ಇಂದು ರಜೆ ಮಾಡಿ ರಾಮೋತ್ಸವದಲ್ಲಿ ಭಾಗವಹಿಸಿ: ಯಶ್ಪಾಲ್‌ ಕರೆ

KannadaprabhaNewsNetwork | Published : Jan 22, 2024 2:16 AM

ಸಾರಾಂಶ

ರಜೆ ನೀಡದ ಸಿದ್ದರಾಮಯ್ಯ ಸರ್ಕಾರ ಹಿಂದು ವಿರೋಧಿ ಧೋರಣೆ ಹೊಂದಿದೆ, ರಜೆ ಘೋಷಣೆ ಮಾಡದೆ ಹಿಂದುಗಳ ಭಾವನೆ ಜೊತೆ ಚೆಲ್ಲಾಟ ಆಡುತ್ತಿದೆ, ದೇಶದ ಹಲವಾರು ರಾಜ್ಯಗಳು ರಜೆ ಘೋಷಿಸಿದರೂ ಕರ್ನಾಟಕ ರಜೆ ನೀಡಿಲ್ಲ ಎಂದು ಯಶ್ಪಾಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿ

ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆಗೆ ಪ್ರಯುಕ್ತ ನಡೆಯುತ್ತಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉಡುಪಿ ಜಿಲ್ಲೆಯಲ್ಲಿ ಶಾಲಾ ಕಾಲೇಜು ಸರ್ಕಾರಿ ಇಲಾಖೆಗಳಿಗೆ ಸರ್ಕಾರ ರಜೆ ನೀಡದಿರುವ ಬಗ್ಗೆ ಉಡುಪಿ ಶಾಸಕ ಯಶಪಾಲ್ ಸುವರ್ಣ ತೀವ್ರ ಆಸಮಾಧಾನ ವ್ಯಕ್ತಪಡಿಸಿದ್ದಾರೆ.ಮಾತ್ರವಲ್ಲ ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಸ್ವಯಂರಜೆ ಪಡೆದು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕರೆ ನೀಡಿದ್ದಾರೆರಜೆ ನೀಡದ ಸಿದ್ದರಾಮಯ್ಯ ಸರ್ಕಾರ ಹಿಂದು ವಿರೋಧಿ ಧೋರಣೆ ಹೊಂದಿದೆ, ರಜೆ ಘೋಷಣೆ ಮಾಡದೆ ಹಿಂದುಗಳ ಭಾವನೆ ಜೊತೆ ಚೆಲ್ಲಾಟ ಆಡುತ್ತಿದೆ, ದೇಶದ ಹಲವಾರು ರಾಜ್ಯಗಳು ರಜೆ ಘೋಷಿಸಿದರೂ ಕರ್ನಾಟಕ ರಜೆ ನೀಡಿಲ್ಲ ಎಂದವರು ಆಕ್ರೋಷ ವ್ಯಕ್ತಪಡಿಸಿದ್ದಾರೆರಾಮೋತ್ಸವದಲ್ಲಿ ಭಾಗವಹಿಸಲು ರಜೆ ಪಡೆದವರ ವಿರುದ್ಧ ಕ್ರಮ ಕೈಗೊಂಡರೆ ಶಾಸಕನಾಗಿ ತಾನು ಅವರ ಜೊತೆಗೆ ನಿಲ್ಲುತ್ತೇನೆ ಎಂದವರು ಹೇಳಿದ್ದಾರೆ.ಶಾಸಕ ಯಶ್ಪಾಲ್ ಸುವರ್ಣ ನೇತೃತ್ವದಲ್ಲಿ ಬಡಕುಟುಂಬಕ್ಕೆ ಮನೆ ಹಸ್ತಾಂತರ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಲೋಕಾರ್ಪಣೆಯ ಸಂಭ್ರಮಾಚರಣೆಯನ್ನು ವಿಶಿಷ್ಟವಾಗಿಸುವ ನಿಟ್ಟಿನಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ ಜ. 22 ರಂದು ಶ್ರೀ ಕೃಷ್ಣ ಮಠದಲ್ಲಿ ರಾಮೋತ್ಸವ - ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿರುವುದಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಬೆಳಿಗ್ಗೆ 8 ಗಂಟೆಯಿಂದ 1 ಗಂಟೆಯವರೆಗೆ ಮಧ್ವ ಮಂಟಪದಲ್ಲಿ ವಿವಿಧ ಭಜನಾ ತಂಡಗಳಿಂದ ಭಜನಾ ಸಂಕೀರ್ತನೆ, ಭಕ್ತಾಭಿಮಾನಿಗಳಿಗೆ ಶ್ರೀರಾಮ ಮಂದಿರದಲ್ಲಿ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ಎಲ್.ಇ.ಡಿ. ಪರದೆ ವ್ಯವಸ್ಥೆ ಮಾಡಲಾಗಿದ್ದು, ಶಾಸಕರ ವತಿಯಿಂದ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರಿಗೆ ಹಾಲು ಪಾಯಸ ಸೇವೆ ಹಾಗೂ ಮಧ್ಯಾಹ್ನ 1 ಗಂಟೆಗೆ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಕರಸೇವಕರಾಗಿ ಸಲ್ಲಿಸಿದ್ದ ಕಾರ್ಯಕರ್ತರಿಗೆ ಗೌರವಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಬಡ ಕುಟುಂಬಕ್ಕೆ ಮನೆ: ಅಲ್ಲದೇ ಅಂದು ಕಲ್ಯಾಣಪುರ ಮೂಡು ತೋನ್ಸೆ ಗ್ರಾಮದ ಶ್ರೀ ಬೋಗ್ರ ಬೆಲ್ಚಡ ಅವರಿಗೆ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಹಿಂದೂ ಯುವಸೇನೆ ಉಡುಪಿ ನಗರ ಅಧ್ಯಕ್ಷ ಸುನೀಲ್ ನೇಜಾರ್ ಸಂಚಾಲಕತ್ವದಲ್ಲಿ ಶ್ರೀ ರಾಮ ಭಕ್ತರು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನಿರ್ಮಿಸಲ್ಪಟ್ಟ ನೂತನ ಮನೆ “ಅಯೋಧ್ಯೆ”ಯನ್ನು ಹಸ್ತಾಂತರಿಸುವ ಮೂಲಕ ರಾಮ ರಾಜ್ಯದ ಕನಸು ಸಾಕಾರಗೊಳಿಸುವ ಆಶಯ ಹೊಂದಿರುವುದಾಗಿ ಯಶ್ ಪಾಲ್ ತಿಳಿಸಿದ್ದಾರೆ.

Share this article