ಶಕ್ತಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
ಪುತ್ತೂರು : ಶಕ್ತಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಎಚ್.ಮನ್ಮಿತಾ, ಶರಣ್ಯ ಎಚ್. ಎನ್, ಆತ್ಮಿಕ, ಹಾಗೂ ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ಕೆ. ವಿ. ನಿಖಿಲ್ ಕುಮಾರ್, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಆರ್ಯರಮಣ ಕೆ. ಆರ್, ಅಭಿಲಾಷ್ ಬಿ, ವಿಕ್ರಮ್ ಎ. ಜಿ ಭಾಗವಹಿಸಿದರು. ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.