ಮಂಗಳವಾರಪೇಟೆ ಪ್ರೌಢಶಾಲೆಯಲ್ಲಿಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಕ್ಕೆ ಚಾಲನೆ

KannadaprabhaNewsNetwork |  
Published : Jul 29, 2025, 01:01 AM IST
ಪೊಟೋ೨೭ಸಿಪಿಟಿ೧: ತಾಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಚನ್ನಪಟ್ಟಣ: ಆರೋಗ್ಯಕರ ಸಮಾಜ ನಿರ್ಮಾಣ ಮಾಡುವುದು ನಮ್ಮೆಲ್ಲರ ಹೊಣೆ. ಬಹುತೇಕ ಯುವಜನತೆ ದುಶ್ಚಟಗಳಿಗೆ ದಾಸರಾಗುತ್ತಿದ್ದು, ಇದನ್ನು ತಡೆಗಟ್ಟಲು ಸಂಕಲ್ಪ ಮಾಡಬೇಕಿದೆ ಎಂದ ಮಂಗಳವಾರಪೇಟೆ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಮಂಜಪ್ಪ ತಿಳಿಸಿದರು.

ಚನ್ನಪಟ್ಟಣ: ಆರೋಗ್ಯಕರ ಸಮಾಜ ನಿರ್ಮಾಣ ಮಾಡುವುದು ನಮ್ಮೆಲ್ಲರ ಹೊಣೆ. ಬಹುತೇಕ ಯುವಜನತೆ ದುಶ್ಚಟಗಳಿಗೆ ದಾಸರಾಗುತ್ತಿದ್ದು, ಇದನ್ನು ತಡೆಗಟ್ಟಲು ಸಂಕಲ್ಪ ಮಾಡಬೇಕಿದೆ ಎಂದ ಮಂಗಳವಾರಪೇಟೆ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಮಂಜಪ್ಪ ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳ್ತಂಗಡಿಯ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಸ್ಥಳೀಯ ಸರ್ಕಾರಿ ಪ್ರೌಢಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ, ದುಶ್ಚಟ ದುರಭ್ಯಾಸದಿಂದ ಆಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ ಮಾತನಾಡಿ, ಪ್ರಪಂಚದ ಐದು ಭೀಕರ ಕಾಯಿಲೆಗಳಲ್ಲಿ ಮಾದಕ ವ್ಯಸನವೂ ಒಂದು, ವಿದ್ಯಾರ್ಥಿ ಜೀವನ ಹಸಿ ಮಣ್ಣಿನ ಮಡಿಕೆ ಇದ್ದ ಹಾಗೆ ಹೆಚ್ಚು ಸಡಿಲ ಮಾಡಿದರೂ ಹೆಚ್ಚು ಬಿಗಿ ಮಾಡಿದರೂ ಒಡೆಯುವುದು ಮಡಿಕೆಯೆ. ಹದಿಹರೆಯದಲ್ಲಿನ ಒತ್ತಡಗಳು, ತಂದೆ, ತಾಯಂದಿರ ಒತ್ತಡ, ಸ್ನೇಹಿತರ ಒತ್ತಡ, ಜೀವನ ಶೈಲಿ, ಮಾಧ್ಯಮ, ಆರ್ಥಿಕ ಸ್ವಾತಂತ್ರ್ಯ, ಪ್ರೀತಿಯ ಕೊರತೆ, ಅನಾರೋಗ್ಯ, ಪಾಶ್ಚಾತ್ಯ ಸಂಸ್ಕೃತಿ, ಸಾಹಸ ಪ್ರವೃತ್ತಿ, ನಕಾರಾತ್ಮಕ ಚಿಂತನೆಗಳು ಈ ಎಲ್ಲಾ ಕಾರಣಗಳಿಂದಾಗಿ ಅಮಲು ಪದಾರ್ಥ ಹಾಗೂ ಇತರ ವ್ಯಸನಗಳಿಗೆ ಬಲಿಯಾಗುವ ಸಾಧ್ಯತೆಗಳಿವೆ ಎಂದು ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಿಟ್ಟಮಾರನಹಳ್ಳಿ ವಲಯದ ಮೇಲ್ವಿಚಾರಕ ಪ್ರಸನ್ನ ಮಾತನಾಡಿ, ಮಾದಕ ವ್ಯಸನವೆಂಬುದೊಂದು ರೋಗ. ವಿಶ್ವ ಆರೋಗ್ಯ ಸಂಸ್ಥೆಯ ಸಂಶೋಧನೆಯ ಪ್ರಕಾರ ನಮ್ಮ ಭಾರತ ದೇಶದಲ್ಲಿ ಒಂದು ವರ್ಷಕ್ಕೆ ೫ ಲಕ್ಷ ಜನ ಮದ್ಯಪಾನದಿಂದ ಮರಣ ಹೊಂದಿದರೆ ೧೪.೫ ಲಕ್ಷ ಜನ ಮಾದಕ ದ್ರವ್ಯ, ಮಾದಕ ವ್ಯಸನ ಅಥವಾ ಇತರ ಚಟಗಳಿಂದ ಬಲಿಯಾಗುತ್ತಿರುವುದು ಶೋಚನೀಯ ಎಂದರು.

ಕಾರ್ಯಕ್ರಮದಲ್ಲಿ ಸೇವಾ ಪ್ರತಿನಿಧಿ ಪಲ್ಲವಿ, ಶಿಕ್ಷಕರಾದ ಜಿ.ಕೆ. ರಂಗನಾಥ್ , ಹೀರಾನಾಯಕ್, ಭವ್ಯ, ಲಕ್ಷ್ಮಿ, ಶ್ರೀನಿವಾಸ್, ಸೌಮ್ಯ ನಾಯಕ್, ಪುಟ್ಟಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪೊಟೋ೨೭ಸಿಪಿಟಿ೧:

ಚನ್ನಪಟ್ಟಣ ತಾಲೂಕಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.

PREV

Recommended Stories

ನವೆಂಬರ್‌-ಡಿಸೆಂಬರ್‌ನಲ್ಲಿ 5 ಪಾಲಿಕೆ ಚುನಾವಣೆ: ಡಿಸಿಎಂ
ಹಿಪ್ಪರಗಿ ಜಲಾಶಯಕ್ಕೆ ೧,೧೯,೨೦೦ ಕ್ಯುಸೆಕ್‌ ಒಳಹರಿವು