಹಿರೇಕಲ್ಮಠದ ಶ್ರೀ ಜಗದ್ಗುರು ಪಂಚಾಚಾರ್ಯ ಸಮುದಾಯ ಭವನದಲ್ಲಿ ಅ.3ರಿಂದ ಅ.12ರವಗೆರೆ ಹಮ್ಮಿಕೊಳ್ಳಲಾಗಿರುವ ಶರನ್ನವರಾತ್ರಿ ಮತ್ತು ದಸರಾ ಮಹೋತ್ಸವದ ಮೊದಲ ದಿನ ಗುರುವಾರ ರಾತ್ರಿ ಕಾರ್ಯಕ್ರಮಕ್ಕೆ ವಿಧ್ಯುಕ್ತ ಚಾಲನೆ ನೀಡಿ ಅವರು ಮಾತನಾಡಿದರು.
ತಮ್ಮ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯಿಂದಾಗಿ ಬಹುಪಾಲು ಮಹಿಳೆಯರು ಎಲ್ಲ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಳ್ಳುವಂತಾಗಿದೆ. ಇತ್ತೀಚಿನ ದಿನಗಳಲ್ಲಿ ಮೊಬೈಲ್‌ಗಳು ಜೀವನದ ಅವಿಭಾಜ್ಯ ಅಂಗವಾದಂತಾಗಿವೆ ಎಂದರು.ಹಿರೇಕಲ್ಮಠದ ಒಡೆಯರ್ ಡಾ.ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಿ ಮಾತನಾಡಿ, ಶ್ರೀ ಮಠದಲ್ಲಿ ದಸರಾ ಹಬ್ಬದ ಪ್ರಯುಕ್ತ ನಾಡಿನ ಒಳಿತಿಗಾಗಿ ಹೋಮ, ಪೂಜಾ, ಉಪನ್ಯಾಸ, ವಿದ್ಯಾರ್ಥಿಗಳಿಂದ ಸಾಂಸ್ಕತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಹರಿಹರದ ನಿವೃತ್ತ ಪ್ರಾಚಾರ್ಯ ಎಚ್.ಎ. ಭಿಕ್ಷಾವರ್ತಿಮಠ ಅವರು ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯದ ಕುರಿತಾಗಿ ಉಪನ್ಯಾಸ ನೀಡಿದರು. ಶ್ರೀ ಮಂಜುನಾಥ ದೇವರು ದೇವಿ ಪುರಾಣ ವಾಚಿಸಿದರು.
ಕಡದಕಟ್ಟೆ ತಿಮ್ಮಪ್ಪನವರು ಸಂಗೀತ ಸಂಯೋಜಿಸಿ ಹಾಡಿರುವ ಧ್ವನಿಮುದ್ರಿಕೆಯನ್ನು ಗಣ್ಯರು ಬಿಡುಗಡೆಗೊಳಿಸಿದರು. ಶ್ರೀ ಚನ್ನಮಲ್ಲಿಕಾರ್ಜುನ ಸ್ವಾಮಿ ಶಾಲೆ ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕತಿಕ ಕಾರ್ಯಕ್ರಮಗಳು ಜನರ ಮನಸೂರೆಗೊಂಡವು.
ಹಿರೇಕಲ್ಮಠದ ಶ್ರೀ ಜಗದ್ಗುರು ಪಂಚಾಚಾರ್ಯ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಶರನ್ನವರಾತ್ರಿ ಮತ್ತು ದಸರಾ ಮಹೋತ್ಸವ ಕಾರ್ಯಕ್ರಮಕ್ಕೆ ಗುರುವಾರ ರಾತ್ರಿ ಶಾಸಕ ಡಿ.ಜಿ.ಶಾಂತನಗೌಡ ಚಾಲನೆ ನೀಡಿದರು.