ಸಾರಿಗೆ ಅಧಿಕಾರಿಗಳ ಕರ್ತವ್ಯಲೋಪ ವಿರುದ್ಧ ಕ್ರಮ ಕೈಗೊಳ್ಳಿ

KannadaprabhaNewsNetwork |  
Published : Mar 07, 2025, 12:47 AM IST
ಕ್ಯಾಪ್ಷನ6ಕೆಡಿವಿಜಿ41 ದಾವಣಗೆರೆಯಲ್ಲಿ ಕರ್ನಾಟಕ ಚಾಲಕರ ಒಕ್ಕೂಟದಿಂದ ಉಪವಿಭಾಗಾಧಿಕಾರಿಗಳ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. | Kannada Prabha

ಸಾರಾಂಶ

ದಾವಣಗೆರೆಯ ಸಾರಿಗೆ ಅಧಿಕಾರಿ ಕರ್ತವ್ಯಲೋಪ ಎಸಗಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಪವಿಭಾಗಾಧಿಕಾರಿಗೆ ಕರ್ನಾಟಕ ಚಾಲಕರ ಒಕ್ಕೂಟ ಮನವಿ ಸಲ್ಲಿಸಿತು.

- ಅನಧಿಕೃತ ರ್ಯಾಪಿಡೋ ಬೈಕ್ ಟ್ಯಾಕ್ಸಿ ಬಂದ್‌ಗೆ ಕರ್ನಾಟಕ ಚಾಲಕರ ಒಕ್ಕೂಟ ಆಗ್ರಹ - - - ಕನ್ನಡಪ್ರಭ ವಾರ್ತೆ ದಾವಣಗೆರೆ ದಾವಣಗೆರೆಯ ಸಾರಿಗೆ ಅಧಿಕಾರಿ ಕರ್ತವ್ಯಲೋಪ ಎಸಗಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಪವಿಭಾಗಾಧಿಕಾರಿಗೆ ಕರ್ನಾಟಕ ಚಾಲಕರ ಒಕ್ಕೂಟ ಮನವಿ ಸಲ್ಲಿಸಿತು.

ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ಬಿ. ಅಂಜುಕುಮಾರ್ ಮಾತನಾಡಿ, ಒಂದು ತಿಂಗಳಿಂದ ನಗರದಲ್ಲಿ ಅನಧಿಕೃತ ರ್ಯಾಪಿಡೋ ಬೈಕ್ ಟ್ಯಾಕ್ಸಿ ಕಾರ್ಯನಿರ್ವಹಿಸುತ್ತಿವೆ. ಈ ಸೇವೆ ರದ್ದುಗೊಳಿಸುವಂತೆ ಕೋರಿ ಕಳೆದ ತಿಂಗಳು ಸಾರಿಗೆ ಇಲಾಖೆಗೆ ಮನವಿ ನೀಡಲಾಗಿತ್ತು. ಎರಡು ಬಾರಿ ಪತ್ರಿಕಾಗೋಷ್ಠಿ ನಡೆಸಿ ಅನಧಿಕೃತ ಬೈಕ್, ಟ್ಯಾಕ್ಸಿಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದೇವೆ. ಆದರೆ, ಇಂದಿಗೂ ಸಾರಿಗೆ ಅಧಿಕಾರಿಗಳು ಯಾವುದೇ ಕಾರ್ಯಾಚರಣೆ ನಡೆಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾರಿಗೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಗರದಲ್ಲಿ ಅವ್ಯಾಹತವಾಗಿ ಅನಧಿಕೃತ ಬೈಕ್ ಟ್ಯಾಕ್ಸಿಗಳು ಸಂಚರಿಸುತ್ತಿವೆ. ಇದರಿಂದ ನಮ್ಮಂತಹ ಆಟೋ ಚಾಲಕರಿಗೆ ತೊಂದರೆಯುಂಟಾಗಿದೆ. ಸದರಿ ವಿಚಾರವಾಗಿ ಸಾರಿಗೆ ಅಧಿಕಾರಿಗಳು ಕ್ರಮ ಕೈಗೊಳ್ಳದೇ ಇರುವುದರಿಂದ ಗುರುವಾರ ಮಧ್ಯಾಹ್ನ 12.30ರ ಸುಮಾರಿನಲ್ಲಿ ಅನಧಿಕೃತ ರ್ಯಾಪಿಡೋ ಬೈಕ್ ಟ್ಯಾಕ್ಸಿಗಳು ಸಕ್ರಿಯವಾಗಿರುವುದು ಸಾಕ್ಷಿ ಸಮೇತ ಸಾಬೀತುಪಡಿಸಲು ಸಾರಿಗೆ ಇಲಾಖೆಗೆ ತೆರಳಿದ್ದೆವು. ಸ್ಥಳದಲ್ಲೇ ಆನಧಿಕೃತ ರಾಪಿಡೋ ಬೈಕ್ಸ್ ಟ್ಯಾಕ್ಸಿಯನ್ನು ಸಾರಿಗೆ ಅಧಿಕಾರಿಗಳಾದ ಪ್ರಮುಥೇಶ್ ಅವರಿಗೆ ತೋರಿಸಲು ಅವರ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮನವಿ ಮಾಡಿದೆವು. ಆದರೆ, ಸ್ಪಂದಿಸದೇ ಕರ್ತವ್ಯಲೋಪ ಎಸಗಿದ್ದಾರೆ ಎಂದು ಕಿಡಿಕಾರಿದರು.

ಅಧಿಕಾರಿ ಪ್ರಮುಥೇಶ್‌ ವಿರುದ್ಧ ಕರ್ತವ್ಯಲೋಪದಡಿ ಕ್ರಮ ಕೈಗೊಳ್ಳಬೇಕು. ನಗರದ ಆಟೋ ಚಾಲಕರು ಹಾಗೂ ಕಾರು ಚಾಲಕರಿಗೆ ಮಾರಕವಾಗಿರುವ ಅನಧಿಕೃತ ರ್ಯಾಪಿಡೋ ಬೈಕ್ ಟ್ಯಾಕ್ಸಿ ವಿರುದ್ಧ ಕಾನೂನು ಕ್ರಮ ಕೈಗೊಂಡು ನಮಗೆ ನ್ಯಾಯ ಕೊಡಿಸಬೇಕೆಂದು ಮನವಿ ಮಾಡಿದರು.

ಉಪವಿಭಾಗಾಧಿಕಾರಿ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭ ರಾಜ್ಯ ಸಂಚಾಲಕ ಡಿ.ಆರ್. ಅರವಿಂದಾಕ್ಷ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ, ಕಾರ್ಯಾಧ್ಯಕ್ಷರಾದ ಜಯರಾಮ್, ಶಿವಕುಮಾರ್, ಎಚ್.ಹರೀಶ್, ಪದಾಧಿಕಾರಿಗಳು ಹಾಜರಿದ್ದರು.

- - - -6ಕೆಡಿವಿಜಿ41.ಜೆಪಿಜಿ:

ದಾವಣಗೆರೆಯಲ್ಲಿ ಕರ್ನಾಟಕ ಚಾಲಕರ ಒಕ್ಕೂಟದಿಂದ ಉಪವಿಭಾಗಾಧಿಕಾರಿ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ