ಸಿಜೆಐ ಮೇಲೆ ಶೂ ಎಸೆಯಲೆತ್ನಿಸಿದವನ ವಿರುದ್ಧ ಕ್ರಮ ಕೈಗೊಳ್ಳಿ

KannadaprabhaNewsNetwork |  
Published : Oct 14, 2025, 01:00 AM IST
ಸಿಜೆಐ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲನ ವಿರುದ್ಧ ಕ್ರಮಕ್ಕೆ ರಾಷ್ಟ್ರಪತಿಗೆ ಮನವಿ | Kannada Prabha

ಸಾರಾಂಶ

ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಪರಿಶಿಷ್ಠ ಜಾತಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಅವರ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ಸುಪ್ರೀಂಕೋರ್ಟ್ ನ್ಯಾಯಾಧೀಶರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಪರಿಶಿಷ್ಠ ಜಾತಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹೆಚ್ಚುವರಿ ಜಿಲ್ಲಾಧಿಕಾರಿ ಜವರೇಗೌಡ ಅವರ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.

ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷೆ ರೇಣುಕಾದೇವಿ, ಪರಿಶಿಷ್ಠ ಜಾತಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಿ.ಕೆ.ರಾಮಸ್ವಾಮಿ ಅವರ ನೇತೃತ್ವದಲ್ಲಿ ಜಮಾಯಿಸಿದ ನೌಕರರು ಜಿಲ್ಲಾಡಳಿತ ಮುಂಭಾಗದಲ್ಲಿರುವ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕ‌ರ್ ಹಾಗೂ ಶ್ರೀ ಬಸವೇಶ್ವರರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ನಂತರ ಹೆಚ್ಚುವರಿ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷೆ ರೇಣುಕಾದೇವಿ ಮಾತನಾಡಿ. ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಾದ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ. ವಕೀಲ ರಾಕೇಶ್ ಕಿಶೋರ್ ವರ್ತನೆಯಿಂದ ನಮಗೆಲ್ಲ ನೋವಾಗಿದೆ. ಆತನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಅಧ್ಯಕ್ಷ ಸಿ.ಕೆ. ರಾಮಸ್ವಾಮಿ ಮಾತನಾಡಿ, ವಕೀಲ ರಾಕೇಶ್‌ಕಿಶೋರ್ ನ್ಯಾಯಾಧೀಶರ ಮೇಲೆ ಶೂ ಎಸೆಯವ ಪ್ರಯತ್ನ ಮಾಡಿದ್ದಾನೆ. ಇದು ಭಾರತ ಸಂವಿಧಾನ ವ್ಯವಸ್ಥೆ ತಲೆತಗ್ಗಿಸುವ ವಿಚಾರವಾಗಿದೆ. ಇದು ನ್ಯಾಯಾಂಗದ ಮೇಲೆ ಅವಿಶ್ವಾಸ ಮೂಡಿಸುವ ಘಟನೆ ಇದಾಗಿದೆ. ಇಂತಹ ಘಟನೆಯಿಂದ ಸಮಾಜದಲ್ಲಿ ಅಶಾಂತಿ ನಿರ್ಮಾಣ ಆಗುತ್ತದೆ. ಇದನ್ನು ನಮ್ಮ ಸಂಘ ತೀವ್ರವಾಗಿ ಖಂಡಿಸುತ್ತದೆ. ರಾಕೇಶ್‌ ಕಿಶೋರ್ ಹಾಗೂ ಮಧ್ಯಪ್ರದೇಶದ ವಕೀಲ ಅನಿಲ್ ಮಿಶ್ರಾ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದು ಸರಿಯಲ್ಲ. ಅಂಬೇಡ್ಕರ್ ಅವರಿಗೆ ಅಗೌರವ ತೋರಿಸಿದ್ದಾರೆ ಅವರ ಮೇಲೂ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಂ.ಶಿವಕುಮಾರ್, ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ನಿಂಗೇಗೌಡ, ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷ ಮಹೇಶ್, ಕರ್ನಾಟಕ ರಾಜ್ಯ ಹಿರಿಯ ಉಪಾಧ್ಯಕ್ಷ ಎಂ.ಡಿ.ಮಹದೇವಯ್ಯ, ಸಂಘದ ಪ್ರಧಾನ ಕಾರ್ಯದರ್ಶಿ ನಂಜುಂಡಸ್ವಾಮಿ, ಖಜಾಂಚಿ ಪುಟ್ಟಸ್ವಾಮಿ, ರವಿಕುಮಾರ್, ನಾರಾಯಣ್, ಮಹೇಂದ್ರ, ಸರ್ಕಾರಿ ನೌಕರರ ಸಂಘದ ನಂಜುಂಡ, ಜಯಶಂಕರ್, ಮುರುಗೇಶ್‌ಕುಮಾರ್, ನಟರಾಜು, ಧನಂಜಯ, ನಂಜುಂಡಸ್ವಾಮಿ, ಸುಶೀಲ, ಜಮುನಾರಾಣಿ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷ ಜಯರಾಂ, ರಾಜು ಇತರರು ಹಾಜರಿದ್ದರು.

PREV

Recommended Stories

ದೀಪಾವಳಿ ಹಬ್ಬ : ಕೆಎಸ್ಸಾರ್ಟಿಸಿಯಿಂದ 2500 ಹೆಚ್ಚುವರಿ ಬಸ್‌
ಆರೆಸ್ಸೆಸ್‌ ಚಟುವಟಿಕೆ ನಿಷೇಧ ಬಗ್ಗೆ ತಮಿಳುನಾಡು ಮಾದರಿ ಪರಿಶೀಲನೆ : ಸಿದ್ದರಾಮಯ್ಯ