ದಾವಣಗೆರೆ ಜಿಲ್ಲೆಯಲ್ಲಿ ಶೀಘ್ರದಲ್ಲಿ ಸಿಂಥೆಟಿಕ್ ಗ್ರೌಂಡ್‌: ಸಂಸದೆ ಪ್ರಭಾ ಮಲ್ಲಿಕಾರ್ಜುನ್‌

KannadaprabhaNewsNetwork |  
Published : Oct 15, 2025, 02:07 AM IST
13ಕೆಡಿವಿಜಿ7-ದಾವಣಗೆರೆಯಲ್ಲಿ ಸೋಮವಾರ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಹಮ್ಮಿಕೊಂಡಿರುವ ಯುನಿಕ್ಸ್ ಸನ್ ರೈಸ್ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಬ್ಯಾಡ್ಮಿಂಟನ್ ಆಡುವ ಮೂಲಕ ಉದ್ಘಾಟಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ. | Kannada Prabha

ಸಾರಾಂಶ

ಕ್ರೀಡಾ ಪ್ರೋತ್ಸಾಹಕ ಪರಿಸರದ ದಾವಣಗೆರೆಯಲ್ಲಿ ಎಲ್ಲಾ ಒಳಾಂಗಣದ ಕ್ರೀಡೆಗಳು ಒಂದೇ ಸೂರಿನಡಿ ನಡೆಯುವಂತಹ ಸಿಂಥೆಟಿಕ್ ಕ್ರೀಡಾಂಗಣದ ಅವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಜತೆಗೆ ಚರ್ಚಿಸುವುದಾಗಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ದಾವಣಗೆರೆ

ಕ್ರೀಡಾ ಪ್ರೋತ್ಸಾಹಕ ಪರಿಸರದ ದಾವಣಗೆರೆಯಲ್ಲಿ ಎಲ್ಲಾ ಒಳಾಂಗಣದ ಕ್ರೀಡೆಗಳು ಒಂದೇ ಸೂರಿನಡಿ ನಡೆಯುವಂತಹ ಸಿಂಥೆಟಿಕ್ ಕ್ರೀಡಾಂಗಣದ ಅವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್‌ ಜತೆಗೆ ಚರ್ಚಿಸುವುದಾಗಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ಭರವಸೆ ನೀಡಿದರು.

ನಗರದ ನೇತಾಜಿ ಸುಭಾಶ್ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್‌ನಿಂದ ಅ.19ರವರೆಗೆ ನಡೆಯುವ ಯುನಿಕ್ಸ್ ಸನ್ ರೈಸ್ ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ಸಿಂಥೆಟಿಕ್ ಗ್ರೌಂಡ್ ಆಗಬೇಕೆಂಬುದು ಇಲ್ಲಿನ ಅನೇಕ ಕ್ರೀಡಾಸಂಸ್ಥೆ, ಕ್ರೀಡಾಪಟುಗಳ ಆಸೆಯೂ ಆಗಿದೆ ಎಂದರು.

ನೇತಾಜಿ ಸುಭಾಶ್ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಹಿಂದೆ ಶಾಸಕರಾದ ಡಾ.ಶಾಮನೂರು ಶಿವಶಂಕರಪ್ಪ ಭೂಮಿಪೂಜೆ ನೆರವೇರಿಸಿದ್ದರು. ನಂತರ ಯುವಜನ ಸೇವೆ ಮತ್ತು ಕ್ರೀಡಾ ಸಚಿವರಾಗಿದ್ದ ಎಸ್ಸೆಸ್ ಮಲ್ಲಿಕಾರ್ಜುನ್‌ ಉದ್ಘಾಟಿಸಿದ್ದರು. ಅಂತಾರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಅಂಕಣ ಇದಾಗಿದ್ದು, ಈಗಾಗಲೇ ಸಾಕಷ್ಟು ಟೂರ್ನಿಗೂ ಈ ಕ್ರೀಡಾಂಗಣ ಸಾಕ್ಷಿಯಾಗಿದೆ ಎಂದು ತಿಳಿಸಿದರು.

ಈಗ 35 ಲಕ್ಷ ರು.ಗೂ ಅದಿಕ ಅನುದಾನದಲ್ಲಿ ಅಭಿವೃದ್ಧಿ ಕಾರ್ಯವನ್ನು ಕೈಗೊಳ್ಳಲಾಗಿದೆ. ಈಗ ರಾಜ್ಯಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ ಇಲ್ಲಿ ನಡೆದಿದೆ, ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆ ಆಯೋಜಿಸುವಂತಾಗಲಿ ಎಂದರು.

ಆರೋಗ್ಯವೆಂದರೆ ಬರೀ ದೈಹಿಕ ಆರೋಗ್ಯವಷ್ಟೇ ಅಷ್ಟೇ ಅಲ್ಲ. ಮಾನಸಿಕ, ಸಾಮಾಜಿಕ ಆರೋಗ್ಯವೂ ಅತೀ ಮುಖ್ಯ. ಹಿಂದೆ ತಾವು ಶಾಲಾ-ಕಾಲೇಜಿನಲ್ಲಿ ಓದುತ್ತಿದ್ದಾಗ ಅನೇಕ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪಾಲ್ಗೊಳ್ಳುತ್ತಿದ್ದು, ನಮ್ಮ ಶಿಕ್ಷಕ-ಶಿಕ್ಷಕಿಯರು ಸಹ ನಮಗೆಲ್ಲರಿಗೂ ಸದಾ ಪ್ರೋತ್ಸಾಹ, ಪ್ರೇರಣೆ ನೀಡುತ್ತಿದ್ದರು ಎಂದರು.

ವಿದ್ಯಾರ್ಥಿ, ಯುವ ಜನರು ಓದುವುದರ ಜತೆಗೆ ಕ್ರೀಡಾ ಸಾಧನೆಯ ಕಡೆಗೂ ಗಮನ ಕೇಂದ್ರೀಕರಿಸಬೇಕು. ನಿಮಗೆ ಯಾವ ಕ್ರೀಡೆಯಲ್ಲಿ ಆಸಕ್ತಿ ಇದೆಯೋ ಅಂತಹ ಕ್ರೀಡೆಯಲ್ಲಿ ನಿರಂತರ ಅಭ್ಯಾಸ ಮಾಡಿ, ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಬೇಕು. ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ, ಪಾಲ್ಗೊಳ್ಳುವುದು ಮುಖ್ಯ ಎಂದು ಕಿವಿಮಾತು ಹೇಳಿದರು.

ಸಂಸ್ಥೆಯ ಎಸ್.ಎನ್.ಬಸವರಾಜ ಅಧ್ಯಕ್ಷತೆ ವಹಿಸಿದ್ದರು. ದೂಡಾ ಅಧ್ಯಕ್ಷ ದಿನೇಶ ಕೆ.ಶೆಟ್ಟಿ, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆ ರಾಜ್ಯ ಕಾರ್ಯದರ್ಶಿ ಬೆಂಗಳರಿನ ಪಿ.ರಾಜೇಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಶ್ರೀಹರ್ಷ, ಉದಯ ಶಿವಕುಮಾರ,‌ ಮಹೇಶ.ಆರ್. ಶೆಟ್ಟಿ, ಎಸ್.ಪಿ.ಶ್ರೀಧರ, ಡಿ.ಆರ್.ಗಿರಿರಾಜ ಇತರರು ಇದ್ದರು.

PREV

Recommended Stories

ಮರಳು ದಂಧೆ ತಡೆದ ಎಎಸ್‌ಐಗೆ ಹಲ್ಲೆ: ರಾಜೂಗೌಡ
ನಟ ದರ್ಶನ್‌ ಸೆಲ್‌ ಪರಿಶೀಲನೆ ನಡೆಸಿದ ಕಾನೂನು ಪ್ರಾಧಿಕಾರ