ಅಧಿಕ ಶುಲ್ಕ ಪಡೆಯುವ ಖಾಸಗಿ ಕಾಲೇಜುಗಳ ವಿರುದ್ಧ ಕ್ರಮವಹಿಸಿ

KannadaprabhaNewsNetwork |  
Published : Aug 26, 2026, 01:30 AM IST
ಚಿತ್ರ 25ಬಿಡಿಆರ್52 | Kannada Prabha

ಸಾರಾಂಶ

ವಿದ್ಯಾರ್ಥಿಗಳಿಂದ ಅಧಿಕ ಶುಲ್ಕ ಪಡೆಯುತ್ತಿರುವ ಜಿಲ್ಲೆಯ ಖಾಸಗಿ ಪದವಿ ಪೂರ್ವ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.

ಕನ್ನಡಪ್ರಭ ವಾರ್ತೆ ಬೀದರ್

ವಿದ್ಯಾರ್ಥಿಗಳಿಂದ ಅಧಿಕ ಶುಲ್ಕ ಪಡೆಯುತ್ತಿರುವ ಜಿಲ್ಲೆಯ ಖಾಸಗಿ ಪದವಿ ಪೂರ್ವ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಒತ್ತಾಯಿಸಿದೆ.

ಬೆಂಗಳೂರಿನಲ್ಲಿ ಮಂಗಳವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ವೇದಿಕೆಯ ಪದಾಧಿಕಾರಿಗಳು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿ, ಜಿಲ್ಲೆಯ ಕೆಲ ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ನಿಯಮ ಗಾಳಿಗೆ ತೋರುತ್ತಿವೆ. ನೀಟ್, ಕೆಸಿಇಟಿ, ಜೆಇಇ ತರಬೇತಿ ಹೆಸರಲ್ಲಿ ವಿದ್ಯಾರ್ಥಿ ಗಳಿಂದ ಲಕ್ಷಾಂತರ ರೂಪಾಯಿ ಶುಲ್ಕ ವಸೂಲಿ ಮಾಡುತ್ತಿವೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಸೋಮನಾಥ ಮುಧೋಳ ಸಚಿವರ ಗಮನ ಸೆಳೆದರು.

ಪೋಷಕರು ಶುಲ್ಕ ಕಟ್ಟಲು ವಿಳಂಬ ಮಾಡಿದರೆ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಮಾನಸಿಕವಾಗಿ ಕುಗ್ಗುತ್ತಿದ್ದು, ಅವರಿಗೆ ಏಕಾಗ್ರತೆಯಿಂದ ವ್ಯಾಸಂಗ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ದೂರಿದರು. ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆಯಲ್ಲಿ ಉಪ ನಿರ್ದೇಶಕ, ವಿಷಯ ಪರಿವೀಕ್ಷಕ ಸೇರಿ 14 ಹುದ್ದೆಗಳು ಖಾಲಿ ಇರುವ ಕಾರಣ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಯ ಹಿತದೃಷ್ಟಿಯಿಂದ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಬೇಡಿಕೆ ಮಂಡಿಸಿದರು. ವೇದಿಕೆಯ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಪ್ರಧಾನ ಸಂಚಾಲಕ ಸಚಿನ್ ಗಾಣಗೇರ, ಮುಖಂಡ ಗಣಪತಿ ಖಡಕೆ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಕ್ಷ ಸಂಘಟನೆಗೆ ಭಾರತ್ ಜೋಡೋ ಸಂಘ ಸಹಕಾರಿ: ಪಿ.ರವಿಕುಮಾರ್
ಬೆಂಗಳೂರು ಜಲ ಮಂಡಳಿ ಅಧಿಕಾರಿಗಳ ಕಳ್ಳಾಟ...!