ಲೇಖಕ, ಪ್ರಕಾಶಕರ ವಿರುದ್ಧ ಕ್ರಮಕೈಗೊಳ್ಳಿ

KannadaprabhaNewsNetwork |  
Published : Nov 21, 2026, 03:00 AM IST
ಬಸವ | Kannada Prabha

ಸಾರಾಂಶ

ಧರ್ಮಕ್ಕೆ ಹೊಸ ಆಯಾಮ ನೀಡಿದ ಜಗಜ್ಯೋತಿ ಬಸವಣ್ಣನವರ ವಿರುದ್ಧ ಅವಹೇಳನಕಾರಿ ಲೇಖನ ಬರೆಯುವುದನ್ನು ಯಾರಿಂದಲೂ ಸಹಿಸಲು ಸಾಧ್ಯವಿಲ್ಲ ಎಂದು ಮುಖಂಡ ಅಶೋಕ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಗೋಕಾಕ

ಧರ್ಮಕ್ಕೆ ಹೊಸ ಆಯಾಮ ನೀಡಿದ ಜಗಜ್ಯೋತಿ ಬಸವಣ್ಣನವರ ವಿರುದ್ಧ ಅವಹೇಳನಕಾರಿ ಲೇಖನ ಬರೆಯುವುದನ್ನು ಯಾರಿಂದಲೂ ಸಹಿಸಲು ಸಾಧ್ಯವಿಲ್ಲ ಎಂದು ಮುಖಂಡ ಅಶೋಕ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಶೂನ್ಯ ಸಂಪಾದನ ಮಠದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಲ್ಲಿ ಮಾತನಾಡಿ, ಮಹಾನ್ ಶರಣರ ಕುರಿತು ಬಸವ ಮಂಟಪ ಎಂಬ ಪುಸ್ತಕದಲ್ಲಿ ಅವಹೇಳನಕಾರಿ ಲೇಖನ ಪ್ರಕಟಿಸುವ ಮೂಲಕ ಲೇಖಕ ರವಿ ಹಂಜ್ ಹಾಗೂ ಪತ್ರಿಕೆಯ ಸಂಪಾದಕ ಜನರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದಾರೆ ಎಂದು ಆರೋಪಿಸಿದರು. ಈ ಕೃತಿಯ ಲೇಖಕ ಹಾಗೂ ಸಂಪಾದಕರನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಸರ್ಕಾರ ಈಗಾಗಲೇ ಕೈಗೊಂಡಿರುವ ಕ್ರಮ ತಾತ್ಕಾಲಿಕವಾಗಿರದೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.ಲೇಖಕರು ಹಾಗೂ ಭಾಷಣಕಾರರು ತಮ್ಮ ಬರಹ ಮತ್ತು ಭಾಷಣಗಳಲ್ಲಿ ಜನಪರ ನಿಲುವು ಹೊಂದಿರಬೇಕು. ಯಾರ ಭಾವನೆಗಳಿಗೂ ಧಕ್ಕೆಯಾಗದಂತೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಜವಾಬ್ದಾರಿಯಿಂದ ಬಳಸಬೇಕು. ಬಸವ ಮಂಟಪ ಕೃತಿಯಲ್ಲಿ ಇತಿಹಾಸ ತಿರುಚುವ ರೀತಿಯ ಬರಹಗಳಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕೂಡಲೇ ಪ್ರಕರಣ ದಾಖಲಿಸಿ, ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡ ಸಂಜಯ ಪಾಟೀಲ (ಕರೋಶಿ), ವಿವಾದಿತ ಬಸವ ಮಂಟಪ ಪುಸ್ತಕದ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ ಬಿದರಿ ನಡೆ ಕೂಡ ಜನರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದೆ. ಅವರು ನೈತಿಕ ಹೊಣೆ ಹೊತ್ತು ಕೂಡಲೇ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಶೂನ್ಯ ಸಂಪಾದನ ಮಠದ ಬಸವಪ್ರಭು ದೇವರು, ಮಹಾಂತೇಶ ತಾವಂಶಿ, ಬಸನಗೌಡ ಪಾಟೀಲ, ಮಲ್ಲಿಕಾರ್ಜುನ ಈಟಿ, ಮಲ್ಲಿಕಾರ್ಜುನ ಕಲ್ಲೋಳಿ, ಚಂದ್ರಶೇಖರ ಅಕ್ಕಿ, ಶಶಿಧರ ದೇಮಶೆಟ್ಟಿ, ಶಂಕರ ಗೋರೋಶಿ, ಸಿ.ಡಿ.ಹುಕ್ಕೇರಿ, ಚನ್ನಬಸಪ್ಪ ಬಿಜಲಿ, ಈಶ್ವರ ಬಾಗೋಜಿ, ಅನುಸುಯಾ ಪಾಟೀಲ ಸೇರಿ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೇಸಿಗೆಗೆ ನೀರು ಆಪೋಶನ: ಜಲಕ್ಷಾಮ ಭೀತಿ !
371ಜೆ ಹೋರಾಟಕ್ಕೆ ಕಾಲೇಜು ವಿದ್ಯಾರ್ಥಿಗಳ ಅಭೂತಪೂರ್ವ ಬೆಂಬಲ