ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನವನಗರದ ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ನಂ.7 ಹಾಗೂ ಶಿರಗುಪ್ಪಿ ಎಲ್.ಟಿ ಪು.ಕೇಂದ್ರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇರುವ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್, ಶೌಚಾಲಯ, ವ್ಹೀಲ್ ಚೇರ್ ಸೌಲಭ್ಯ ಸೇರಿದಂತೆ ಅಂಗವಿಕಲ ಮತದಾರರಿಗೆ ಅನುಕೂಲವಾಗುವ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಅಧಿಕಾರಿಗಳು ಮತಗಟ್ಟೆ ಸಿಬ್ಬಂದಿಯೊಂದಿಗೆ ಚರ್ಚಿಸಿ ಮತದಾನ ದಿನದ ಸಿದ್ಧತೆಗಳು ಹಾಗೂ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದರು. ವಿಶೇಷವಾಗಿ ಮಹಿಳೆಯರು, ಹಿರಿಯ ನಾಗರಿಕರು ಹಾಗೂ ಯುವ ಮತದಾರರನ್ನು ಹೆಚ್ಚಿನ ಸಂಖ್ಯೆಯಲ್ಲಿ ಮತದಾನಕ್ಕೆ ಉತ್ತೇಜಿಸುವ ನಿಟ್ಟಿನಲ್ಲಿ ವಿವಿಧ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸೂಚನೆ ನೀಡಿದರು. ಜಿಪಂ ಸಿಇಒ ಶಶಿಧರ ಕುರೇರ ಅವರು ಚುನಾವಣಾ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಹಾಗೂ ಸುಗಮವಾಗಿ ನಡೆಸುವ ದೃಷ್ಠಿಯಿಂದ ಎಲ್ಲ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾಂವಿ ಸೇರಿದಂತೆ ಮತಗಟ್ಟೆ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.