ಕಳಪೆ ಗೋವಿನಜೋಳ ಬಿತ್ತಿ ನಿರೀಕ್ಷಿತ ಬೆಳೆ ಬಂದಿಲ್ಲ. ಬೀಜ ಮಾರಾಟ ಮಾಡಿದ ಕಂಪನಿ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಯಿತು.
ನವಲಗುಂದ: ಕಳಪೆ ಗೋವಿನಜೋಳ ಬಿತ್ತಿ ನಿರೀಕ್ಷಿತ ಬೆಳೆ ಬಂದಿಲ್ಲ. ಬೀಜ ಮಾರಾಟ ಮಾಡಿದ ಕಂಪನಿ ವಿರುದ್ಧ ಶಿಸ್ತು ಕ್ರಮಕ್ಕೆ ಒತ್ತಾಯಿಸಿ ಮಂಗಳವಾರ ಮಹದಾಯಿ, ಮಲಪ್ರಭಾ ಕಳಸಾ ಬಂಡೂರಿ ರೈತ ಹೋರಾಟ ಒಕ್ಕೂಟದಿಂದ ಹುಬ್ಬಳ್ಳಿ- ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರೈತ ಮುಖಂಡರಾದ ಲೋಕನಾಥ ಹೆಬಸೂರ, ರಘುನಾಥ ನಡುವಿನಮನಿ, ಶಂಕರಪ್ಪ ಅಂಬಲಿ, ಈ ಬಾರಿ ಮುಂಗಾರು ಮಳೆ ಆಶಾದಾಯಕವಾಗಿದ್ದರಿಂದ ತಾಲೂಕಿನಾದ್ಯಂತ ಗೋವಿನ ಬೆಳೆ ಹೆಚ್ಚಾಗಿ ಬಿತ್ತನೆಯಾಗಿದೆ. ಆದರೆ, ಬಿತ್ತಿದ ಬೀಜಗಳನ್ನು ಮಾರಾಟ ಮಾಡಿದ ಕಂಪನಿಯವರು ಕಳಪೆ ಬೀಜ ಪೂರೈಸಿದ್ದರಿಂದ ರೈತರಿಗೆ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದೆ. ಸರ್ಕಾರ ಕೂಡಲೇ ಮಧ್ಯ ಪ್ರವೇಶಿಸಿ ಕಳಪೆ ಬೀಜ ಪೂರೈಕೆ ಮಾಡಿದ ಕಂಪನಿಯಿಂದ ಎಕರೆಗೆ ತಲಾ ₹50 ಸಾವಿರ ಪರಿಹಾರ ನೀಡಲು ಸೂಚಿಸಬೇಕು. ಜತೆಗೆ ಆ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಒಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ಶಾಸಕ ಎನ್.ಎಚ್. ಕೋನರಡ್ಡಿ ಮನವಿ ಸ್ವೀಕರಿಸಿ ಈ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಜರುಗಿಸುವ ಭರವಸೆ ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.