ಟಿ.ಎಂ. ಶಹೀದ್ ಗೆ ಬ್ಯಾರಿ ಸಾಹಿತ್ಯ ಅಕಾಡೆಮಿ ಗೌರವ ಪುರಸ್ಕಾರ

KannadaprabhaNewsNetwork |  
Published : Dec 05, 2025, 02:15 AM IST

ಸಾರಾಂಶ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2022- 2023ನೇ ಸಾಲಿನ ಬ್ಯಾರಿ ಅಕಾಡೆಮಿಯ ಹತ್ತು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ

ಕನ್ನಡಪ್ರಭ ವಾರ್ತೆ ಮಡಿಕೇರಿ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2022 ಮತ್ತು 2023 ನೇ ಸಾಲಿನ ಬ್ಯಾರಿ ಅಕಾಡಮಿ (ಗೌರವ ಪುರಸ್ಕಾರ)ಕ್ಕೆ ಹತ್ತು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ.

ಬ್ಯಾರಿ ಭಾಷೆ ಸಂಘಟನೆಯಲ್ಲಿ ಕೆಲಸ ಮಾಡಿದ ಟಿ.ಎಂ. ಶಹೀದ್ ಅವರನ್ನು ಆಯ್ಕೆ ಮಾಡಲಾಗಿದೆ.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಸ್ಥಾಯಿ ಸಮಿತಿ ಸಭೆ ಹಾಗೂ ಸರ್ವ ಸದಸ್ಯರ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗಿದೆ. ಬ್ಯಾರಿ ಅಕಾಡಮಿ ಚಮ್ಮನವು 10 ಸಾವಿರ ರು. ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ.

ಬ್ಯಾರಿ ಅಕಾಡಮಿ ಚಮ್ಮನ ಕಾರ್ಯಕ್ರಮವು ಡಿ.7ರಂದು ಪುತ್ತೂರಿನ ಪುರಭವನದಲ್ಲಿ ನಡೆಯಲಿದೆ.

ದ. ಕ. ಜಿಲ್ಲೆಯ ಸುಳ್ಯ ಪ್ರತಿಷ್ಠಿತ ತೆಕ್ಕಿಲ್ ಮನೆತನದ ದಿ ತೆಕ್ಕಿಲ್ ಮಹಮ್ಮದ್ ಹಾಜಿ ಯವರ ಪುತ್ರ ಟಿ.ಎಂ.ಬಾಬಾ ಹಾಜಿ ತೆಕ್ಕಿಲ್ ಹಾಗೂ ಕೇರಳದ ಕ್ಯಾಲಿಕಟ್ ನ ರಾಜಕೀಯ, ಧಾರ್ಮಿಕ ಮತ್ತು ಅತೀ ದೊಡ್ಡ ಜಮಿಂದಾರ ರಾಗಿದ್ದ ಸಾವಿರ ವರ್ಷ ಇತಿಹಾಸ ಇರುವ ಪಾರಾಪ್ರವನ್ ಪೊನ್ನಮ್ ಬಿಲಾತ್ ನಾರಾನತ್ ಕುಟುಂಬದ ಎಂ ಪಿ ಅಬು ಹಾಜಿ ಪುತ್ರಿ ಆಯಿಷ ಹಜ್ಜುಮ್ಮ ರವರ ಪುತ್ರ ನಾಗಿರುವ ಟಿ.ಎಂ.ಶಾಹೀದ್ ತೆಕ್ಕಿಲ್ ಅವರು 21 ಜನವರಿ 1971 ರಲ್ಲಿ ಕ್ಯಾಲಿಕಟ್ ನಲ್ಲಿ ಜನಿಸಿದರು.

ಟಿ.ಎಂ.ಶಾಹೀದ್ ತೆಕ್ಕಿಲ್ ಅವರು ಅತೀ ಕಿರಿಯ ವಯಸ್ಸಿನಲ್ಲಿ ಪೇರಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಹಾಗೂ ದರ್ಗಾ ಶರೀಫ್ ನ ಅಧ್ಯಕ್ಷರಾಗಿ, ಅರಂತೋಡು ಬದ್ರೀಯಾ ಜುಮ್ಮಾ ಮಸೀದಿಯ ಪುನರ್ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಷಿಯೇಷನ್ ಅರಂತೋಡು ಇದರ ಗೌರವ ಅಧ್ಯಕ್ಷರಾಗಿ, ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಬೆಳ್ಳಿ ಹಬ್ಬ ಆಚರಣಾ ಸಮಿತಿಯ ಅಧ್ಯಕ್ಷರಾಗಿ ಮತ್ತು 2000 ನೇ ಇಸವಿಯಲ್ಲಿ ಸುಳ್ಯ ತಾಲೂಕು ಅಲ್ಪ ಸಂಖ್ಯಾತರ ವಿವಿಧೋದ್ದೇಶ ಸಹಕಾರಿ ಸಂಘದ ಪ್ರಥಮ ಚುನಾಯಿತ ಅಧ್ಯಕ್ಷರಾಗಿ ಸತತ ಏಳು ವರೆ ವರ್ಷ ಕರ್ತವ್ಯ ನಿರ್ವಹಿಸಿದ್ದರು. ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ನ ಸದಸ್ಯರಾಗಿ, ಕಾರ್ಮಿಕ ಕಲ್ಯಾಣ ಮಂಡಳಿಯ ಸದಸ್ಯರಾಗಿ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕರಾಗಿ, ಎರಡು ಬಾರಿ ಕೇಂದ್ರ ನಾರು ಮಂಡಳಿ ಸದಸ್ಯರಾಗಿ ದುಡಿದ್ದಿರುವ ಶಾಹೀದ್ ತೆಕ್ಕಿಲ್ ಅವರು ಪ್ರಸ್ತುತ ಕರ್ನಾಟಕ ರಾಜ್ಯದ ರಾಜೀವ್ ಯೂತ್ ಪೌಂಡೇಷನ್ ನ ಅಧ್ಯಕ್ಷರಾಗಿರುತ್ತಾರೆ. 2002ರಲ್ಲಿ ರಾಜ್ಯ ಯುವ ಪ್ರಶಸ್ತಿಯನ್ನು ಪಡೆದಿರುವ ಶಾಹೀದ್ ಅವರು, ಕಬ್ಬಡ್ಡಿ ಆಟಗಾರನಾಗಿ ರಾಜ್ಯಮಟ್ಟದ ಪ್ರಾಥಮಿಕಾ ಶಾಲಾ ಮಟ್ಟದ ಕಬ್ಬಡ್ಡಿ ಕ್ರೀಡಾ ಕೂಟದಲ್ಲಿ ಭಾಗವಹಿಸಿರುತ್ತಾರೆ. ಅನೇಕ ಸಂಘ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಟಿ.ಎಂ.ಶಾಹೀದ್ ರವರಿಗೆ ರಾಜ್ಯ, ದೇಶ ಹಾಗೂ ವಿದೇಶದಲ್ಲಿ ಅನೇಕ ಸನ್ಮಾನಗಳನ್ನು ಸ್ವೀಕರಿಸಿದ್ದಾರೆ. ಉತ್ತಮ ಕೃಷಿಕ ಹಾಗೂ ಉದ್ಯಮಿ ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಶ್ರೀಯುತರು ಪ್ರಸ್ತುತ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾಗಿ ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿದ್ದಾರೆ.2018 ರಲ್ಲಿ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನಕ್ಕೆ ಸಮಾಜ ಸೇವಾ ಕ್ಷೇತ್ರದಲ್ಲಿ ನೀಡಿದ ಕೊಡುಗೆಗಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ. ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ನೂರಾರು ಮಸೀದಿ ಮದರಸಗಳಿಗೆ , ದೇವಸ್ಥಾನ , ಶಿಕ್ಷಣ ಸಂಸ್ಥೆ, ಶಾದಿ ಮಹಲ್ ಕಟ್ಟಡ, ಯುವಕ ಮಂಡಲ, ಸೇತುವೆಗಳು, ಗ್ರಾಮೀಣ ರಸ್ತೆಗಳಿಗೆ, ಜನಪ್ರತಿನಿಧಿ ಅಲ್ಲದಿದ್ದರು ನೂರಾರು ಕೋಟಿ ಅನುದಾನವನ್ನು ವಿವಿಧ ಇಲಾಖೆಗಳಿಂದ ತರಿಸಿ ಕೊಟ್ಟ ಜನಾನುರಾಗಿ ನಾಯಕರಾಗಿರುತ್ತಾರೆ. ಪ್ರಸ್ತುತ ಕರ್ನಾಟಕ ರಾಜ್ಯದಲ್ಲಿ ಸುಮಾರು ಎರಡುವರೆ ಕೋಟಿ ಕಾರ್ಮಿಕರಿರುವ ಕರ್ನಾಟಕ ಸರಕಾರದ ಕಾರ್ಮಿಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾಗಿ ದುಡಿಯುತ್ತಿರುವ ಶ್ರೀಯುತರು ಹಲವಾರು ಧಾರ್ಮಿಕ ಸಾಮಾಜಿಕ ಕ್ರೀಡೆ ಸಹಕಾರ ವಿದ್ಯಾಭ್ಯಾಸ ಸಂಸ್ಥೆಗಳಲ್ಲಿ ಸಕ್ರಿಯವಾಗಿ ದುಡಿಯುತ್ತಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕಗಳ ಕೊಡುಗೆ
ರೈತರ ಗೊಂದಲ ನಿವಾರಣೆಗೆ ಮುಂದಾದ ಹುಡಾ