ಬಂಜಾರಾ ಸಮಾಜ ನಿಂದಿಸಿದ ಅಧಿಕಾರಿ ವಿರುದ್ಧ ಕ್ರಮ ಜರುಗಿಸಿ

KannadaprabhaNewsNetwork |  
Published : Jul 30, 2024, 12:45 AM ISTUpdated : Jul 30, 2024, 12:46 AM IST
ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಸುದ್ದಿಗೋಷ್ಠಿ. | Kannada Prabha

ಸಾರಾಂಶ

ಓರ್ವ ಅಧಿಕಾರಿ ಬಂಜಾರಾ ಸಮಾಜಕ್ಕೆ ನಿಂದನೆ ಮಾಡಿದ್ದಾನೆ. ಸರ್ಕಾರಿ ಅಧಿಕಾರಿ ಜಾತಿ ನಿಂದನೆ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ? ಇದರಿಂದ ನಮ್ಮ ಸಮಾಜದ ಜನರ ಮನಸ್ಸಿಗೆ ನೋವಾಗಿದೆ. ಆತನ ಮೇಲೆ ಕಾನೂನು ರೀತಿಯಲ್ಲಿ ಶಿಕ್ಷೆ ಆಗಬೇಕಿದೆ ಎಂದು ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಜಿಲ್ಲಾಧ್ಯಕ್ಷ ರಾಜು ಜಾಧವ್‌ ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಓರ್ವ ಅಧಿಕಾರಿ ಬಂಜಾರಾ ಸಮಾಜಕ್ಕೆ ನಿಂದನೆ ಮಾಡಿದ್ದಾನೆ. ಸರ್ಕಾರಿ ಅಧಿಕಾರಿ ಜಾತಿ ನಿಂದನೆ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ? ಇದರಿಂದ ನಮ್ಮ ಸಮಾಜದ ಜನರ ಮನಸ್ಸಿಗೆ ನೋವಾಗಿದೆ. ಆತನ ಮೇಲೆ ಕಾನೂನು ರೀತಿಯಲ್ಲಿ ಶಿಕ್ಷೆ ಆಗಬೇಕಿದೆ ಎಂದು ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಜಿಲ್ಲಾಧ್ಯಕ್ಷ ರಾಜು ಜಾಧವ್‌ ಆಗ್ರಹಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂಡಿ ತಾಲೂಕಿನ ಅಥರ್ಗಾ ಗ್ರಾಮ ಲೆಕ್ಕಾಧಿಕಾರಿ ಯುವರಾಜ ನಿಂಬರಗಿ ಎಂಬುವವರು ರಾಮತೀರ್ಥ ತಾಂಡಾ ನಿವಾಸಿ ರವಿ ರಾಠೋಡ ಎಂಬುವವರಿಗೆ ಜಾತಿ ನಿಂದನೆ ಮಾಡಿದ್ದಾರೆ. ಇಬ್ಬರೂ ಫೋನ್‌ನಲ್ಲಿ ಮಾತನಾಡುವಾಗ ಗ್ರಾಮ ಲೆಕ್ಕಾಧಿಕಾರಿ ಲಂಬಾಣಿ ಜಾತಿಯ ಮೇಲೆ ಅವಾಚ್ಯ ಶಬ್ದದಿಂದ ನಿಂದಿಸಿದ್ದರಿಂದ ಆತನ ಮೇಲೆ ಹೊರ್ತಿ ಠಾಣೆಯಲ್ಲಿ ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ತಾಲೂಕು ಅಧ್ಯಕ್ಷ ಸಂಜೀವ ಚವ್ಹಾಣ ದೂರು ದಾಖಲಿಸಿದ್ದಾರೆ ಎಂದು ತಿಳಿಸಿದರು.ಬಂಜಾರಾ ಸಮಾಜದ ಮುಖಂಡ, ಖ್ಯಾತ ಮದುಮೇಹ ತಜ್ಞ ಡಾ.ಬಾಬುರಾಜೇಂದ್ರ ನಾಯಿಕ ಮಾತನಾಡಿ, ಸಮಾನತೆಯನ್ನು ಸಾರಿದ ವಿಶ್ವಗುರು ಬಸವಣ್ಣನ ನಾಡಿನಲ್ಲಿ ನಿಂದನೆ ನಡೆಯುತ್ತಿದೆ. ಕಳೆದ ಶುಕ್ರವಾರ ಲಂಬಾಣಿ ಸಮಾಜದ ರವಿ ರಾಠೋಡ ಎಂಬಾತನ ಮೇಲೆ ಜಾತಿ ಸೂಚಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆ. ಅವರಿಬ್ಬರ ಮದ್ಯೆ ವೈಯಕ್ತಿಕವಾಗಿ ಏನೇ ತಂಟೆ ತಕರಾರು ಇರಬಹುದು. ಆದರೆ, ಸಮಾಜಕ್ಕೆ ನಿಂದನೆ ಮಾಡುವುದು ಖಂಡನೀಯ ಎಂದು ಕಿಡಿಕಾರಿದರು.ಸರ್ಕಾರ ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಳ್ಳಬೇಕಿತ್ತು, ಆದರೆ, ಈ ವಿಚಾರದಲ್ಲಿ ಆ ಕೆಲಸ ಆಗಿಲ್ಲ. ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ. ಸಮಾಜದ ವ್ಯಕ್ತಿಯನ್ನು ನಿಂದಿಸಿದ ಅಧಿಕಾರಿ ವಿರುದ್ಧ ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕು. ಮುಂದೆ ಹೀಗೆ ಆಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಅಧಿಕಾರಿ ಮೇಲೆ ಶಿಸ್ತುಕ್ರಮ ಆಗದಿದ್ದರೇ ಸಮಾಜದ ಜನರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಬಾಬು ಪವಾರ, ರಾಜು ಪವಾರ, ಸುನೀಲ ರಾಠೋಡ, ಗಣಪತಿ ರಾಠೋಡ, ವಿಶ್ವನಾಥ ರಾಠೋಡ, ಸಂಜೀವ ರಾಠೋಡ, ಸುರೇಶ ಬಿಜಾಪುರ ಉಪಸ್ಥಿತರಿದ್ದರು.

ಸರ್ಕಾರ ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಳ್ಳಬೇಕಿತ್ತು, ಆದರೆ, ಈ ವಿಚಾರದಲ್ಲಿ ಆ ಕೆಲಸ ಆಗಿಲ್ಲ. ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ. ಸಮಾಜದ ವ್ಯಕ್ತಿಯನ್ನು ನಿಂದಿಸಿದ ಅಧಿಕಾರಿ ವಿರುದ್ಧ ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕು. ಮುಂದೆ ಹೀಗೆ ಆಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಅಧಿಕಾರಿ ಮೇಲೆ ಶಿಸ್ತುಕ್ರಮ ಆಗದಿದ್ದರೇ ಸಮಾಜದ ಜನರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ.

-ಡಾ.ಬಾಬುರಾಜೇಂದ್ರ ನಾಯಿಕ,
ಬಂಜಾರಾ ಸಮಾಜದ ಮುಖಂಡ, ಖ್ಯಾತ ಮದುಮೇಹ ತಜ್ಞ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!