ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಪಿಇಟಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಹನ್ನೆರಡನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿಶ್ವ ಯೋಗ ದಿನವನ್ನು ವಿಶ್ವದ ಎಲ್ಲಾ ಭಾಗಗಳಲ್ಲೂ ಆಚರಣೆ ಮಾಲಾಗುತ್ತಿದೆ. ಭಾರತದ ೨,೫೦೦ ಸ್ಥಳಗಳಲ್ಲಿ ಆಚರಿಸಲಾಗುತ್ತಿದೆ. ಯೋಗ ಮತ್ತು ಧ್ಯಾನ ಮಾಡುವುದರಿಂದ ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ಪ್ರತಿಯೊಬ್ಬರೂ ನಿತ್ಯ ೧೫ ರಿಂದ ೨೦ ನಿಮಿಷ ಯೋಗ ಮತ್ತು ಧ್ಯಾನ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ ಎಂದರು.
ಶ್ರೀರಂಗಪಟ್ಟಣ ಬೇಬಿ ಮಠ ಚಂದ್ರವನ ಆಶ್ರಮದ ಶ್ರೀತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ಮಾತನಾಡಿ, ನಮ್ಮ ದೇಶದ ಮಕ್ಕಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ. ಇದು ಮನಸ್ಸಿನ ಏಕಾಗ್ರತೆ, ಆತ್ಮ ನಿಯಂತ್ರಣ ಮತ್ತು ಆಧ್ಯಾತ್ಮಿಕ ಬೆಳವಣಿಗೆಯನ್ನು ಉತ್ತೇಜಿಸುವ ಸಮಗ್ರ ಜೀವನ ಪದ್ಧತಿ. ನಿಯಮಿತವಾಗಿ ಯೋಗಾಭ್ಯಾಸ ಮಾಡುವುದರಿಂದ ದೇಹದ ನಮ್ಯತೆ ಹೆಚ್ಚುತ್ತದೆ, ರೋಗ ನಿರೋಧಕ ಶಕ್ತಿ ವೃದ್ಧಿಯಾಗುತ್ತದೆ ಮತ್ತು ಹೃದಯ, ಉಸಿರಾಟ ಹಾಗೂ ಜೀರ್ಣಕ್ರಿಯೆ ಸುಧಾರಿಸುತ್ತದೆ. ಜೊತೆಗೆ, ಒತ್ತಡ, ಖಿನ್ನತೆ ಮತ್ತು ಆತಂಕದಂತಹ ಮಾನಸಿಕ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹ ಯೋಗವು ಸಹಾಯಕವಾಗಿದೆ ಎಂದರು.ಆದಿ ಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಶ್ರೀಪುರುಷೋತ್ತಮಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು.