ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ನಗರದ ತಮ್ಮ ಶಾಸಕರ ಕಚೇರಿಯಲ್ಲಿ ಭಾನುವಾರ ಸಂಜೆ ನೇರ ವೇತನ ಪೌರಕಾರ್ಮಿಕರಿಂದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.
1997-98ನೇ ಸಾಲಿನಿಂದ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರ ಸೇವಾ ದಾಖಲೆಗಳನ್ನು ಪರಿಶೀಲಿಸಿ, ಅವರ ಸೇವಾ ಹಿರಿತನ ಮತ್ತು ಅರ್ಹತೆಯನ್ನು ಪರಿಗಣಿಸಿ ನೇರ ನೇಮಕಾತಿಗೆ ಒಳಪಡಿಸಲು ಸರ್ಕಾರದ ನಿಯಮಾವಳಿ ಹಾಗೂ ನಿಯಮಾನುಸಾರ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು. ಪೌರಕಾರ್ಮಿಕರ ನ್ಯಾಯಯುತ ಬೇಡಿಕೆಗಳಿಗೆ ಆದ್ಯತೆ ನೀಡಬೇಕು ಎಂದು ಪಾಳಿಕೆ ಆಯುಕ್ತರಿಗೆ ಸೂಚನೆ ನೀಡಿದರು.ನಗರದ ಸ್ವಚ್ಛತೆ ಮತ್ತು ಸಾರ್ವಜನಿಕರ ಆರೋಗ್ಯದ ರಕ್ಷಣೆಯಲ್ಲಿ ಪೌರಕಾರ್ಮಿಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಯಾವುದೇ ಪ್ರತಿಕೂಲ ಪರಿಸ್ಥಿತಿಯಲ್ಲಿಯೂ ತಮ್ಮ ಆರೋಗ್ಯವನ್ನು ಲೆಕ್ಕಿಸದೆ ಸಾರ್ವಜನಿಕರ ಹಿತಕ್ಕಾಗಿ ಸೇವೆ ಸಲ್ಲಿಸುತ್ತಿರುವ ಅವರ ಶ್ರಮ ಮತ್ತು ಸೇವೆಯನ್ನು ಕಡೆಗಣಿಸಲು ಸಾಧ್ಯವಿಲ್ಲ. ಹಲವು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಹಿರಿಯ ನೇರವೇತನ ಪೌರಕಾರ್ಮಿಕರಿಗೆ ಅವರ ಸೇವೆಗೆ ತಕ್ಕ ಗೌರವ ಹಾಗೂ ನ್ಯಾಯ ದೊರೆಯಬೇಕು ಎಂಬುದು ನಮ್ಮಆಶಯವಾಗಿದೆ ಎಂದರು.