ಪಿಒಪಿ ಗಣೇಶನನ್ನು ಪ್ರತಿಷ್ಠಾಪಿಸದಂತೆ ಕ್ರಮ ಕೈಗೊಳ್ಳಿ

KannadaprabhaNewsNetwork |  
Published : Sep 03, 2026, 02:00 AM IST
ಚಿತ್ರ 2ಬಿಡಿಆರ್‌4ಬೀದರ್‌ ಡಿಸಿಸಿ ಬ್ಯಾಂಕ್‌ಗೆ ಮುತ್ತಿಗೆ ಹಾಕಿ ಬಿಎಸ್‌ಎಸ್‌ಕೆ ಕಾರ್ಖಾನೆ ಹರಾಜು ಕೈಬಿಡುವಂತೆ ರೈತರು ಪ್ರತಿಭಟಿಸಿದರು | Kannada Prabha

ಸಾರಾಂಶ

ಈ ಬಾರಿಯ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ (ಪಿಒಪಿ) ಗಣೇಶ ಮೂರ್ತಿಗಳನ್ನು ಮತ್ತು ರಾಸಾಯನಿಕ-ಭಾರ ಲೋಹ ಆಧಾರಿತ ಬಣ್ಣಗಳಿಂದ ಅಲಂಕರಿಸಿದ ಮೂರ್ತಿಗಳನ್ನು ಪ್ರತಿಷ್ಠಾಪಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್‌ ಮಹಾ ನಿರ್ದೇಶಕರಿಗೆ ಮತ್ತು ನಗರ ಪೊಲೀಸ್‌ ಆಯುಕ್ತರಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪತ್ರ ಬರೆದು ತಿಳಿಸಿದೆ.

-ಪೊಲೀಸ್‌ ಮಹಾನಿರ್ದೇಶಕರಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಪತ್ರ

ಕನ್ನಡಪ್ರಭ ವಾರ್ತೆ ಬೆಂಗಳೂರು

ಈ ಬಾರಿಯ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ (ಪಿಒಪಿ) ಗಣೇಶ ಮೂರ್ತಿಗಳನ್ನು ಮತ್ತು ರಾಸಾಯನಿಕ-ಭಾರ ಲೋಹ ಆಧಾರಿತ ಬಣ್ಣಗಳಿಂದ ಅಲಂಕರಿಸಿದ ಮೂರ್ತಿಗಳನ್ನು ಪ್ರತಿಷ್ಠಾಪಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್‌ ಮಹಾ ನಿರ್ದೇಶಕರಿಗೆ ಮತ್ತು ನಗರ ಪೊಲೀಸ್‌ ಆಯುಕ್ತರಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪತ್ರ ಬರೆದು ತಿಳಿಸಿದೆ.

ಗಣೇಶ ಹಬ್ಬದ ಸಂದರ್ಭದಲ್ಲಿ ಪಿಒಪಿ ಗಣೇಶ ಮೂರ್ತಿ ಬಳಕೆಯಿಂದ ಜಲಮೂಲಗಳ ಮಾಲಿನ್ಯ, ಜಲಚರ ಮೇಲೆ ದುಷ್ಪರಿಣಾಮ ಹಾಗೂ ಪರಿಸರಕ್ಕೆ ಹಾನಿಯುಂಟಾಗುತ್ತದೆ. ಹೀಗಾಗಿ ಸಾರ್ವಜನಿಕರು ಮತ್ತು ಗಣೇಶೋತ್ಸವ ಆಯೋಜಕರು ತಮ್ಮ ಪೆಂಡಾಲ್‌ಗಳಲ್ಲಿ ಪಿಒಪಿ ಗಣೇಶ ಮೂರ್ತಿ ಹಾಗೂ ರಾಸಾಯನಿಕ-ಭಾರ ಲೋಹ ಆಧಾರಿತ ಬಣ್ಣಗಳಿಂದ ಅಲಂಕರಿಸಿದ ಮೂರ್ತಿಗಳನ್ನು ಪ್ರತಿಷ್ಠಾಪಿಸದಂತೆ ಅರಿವು ಮೂಡಿಸಬೇಕಿದೆ.

ಅಲ್ಲದೆ ಪರಿಸರ ಸಂರಕ್ಷಣೆ ದೃಷ್ಟಿಯಿಂದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಅನುಮತಿ ನೀಡುವ ಸಂದರ್ಭದಲ್ಲಿ ಪಿಒಪಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಅನುಮತಿ ನೀಡದೇ ಕೇವಲ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸಲು ಅನುಮತಿ ನೀಡಬೇಕು. ಜತೆಗೆ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಅನುಮತಿ ಕೋರಿ ಬರುವವರಿಗೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಲು ಅರಿವು ಮೂಡಿಸಬೇಕು. ಈ ಕುರಿತಂತೆ ತಮ್ಮ ಅಧೀನದಲ್ಲಿರುವ ಎಲ್ಲ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಡಿಜಿ-ಐಜಿಪಿ ಹಾಗೂ ನಗರ ಪೊಲೀಸ್‌ ಆಯುಕ್ತರಿಗೆ ಬರೆದಿರುವ ಪತ್ರದಲ್ಲಿ ಮಂಡಳಿಯು ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೋದಿ ಜನ್ಮದಿನ: ಒಂದು ತಿಂಗಳು ಸೇವಾ ಸಂಕಲ್ಪ ಅಭಿಯಾನ
ಗದಗ-ಧಾರವಾಡ ಗಡೀಲಿ ಅಕ್ರಮ ಡೀಸೆಲ್‌ ದಂಧೆ!