ಅ.7 ರಿಂದ ಅ. 9 ರವರೆಗೆ ರಾಜ್ಯಮಟ್ಟದ ಟೇಕ್ವಾಂಡೋ ಪಂದ್ಯಾವಳಿ

KannadaprabhaNewsNetwork |  
Published : Oct 06, 2026, 01:45 AM IST
ರಾಜ್ಯಮಟ್ಟದ ಟೇಕ್ವಾಂಡೋ ಪಂದ್ಯಾವಳಿ ಹಮ್ಮಿಕೊಳ್ಳುವ ಕುರಿತು, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು. | Kannada Prabha

ಸಾರಾಂಶ

Taekwondo tournament

-ಅವಶ್ಯಕ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ರಮೇಶ ಸೂಚನೆ

---

ಕನ್ನಡಪ್ರಭ ವಾರ್ತೆ ಯಾದಗಿರಿ

ಶಾಲಾ ಶಿಕ್ಷಣ ಇಲಾಖೆಯ 2026-27ನೇ ಸಾಲಿನ ರಾಜ್ಯ ಮಟ್ಟದ ಬಾಲಕ, ಬಾಲಕಿಯರ ಟೇಕ್ವಾಂಡೋ ಪಂದ್ಯಾವಳಿಯನ್ನು ಇದೇ ಅ. 7 ರಿಂದ 9 ರವರೆಗೆ ನಗರದ ಡಾನ್ ಬೋಸ್ಕೋ ಶಾಲೆಯಲ್ಲಿ ಹಮ್ಮಿಕೊಂಡಿದ್ದು, ಸಂಬಂಧಿಸಿದ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಈ ಪಂದ್ಯಾವಳಿಯನ್ನು ಯಶಸ್ವಿಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯ ಮಟ್ಟದ ಟೇಕ್ವಾಂಡೋ ಪಂದ್ಯಾವಳಿ ಹಮ್ಮಿಕೊಳ್ಳುವ ಕುರಿತು, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ರಾಜ್ಯ ಮಟ್ಟದ ಈ ಪಂದ್ಯಾವಳಿಗೆ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳಿಂದ ಸುಮಾರು 760 ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ. ಇದಕ್ಕಾಗಿ ಸೂಕ್ತ ವಸತಿ, ಆಹಾರ, ವಾಹನಗಳ ವ್ಯವಸ್ಥೆ, ಸುರಕ್ಷತಾ ಕ್ರಮಗಳು ಸೇರಿದಂತೆ ಇನ್ನಿತರ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಇಂದೋರ್ ಸ್ಟೇಡಿಯಂಗಾಗಿ ಡಾನ್ ಬೋಸ್ಕೋ ಶಾಲೆಯ ಮೇಲಿನ ಸಭಾಂಗಣ ಬಳಸಲು ಉದ್ದೇಶಿಸಲಾಗಿದೆ.

ಮಕ್ಕಳ ವಾಸ್ತವ್ಯಕ್ಕಾಗಿ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕ್ರೀಡಾ ವಸತಿನಿಲಯಗಳನ್ನು ಸಿದ್ದವಾಗಿಟ್ಟುಕೊಳ್ಳಬೇಕು. ವಸತಿ ನಿಲಯಗಳ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ವಿಶೇಷ ಗಮನ ನೀಡಬೇಕು. ರೆಫರೀಸ್ ಗಳಿಗೆ ಹಳೆಯ ಐ.ಬಿ ಸೇರಿದಂತೆ ಸುಸಜ್ಜಿತ ವಸತಿ ನಿಲಯಗಳನ್ನು ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಸೂಚಿಸಿದರು.

ಪಂದ್ಯಾವಳಿಗಳ ನಿರ್ವಹಣೆಗೆ ಸ್ವಾಗತ ಸಮಿತಿ, ಆಹಾರ ಸಮಿತಿ, ವಸತಿ ಸಮಿತಿ ಆರೋಗ್ಯ ನಿರ್ವಹಣಾ ಸಮಿತಿ, ಟ್ರಾನ್ಸ್ ಪೋರ್ಟೇಶನ್ ಸಮಿತಿ , ವಿದ್ಯುತ್ ಸೇರಿದಂತೆ ಇನ್ನಿತರ ಅವಶ್ಯಕ ಸಮಿತಿಗಳನ್ನು ರಚಿಸಲಾಗುತ್ತಿದ್ದು, ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ಯಾವುದೇ ಲೋಪಕ್ಕೆ ಅವಕಾಶ ನೀಡದೇ ವ್ಯವಸ್ಥಿತ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚನ್ನಬಸಪ್ಪ ಮುಧೋಳ ಮಾತನಾಡಿ, ರಾಜ್ಯ ಮಟ್ಟದ ಈ ಟೇಕ್ವಾಂಡೋ ಸ್ಪರ್ಧೆಯಲ್ಲಿ 14 ವಯೋಮಾನದ ಬಾಲಕ, ಬಾಲಕಿಯರು ಇದೇ ಅ. 7 ರಂದು ಬೆಳಿಗ್ಗೆ 9 ಗಂಟೆಗೆ ವರದಿ ಮಾಡಿಕೊಳ್ಳಬೇಕು.

(ತೂಕ: ಮಧ್ಯಾಹ್ನ 12ಗಂಟೆಗೆ,ಅದರಂತೆ, 17 ವಯೋಮಾನರೊಳಗಿನ ಬಾಲಕ, ಬಾಲಕಿಯರು ಅ.8 ರಂದು ವರದಿ ಮಾಡಿಕೊಳ್ಳಬೇಕು

(ತೂಕ: ಮಧ್ಯಾಹ್ನ 12 ಗಂಟೆಗೆ) ಎಂದು ಅವರು ಹೇಳಿದರು.

ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

-

ಫೋಟೊ: 4ವೈಡಿಆರ್‌7

ರಾಜ್ಯಮಟ್ಟದ ಟೇಕ್ವಾಂಡೋ ಪಂದ್ಯಾವಳಿ ಹಮ್ಮಿಕೊಳ್ಳುವ ಕುರಿತು, ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಕಲಿ ಮತದಾರರ ಶುದ್ಧೀಕರಣಕ್ಕೆ ಎಸ್‌ಐಆರ್ ಅಗತ್ಯ: ಯತ್ನಾಳ
₹5 ಕೋಟಿ ವೆಚ್ಚದಲ್ಲಿ ಬ್ಯಾಡ್ಮಿಂಟನ್ ಕೋರ್ಟ್, ಈಜುಕೊಳ: ಶಾಸಕ ಮಂಜುನಾಥ್‌